ಕರಾವಳಿ

ಕರಾವಳಿಯಲ್ಲಿ ಮತ್ತೆ ವರುಣನ ಆರ್ಭಟ : ರಸ್ತೆಯಲ್ಲಿ ನೀರೋ ನೀರು… ವಾಹನ ಸವಾರರ ಗೋಳು ಕೇಳುವವರು ಯಾರು..!

Pinterest LinkedIn Tumblr

ಮಂಗಳೂರು : ಕರಾವಳಿಯಲ್ಲಿ ಕಳೆದ ಮೂರು ದಿನಗಳಿಂದ ವಿರಾಮ ನೀಡಿದ್ದ ವರುಣನ ಆರ್ಭಟ ಶುಕ್ರವಾರ ಮತ್ತೆ ಮುಂದುವರೆದಿದೆ. ಕರಾವಳಿ ಜಿಲ್ಲೆಯಾದ್ಯಂತ ಶುಕ್ರವಾರ ಮುಂಜಾನೆಯಿಂದ ಮತ್ತೆ ಮಳೆ ಅಬ್ಬರ ಜೋರಾಗಿದ್ದು. ಎಡೆಬಿಡದೆ ಸುರಿಯುತ್ತಿರುವ ಮಳೆಯಿಂದ ರಸ್ತೆ ಮೇಲೆ ನೀರು ಹರಿಯುತ್ತಿರುವುದರಿಂದ ವಾಹನ ಸವಾರರು ಪರದಾಡುತ್ತಿದ್ದಾರೆ.ಪಾದಾಚಾರಿಗಳು ರಸ್ತೆಯಲ್ಲಿ ನಡೆದಾಡಲು ಕಷ್ಟಪಡುತ್ತಿದ್ದಾರೆ.

ಇಂದಿನಿಂದ ಪುನರ್ವಸು ನಕ್ಷತ್ರ ಆರಂಭವಾಗಿದೆ. ಈ ಹಿನ್ನೆಲೆಯಲ್ಲಿ ಕರಾವಳಿಯಾದ್ಯಂತ ಧೋ ಎಂದು ಮಳೆ ಸುರಿಯಲಾರಂಭಿಸಿದೆ. ಕರಾವಳಿಯ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಭಾರೀ ಮಳೆ ಸುರಿಯುತ್ತಿದೆ.ಪುನರ್ವಸು ನಕ್ಷತ್ರ ಆರಂಭದ ಹಿನ್ನಲೆಯಲ್ಲಿ ಕರಾವಳಿಯಲ್ಲಿ‌ ಭಾರೀ ಮಳೆ ಸುರಿತ್ತಿದೆ ಎಂದು ಹೇಳಲಾಗಿದೆ.

ಒಂದು‌ ವಾರದಿಂದ ಕರಾವಳಿಯಲ್ಲಿ ಕಣ್ಣಾಮುಚ್ಚಾಲೆ ಆಡುತ್ತಿದ್ದ ಮಳೆರಾಯ ಮತ್ತೇ ಬಿರುಸುಗೊಂಡಿದ್ದಾನೆ. ಭಾರೀ ಮಳೆಯಿಂದಾಗಿ ಕರಾವಳಿಯ ನದಿ, ಕೊಳ್ಳಗಳು ಉಕ್ಕಿ ಹರಿಯುತ್ತಿವೆ.ಎಡೆಬಿಡದೆ ಸುರಿಯುತ್ತಿರುವ ಮಳೆಯಿಂದ ದ.ಕ.ಜಿಲ್ಲೆಯ ಗ್ರಾಮೀಣ ಭಾಗದಲ್ಲಿ ಸೇತುವೆಗಳು ತುಂಬಿ ಹರಿಯುತ್ತಿದೆ.ಭಾರೀ ಮಳೆ ಸುರಿಯುತ್ತಿರುವುದರಿಂದ ನದಿಗಳು ತೊರೆಗಳು ಭರ್ತಿಯಾಗಿ ಹರಿಯುತ್ತಿವೆ.

ದಕ್ಷಿಣ ಕನ್ನಡ ಜಿಲ್ಲೆ ಹಲವೆಡೆಗಳಲ್ಲಿ ಧಾರಾಕಾರವಾಗಿ ಸುರಿಯುವ ಮಳೆಗೆ ಕೆಲವೆಡೆ ತಗ್ಗು ಪ್ರದೇಶಗಳು ಜಲಾವೃತವಾಗಿದ್ದು, ಜನಜೀವನ ಅಸ್ತವ್ಯಸ್ತಗೊಂಡಿದೆ. ಇದೇ ವೇಳೆ ಹವಾಮಾನ ಇಲಾಖೆಯು ಕರಾವಳಿ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮುಂದಿನ ನಾಲ್ಕೈದು ದಿನಗಳಲ್ಲಿ ಭಾರೀ ಮಳೆ ಆಗುವುದಾಗಿ ಎಚ್ಚರಿಕೆಯನ್ನು ನೀಡಿದೆ. ಕಡಲು ಪ್ರಕ್ಷುಬ್ದಗೊಂಡಿರುವ ಕಾರಣ ನಾಡದೋಣಿ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಸೂಚನೆ ನೀಡಲಾಗಿದೆ.

Comments are closed.