ಕರಾವಳಿ

ಮಂಗಳೂರು : ಪವಿತ್ರ ಹಜ್ ಯಾತ್ರೆಗೆ ಸಚಿವ ಝಮೀರ್ ಅಹ್ಮದ್ ಖಾನ್ ಚಾಲನೆ

Pinterest LinkedIn Tumblr

ಮಂಗಳೂರು, ಜುಲೈ.21: ಭಾರತೀಯ ಹಜ್ ಸಮಿತಿಯ ಮೂಲಕ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಹೊರಡುವ ಪವಿತ್ರ ಹಜ್ ಯಾತ್ರೆಗೆ ಇಂದು ಚಾಲನೆ ದೊರೆಯಿತು.

ಬಜ್ಪೆಯ ಅನ್ಸಾರ್ ಶಾಲಾ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ರಾಜ್ಯ ಹಜ್ ಹಾಗೂ ವಕ್ಫ್ ಸಚಿವ ಝಮೀರ್ ಅಹ್ಮದ್ ಖಾನ್ ಅವರು ಯಾತ್ರೆಗೆ ಚಾಲನೆ ನೀಡಿದರು. ಉಡುಪಿ ಜಿಲ್ಲಾ ಸಂಯುಕ್ತ ಖಾಝಿ ಪಿ.ಎಂ. ಇಬ್ರಾಹೀಂ ಮುಸ್ಲಿಯಾರ್ ಬೇಕಲ್ ಆಶೀರ್ವಚನ ನೀಡಿದರು.

ಮುಖ್ಯ ಅತಿಥಿಗಳಾಗಿ ನಗರಾಭಿವೃದ್ಧಿ ಮತ್ತು ವಸತಿ ಸಚಿವ ಯು.ಟಿ.ಖಾದರ್, ಮಂಗಳೂರು ಹಜ್ ನಿರ್ವಹಣಾ ಸಮಿತಿಯ ಅಧ್ಯಕ್ಷ ವೈ.ಮುಹಮ್ಮದ್ ಕುಂಞಿ, ವಿಧಾನ ಪರಿಷತ್ ಸದಸ್ಯ ಬಿ.ಎಂ.ಫಾರೂಕ್, ಮಾಜಿ ಶಾಸಕ ಬಿ.ಎ.ಮೊಯ್ದಿನ್ ಬಾವಾ, ಹಜ್ ಕಮಿಟಿಯ ಸದಸ್ಯ ಅಬೂಬಕರ್ ಸಿದ್ದೀಕ್ ಮೋಂಟುಗೋಳಿ, ಸೆಂಟ್ರಲ್ ಕಮಿಟಿಯ ಅಧ್ಯಕ್ಷ ಮುಹಮ್ಮದ್ ಮಸೂದ್, ಮಾಜಿ ಪೊಲೀಸ್ ವರಿಷ್ಠಾಧಿಕಾರಿ ಜಿ.ಎ.ಬಾವಾ, ದ.ಕ. ಜಿಲ್ಲಾ ವಕ್ಫ್ ಸಲಹಾ ಸಮಿತಿಯ ಅಧ್ಯಕ್ಷ ಕಣಚೂರು ಮೋನು, ಮಾಜಿ ಅಧ್ಯಕ್ಷ ಹಾಜಿ ಎಸ್.ಎಂ.ರಶೀದ್ ಹಾಜಿ, ಮುಡಾ ಮಾಜಿ ಅಧ್ಯಕ್ಷ ಇಬ್ರಾಹೀಂ ಕೋಡಿಜಾಲ್, ಉದ್ಯಮಿ ಹಾಜಿ ಝಕರಿಯಾ ಬಜ್ಪೆ, ಹಜ್ ಮತ್ತು ವಕ್ಫ್ ಇಲಾಖೆಯ ಕಾರ್ಯದರ್ಶಿ ಮುಹಮ್ಮದ್ ಮುಹ್ಸಿನ್, ಮಂಗಳೂರು ತಾಪಂ ಅಧ್ಯಕ್ಷ ಮುಹಮ್ಮದ್ ಮೋನು ಮತ್ತಿತರರು ಉಪಸ್ಥಿತರಿದ್ದರು.

ಹಜ್ ಕಮಿಟಿಯ ಕಾರ್ಯನಿರ್ವಹಣಾಧಿಕಾರಿ ಸರ್ಫ್ರಾಝ್ ಖಾನ್ ಸರ್ದಾರ್ ಸ್ವಾಗತಿಸಿದರು.

Comments are closed.