ಕರಾವಳಿ

ಗಾಂಜಾ ಮಾರಾಟ ಪ್ರಕರಣಕ್ಕೆ ಸಂಬಂಧಿಸಿ ನಾಲ್ವರು ಯುವಕರ ಬಂಧನ :55 ಸಾವಿರಕ್ಕೂ ಹೆಚ್ಚು ಮೌಲ್ಯದ ಸೊತ್ತು ವಶ

Pinterest LinkedIn Tumblr

ಮಂಗಳೂರು, ಜುಲೈ, 02: ಗಾಂಜಾ ಮಾರಾಟ ಪ್ರಕರಣಕ್ಕೆ ಸಂಬಂಧಿಸಿ ನಾಲ್ವರು ಯುವಕರನ್ನು ಉರ್ವಾ ಠಾಣಾ ಪೊಲೀಸರು ಬಂಧಿಸಿದ್ದಾರೆ.

ಉರ್ವದ ಮಾಡರ್ನ್ ರೈಸ್‌ಮಿಲ್ ಬಳಿ ಸಿಪಿಸಿ ಕಂಪೌಂಡ್ ನಿವಾಸಿ ಮಹೇಶ್ ಯಾನೆ ಮಾಚ (24), ಬೊಕ್ಕಪಟ್ಟಣ ರಸ್ತೆಯ ಮಠದಕಣಿಯ ರೀತೇಶ್ ಯಾನೆ ರೀತು (20), ಉರ್ವ ಲಾಂಗ್‌ಲೇನ್‌ ಬಳಿಯ ಸುದರ್ಶನ್ ಎಂ. ಯಾನೆ ಸುಧಾ (24), ಅಶೋಕ್‌ನಗರದ ಪಿ.ಕೆ. ಕಂಪೌಂಡ್ ಬಳಿಯ ರೀತೇಶ್ (21) ಬಂಧಿತ ಆರೋಪಿಗಳು.

ನಗರದ ಉರ್ವ ಮಾರಿಗುಡಿ ಬಳಿ ಯುವಕರು ಗಾಂಜಾ ಮಾರಾಟದಲ್ಲಿ ತೊಡಗಿದ್ದಾರೆ ಎಂಬ ಖಚಿತ ಮಾಹಿತಿ ಮೇರೆಗೆ ಉರ್ವಾ ಠಾಣಾ ಪೊಲೀಸರು ನಡೆಸಿದ ಕಾರ್ಯಾಚರಣೆಯಲ್ಲಿ ಈ ನಾಲ್ವರು ಯುವಕರನ್ನು ಗಾಂಜಾ ಸಮೇತಾ ವಶಕ್ಕೆ ಪಡೆದಿದ್ದಾರೆ.

ಬಂಧಿತ ಆರೋಪಿಗಳಿಂದ 1 ಕೆ.ಜಿ. 50 ಗ್ರಾಂ ಗಾಂಜಾ, 4 ಮೊಬೈಲ್‌ಗಳು ಮತ್ತು ನಗದನ್ನು ವಶಪಡಿಸಿಕೊಂಡಿದ್ದಾರೆ. ವಶಪಡಿಸಿಕೊಂಡ ಸೊತ್ತುಗಳ ಒಟ್ಟು ಮೌಲ್ಯ 55 ಸಾವಿರ ರೂ. ಎಂದು ಅಂದಾಜಿಸಲಾಗಿದೆ. ಉರ್ವ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ನಗರ ಪೊಲೀಸ್ ಕಮಿಷನರ್ ಟಿ.ಆರ್. ಸುರೇಶ್ ನಿರ್ದೇಶನದಲ್ಲಿ ಕಾನೂನು ಮತ್ತು ಸುವ್ಯವಸ್ಥೆ ವಿಭಾಗದ ಡಿಸಿಪಿ ಹನುಮಂತರಾಯ, ಅಪರಾಧ ಮತ್ತು ಸಂಚಾರ ವಿಭಾಗದ ಡಿಸಿಪಿ ಉಮಾ ಪ್ರಶಾಂತ್ ಹಾಗೂ ಕೇಂದ್ರ ಉಪವಿಭಾಗದ ಎಸಿಪಿ ಉದಯ ನಾಯಕ್ ಮಾರ್ಗದರ್ಶನದಲ್ಲಿ ನಡೆದ ಕಾರ್ಯಾಚರಣೆಯಲ್ಲಿ ಉರ್ವ ಠಾಣೆಯ ಅಧಿಕಾರಿ ಮತ್ತು ಸಿಬ್ಬಂದಿಗಳು ಪಾಲ್ಗೊಂಡಿದ್ದರು.

Comments are closed.