ಕರಾವಳಿ

ಇರಾ ಸಮೀಪ ವಿದ್ಯಾರ್ಥಿಗಳಿದ್ದ ಆಟೊ ರಿಕ್ಷಾಕ್ಕೆ ಬಸ್ ಢಿಕ್ಕಿ : ಆರು ಮಂದಿ ವಿದ್ಯಾರ್ಥಿಗಳಿಗೆ ಗಾಯ

Pinterest LinkedIn Tumblr

ಮಂಗಳೂರು / ಕೊಣಾಜೆ, ಜುಲೈ.21: ಕೊಣಾಜೆ ಪೊಲೀಸ್ ಠಾಣಾ ವ್ಯಾಪ್ತಿಯ ಇರಾ ಸಮೀಪದ ಮೂಳೂರು ಎಂಬಲ್ಲಿ ಇಂದು ಬೆಳಗ್ಗೆ ಸಂಭವಿಸಿದ ರಸ್ತೆ ಅಪಘಾತದಲ್ಲಿ ಆರು ಮಂದಿ ವಿದ್ಯಾರ್ಥಿಗಳು ಸೇರಿದಂತೆ ಏಳು ಮಂದಿ ಗಾಯಗೊಂಡಿದ್ದಾರೆ.

ವಿದ್ಯಾರ್ಥಿಗಳನ್ನು ಶಾಲೆಗೆ ಕರೆದೊಯ್ಯುತ್ತಿದ್ದ ಆಟೊ ರಿಕ್ಷಾವೊಂದಕ್ಕೆ ಖಾಸಗಿ ಬಸ್ ಢಿಕ್ಕಿ ಹೊಡೆದಿದ್ದು, ಪರಿಣಾಮ ಆಟೋ ರಿಕ್ಷಾದಲ್ಲಿದ್ದ ಆರು ಮಂದಿ ವಿದ್ಯಾರ್ಥಿಗಳು ಹಾಗೂ ರಿಕ್ಷಾ ಚಾಲಕ ಗಾಯಗೊಂಡಿದ್ದಾರೆ.

ಇರಾ ಕಡೆಯಿಂದ ಮುಡಿಪು ಕಡೆಗೆ ವಿದ್ಯಾರ್ಥಿಗಳನ್ನು ಶಾಲೆಗೆ ಕರೆದುಕೊಂಡು ಹೋಗುತ್ತಿದ್ದ ರಿಕ್ಷಾಕ್ಕೆ ಮುಡಿಪುವಿನಿಂದ ಇರಾ ಕಡೆಗೆ ಸಂಚರಿಸುತ್ತಿದ್ದ ಖಾಸಗಿ ಬಸ್ಸು ಢಿಕ್ಕಿ ಹೊಡೆದಿದೆ ಎನ್ನಲಾಗಿದೆ. ಅಪಘಾತದಲ್ಲಿ ಗಾಯಗೊಂಡವರನ್ನು ಕೂಡಲೇ ಸಮೀಪದ ದೇರಳಕಟ್ಟೆಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆಗೊಳಪಡಿಸಲಾಗಿದೆ.

ಸಂಚಾರಿ ಪೊಲೀಸರು ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿ, ಮುಂದಿನ ಕ್ರಮ ಕೈಗೊಂಡಿದ್ದಾರೆ.

Comments are closed.