ಕರಾವಳಿ

ಹೋಮಕುಂಡ ಪ್ರಕರಣ: ಭಾಸ್ಕರ ಶೆಟ್ಟಿ ಕೊಲೆ ಆರೋಪಿಗಳು ಉಡುಪಿ ನ್ಯಾಯಾಲಯಕ್ಕೆ ಹಾಜರು!

Pinterest LinkedIn Tumblr

ಉಡುಪಿ: ರಾಜ್ಯವನ್ನೇ ಬೆಚ್ಚಿ ಬೀಳಿಸಿದ್ದ ಉಡುಪಿಯ ಉದ್ಯಮಿ ಭಾಸ್ಕರ್ ಶೆಟ್ಟಿ ಕೊಲೆ ಪ್ರಕರಣ ವಿಚಾರಣೆ ನಡೆದಿದ್ದು, ಕೊಲೆ ಮಾಡಿ ಹೋಮಕುಂಡದಲ್ಲಿ ಸುಟ್ಟ ಪ್ರಕರಣದ ಪ್ರಮುಖ ಆರೋಪಿಗಳನ್ನು ಸೋಮವಾರದಂದು ಉಡುಪಿ ಜಿಲ್ಲಾ ಕೋರ್ಟ್ ಗೆ ಹಾಜರುಪಡಿಸಲಾಗಿದೆ.

ಕೊಲೆಯಾದ ಉದ್ಯಮಿ ಭಾಸ್ಕರ ಶೆಟ್ಟಿ ಪತ್ನಿ ರಾಜೇಶ್ವರಿ ಶೆಟ್ಟಿ, ಪುತ್ರ ನವನೀತ್ ಶೆಟ್ಟಿ ಮತ್ತು ರಾಜೇಶ್ವರಿಯ ಪ್ರಿಯಕರ ನಿರಂಜನ್ ಭಟ್ ಎನ್ನುವರನ್ನು ಉಡುಪಿ ಜಿಲ್ಲಾ ನ್ಯಾಯಾಲಯಕ್ಕೆ ಭಾರೀ ಪೊಲೀಸ್ ಬಂದೋಬಸ್ತ್ ಮುಖಾಂತರ ಹಾಜರುಪಡಿಸಲಾಗಿದೆ. ಕೋರ್ಟ್ ಆವರಣದ ಮುಂಭಾಗ ಸಶಸ್ತ್ರ ಮೀಸಲು ಪಡೆ ಪೊಲೀಸರನ್ನು ನಿಯೋಜಿಸಲಾಗಿತ್ತು.ಪ್ರತಿಯೊಬ್ಬರನ್ನು ತಪಾಸಣೆ ಮಾಡಿ ಕೋರ್ಟ್ ಒಳಗಡೆ ಪ್ರವೇಶಕ್ಕೆ ಅನುಮತಿ ನೀಡಲಾಯಿತು. ನ್ಯಾಯಾಲಯ ಒಳಗಡೆ ಲೋಹ ಶೋಧಕ ಅಳವಡಿಸಲಾಗಿದ್ದು ಆರೋಪಿಗಳ ವಿಚಾರಣೆ ಇರುವುದರಿಂದ ನ್ಯಾಯಾಲಯಕ್ಕೆ ಭಾಸ್ಕರ ಶೆಟ್ಟಿ ತಾಯಿ ಗುಲಾಬಿ ಶೆಟ್ಟಿ ಆಗಮಿಸಿದರು.

ಹಣಕಾಸಿನ ವಿಚಾರದಲ್ಲಿ ನಡೆದ ಜಗಳದಲ್ಲಿ 2016 ಜುಲೈ 28 ಉದ್ಯಮಿ ಭಾಸ್ಕರ ಶೆಟ್ಟಿ ಕೊಲೆಯಾಗಿತ್ತು. ಪತ್ನಿ ಹಾಗೂ ಪುತ್ರ ಇಬ್ಬರು ಸೇರಿ ಭಾಸ್ಕರ ಶೆಟ್ಟಿಯನ್ನು ಕೊಲೆಗೈದಿದ್ದರು. ಈ ಕೃತ್ಯಕ್ಕೆ ಪ್ರಿಯತಮ ನಿರಂಜನ ಭಟ್ ಸಾಥ್ ನೀಡಿ ನಂದಳಿಕೆಯ ತನ್ನ ಹೋಮಕುಂಡದಲ್ಲಿ ಭಾಸ್ಕರ ಶೆಟ್ಟಿ ಹೆಣವನ್ನು ಸುಟ್ಟಿದ್ದರು.

ಆರೋಪಿಗಳ ಪರ ನಾರಾಯಣ ಪೂಜಾರಿ ಹಾಗೂ ವಿಕ್ರಂ ಹೆಗ್ಡೆ ವಕಾಲತ್ತು ಮಾಡಲಿದ್ದಾರೆ. ಭಾಸ್ಕರ ಶೆಟ್ಟಿ ತಾಯಿ ಪರ ಹಿರಿಯ ಕ್ರಿಮಿನಲ್ ವಕೀಲ ಶಾಂತಾರಾಮ್ ಶೆಟ್ಟಿ ವಾದ ಮಾಡಲಿದ್ದಾರೆ. ಇನ್ನು ಮೂರು ದಿನಗಳ ಕಾಲ ಉಡುಪಿ ನ್ಯಾಯಾಲಯದಲ್ಲಿ ವಿಚಾರಣೆ ನಡೆಯಲಿದೆ.

Comments are closed.