ಕರಾವಳಿ

ಶಾಸಕ ವೇದವ್ಯಾಸ್ ಕಾಮಾತ್‌ರಿಂದ ನೆರೆ ಹಾನಿಗೊಳಗಾದ ಸಂತ್ರಸ್ತರಿಗೆ ಪರಿಹಾರ ಧನ ವಿತರಣೆ

Pinterest LinkedIn Tumblr

ಮಂಗಳೂರು : ಮಂಗಳೂರು ನಗರ ದಕ್ಷಿಣ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ನೆರೆ ವಿಕೋಪದಿಂದ ಹಾನಿಗೊಳಗಾದ ಸಂತ್ರಸ್ತರ ಮನೆಗಳಿಗೆ ತೆರಳಿ ಶಾಸಕ ಡಿ ವೇದವ್ಯಾಸ ಕಾಮತ್ ಅವರು ಪರಿಹಾರ ಧನದ ಚೆಕ್ ಅನ್ನು ಹಸ್ತಾಂತರಿಸಿದರು.

ಸೆಂಟ್ರಲ್ ವಾರ್‍ಡಿನ ಗೌರಿಮಠ ರಸ್ತೆಯ ವಿಜಯ ಕುಮಾರ್ ಶೆಟ್ಟಿ ಹಾಗೂ ಜಪ್ಪಿನಮೊಗರುವಿನ ಕಟ್ಟೆಪುಣಿಯ ರವೀಂದ್ರನಾಥ ಅವರ ಮನೆಗಳಿಗೆ ತೆರಳಿ ಒಂದು ಲಕ್ಷ ರೂಪಾಯಿ ಚೆಕ್ ಅನ್ನು ಶಾಸಕ ಡಿ ವೇದವ್ಯಾಸ ಕಾಮತ್ ಅವರು ನೀಡಿದರು.

ಬಳಿಕ ಮಾತನಾಡಿದ ಅವರು ಭಾರಿ ಮಳೆಯಿಂದ ಮಂಗಳೂರು ದಕ್ಷಿಣದ ಹಲವೆಡೆ ನಾಗರಿಕರು ಸಾಕಷ್ಟು ನಷ್ಟವನ್ನು ಅನುಭವಿಸಿದ್ದಾರೆ. ತಾವು ನೂರ ಹತ್ತಕ್ಕೂ ಹೆಚ್ಚಿನ ಮನೆಗಳಿಗೆ ತೆರಳಿ ಅಲ್ಲಿನ ಪರಿಸ್ಥಿತಿಯನ್ನು ಅವಲೋಕಿಸಿದ್ದೇವೆ. ನೂರಾರು ಜನ ತಮ್ಮ ನಷ್ಟದ ಬಗ್ಗೆ ಪರಿಹಾರ ಕೋರಿ ಅರ್‍ಜಿಯನ್ನು ಸಲ್ಲಿಸಿದ್ದಾರೆ. ಅದನ್ನೆಲ್ಲ ಸಂಬಂಧಪಟ್ಟ ಅಧಿಕಾರಿಗಳು ಪರಿಶೀಲಿಸಿ ಈಗಾಗಲೇ ಪರಿಹಾರ ಧನದ ಚೆಕ್ ಅನ್ನು ನೀಡಿದ್ದಾರೆ.

ಸರಕಾರದಿಂದ ಇನ್ನಷ್ಟು ಪರಿಹಾರ ಧನದ ನಿರೀಕ್ಷೆ ಇದೆ. ಈಗಾಗಲೇ ಕಂದಾಯ ಸಚಿವ ಆರ್ ವಿ ದೇಶಪಾಂಡೆಯವರಿಗೆ ಮನವಿಯನ್ನು ಸಲ್ಲಿಸಲಾಗಿದೆ. ರಾಜ್ಯ ಸರಕಾರ ಜನರ ಸಮಸ್ಯೆಗಳನ್ನು ಗಣನೆಗೆ ತೆಗೆದುಕೊಂಡು ಹೆಚ್ಚಿನ ಮೊತ್ತವನ್ನು ಬಿಡುಗಡೆ ಮಾಡುತ್ತದೆ ಎಂದು ಅಂದುಕೊಂಡಿದ್ದೇವೆ. ಒಬ್ಬ ಶಾಸಕನ ನೆಲೆಯಲ್ಲಿ ಜನರ ಸಂಕಷ್ಟಕ್ಕೆ ಯಾವ ರೀತಿಯಲ್ಲಿ ಸ್ಪಂದಿಸಬೇಕೋ ಅದನ್ನು ಶಕ್ತಿಮೀರಿ ಪ್ರಯತ್ನಿಸಿದ್ದೇನೆ. ಆ ನಿಟ್ಟಿನಲ್ಲಿ ಕೆಲಸಗಳು ನಿರಂತರವಾಗಿ ನಡೆಯುತ್ತಿವೆ ಎಂದು ತಿಳಿಸಿದರು.

ಮೇಯರ್ ಭಾಸ್ಕರ್, ಮನಪಾ ಸದಸ್ಯೆ ಪೂರ್‍ಣಿಮಾ, ಬಿಜೆಪಿ ಮುಖಂಡರಾದ ಭಾಸ್ಕರ್ ಚಂದ್ರ ಶೆಟ್ಟಿ, ರಮೇಶ್ ಕಂಡೆಟ್ಟು, ವಸಂತ ಜೆ ಪೂಜಾರಿ ಮತ್ತು ಅಧಿಕಾರಿಗಳು ಉಪಸ್ಥಿತರಿದ್ದರು.

Comments are closed.