ಕರಾವಳಿ

ಕೊಲೆ, ಕೊಲೆಯತ್ನ ಸೇರಿದಂತೆ ವಿವಿಧ ಪ್ರಕರಣಗಳಲ್ಲಿ ಬೇಕಾಗಿದ್ದ ಇಬ್ಬರು ಆರೋಪಿಗಳ ಬಂಧನ

Pinterest LinkedIn Tumblr

ಮುಹಮ್ಮದ್ ಮುಸ್ತಫಾ                              ಮುಹಮ್ಮದ್ ಹನೀಫ್

ಮಂಗಳೂರು, ಜುಲೈ.22: ಕೊಲೆ, ಕೊಲೆಯತ್ನ, ಹಲ್ಲೆ, ಕಳ್ಳತನ, ದರೋಡೆ ಸೇರಿದಂತೆ 24 ಪ್ರಕರಣಗಳಲ್ಲಿ ಭಾಗಿಯಾಗಿದ್ದ ಆರೋಪಿ ಹಾಗೂ ಕೊಲೆಯತ್ನ ಪ್ರಕರಣಕ್ಕೆ ಸಂಬಂಧಿಸಿದಂತೆ ತಲೆಮರೆಸಿಕೊಂಡಿದ್ದ ಇನ್ನೋರ್ವ ಆರೋಪಿ ಸೇರಿದಂತೆ ಇಬ್ಬರು ಆರೋಪಿಗಳನ್ನು ಬಂಧಿಸುವಲ್ಲಿ ಉಳ್ಳಾಲ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಕೊಲೆ, ಕೊಲೆಯತ್ನ, ಹಲ್ಲೆ, ಕಳ್ಳತನ, ದರೋಡೆ ಸೇರಿದಂತೆ 24 ಪ್ರಕರಣಗಳಲ್ಲಿ ಭಾಗಿಯಾಗಿದ್ದ ತಾಲೂಕಿನ ಮುನ್ನೂರು ಗ್ರಾಮದ ಮದನಿ ನಗರ ನಿವಾಸಿ ಹನೀಫ್ ಯಾನೆ ಮುಹಮ್ಮದ್ ಹನೀಫ್(30) ಹಾಗೂ ಕೊಲೆಯತ್ನ ಪ್ರಕರಣಕ್ಕೆ ಸಂಬಂಧಿಸಿದಂತೆ ತಲೆಮರೆಸಿಕೊಂಡಿದ್ದ ಉಳ್ಳಾಲದ ಮುಕ್ಕಚೇರಿ ಮಸೀದಿ ಬಳಿಯ ಮುಹಮ್ಮದ್ ಮುಸ್ತಫಾ ಯಾನೆ ಮುಸ್ತಫಾ (21) ಎಂಬಿಬ್ಬರು ಬಂಧಿತ ಆರೋಪಿಗಳು.

ಬಂಧಿತ ಆರೋಪಿ ಹನೀಫ್ ವಿರುದ್ಧ ಉಳ್ಳಾಲ, ಮಂಗಳೂರು ಉತ್ತರ, ಕುಶಾಲನಗರ ಪೊಲೀಸ್ ಠಾಣೆ ಸೇರಿದಂತೆ ವಿವಿಧ ಪೊಲೀಸ್ ಠಾಣೆಗಳಲ್ಲಿ ಒಟ್ಟು 24 ಪ್ರಕರಣಗಳು ದಾಖಲಾಗಿದ್ದವು. ಈತನ ವಿರುದ್ಧ ವಾರಂಟ್ ಹೊರಡಿಸಲಾಗಿತ್ತು.

ಮುಸ್ತಫಾ ವಿರುದ್ದ ನಾಲ್ಕು ಪ್ರಕರಣ ದಾಖಲು:

ಮತ್ತೋರ್ವ ಬಂದಿತ ಆರೋಪಿ ಮುಹಮ್ಮದ್ ಮುಸ್ತಫಾ ಯಾನೆ ಮುಸ್ತಫಾ ವಿರುದ್ದ ಜೂ.29ರಂದು ಉಳ್ಳಾಲದ ಮಾಸ್ತಿಕಟ್ಟೆಯಲ್ಲಿ ವೆಂಕಟೇಶ ಎಂಬವರನ್ನು ಮುಸ್ತಫಾ ಕೊಲೆ ಮಾಡಲು ಯತ್ನಿಸಿ ಬಳಿಕ ತಲೆಮರೆಸಿಕೊಂಡಿದ್ದ ಆರೋಪವಿದ್ದು, ಈ ಬಗ್ಗೆ ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಮುಸ್ತಫಾ ವಿರುದ್ಧ ಉಳ್ಳಾಲ ಪೊಲೀಸ್ ಠಾಣೆಯಲ್ಲಿ 2 ಕೊಲೆಯತ್ನ ಪ್ರಕರಣಗಳು, ಕಂಕನಾಡಿ ಪೊಲೀಸ್ ಠಾಣೆಯಲ್ಲಿ ಒಂದು ಪ್ರಕರಣ, ಕೊಣಾಜೆ ಪೊಲೀಸ್ ಠಾಣೆಯಲ್ಲಿ ಕನ್ನ ಕಳವು ಪ್ರಕರಣ ಸೇರಿ ಒಟ್ಟು ನಾಲ್ಕು ಪ್ರಕರಣ ದಾಖಲಾಗಿವೆ. ಈತನನ್ನು ವಶಕ್ಕೆ ಪಡೆದು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ.

ಮಂಗಳೂರು ನಗರ ಪೊಲೀಸ್ ಆಯುಕ್ತ ಟಿ.ಆರ್.ಸುರೇಶ್ ನಿರ್ದೇಶನದಂತೆ ಕಾನೂನು ಮತ್ತು ಸುವ್ಯವಸ್ಥೆ ವಿಭಾಗದ ಡಿಸಿಪಿ ಹನುಮಂತರಾಯ, ಅಪರಾಧ ಮತ್ತು ಸಂಚಾರ ವಿಭಾಗದ ಡಿಸಿಪಿ ಉಮಾ ಪ್ರಶಾಂತ್ ಮಾರ್ಗದರ್ಶನದಲ್ಲಿ ಮಂಗಳೂರು ದಕ್ಷಿಣ ಉಪ-ವಿಭಾಗದ ಎಸಿಪಿ ಕೆ.ರಾಮರಾವ್ ನೇತೃತ್ವದಲ್ಲಿ ನಡೆದ ಕಾರ್ಯಾಚರಣೆಯಲ್ಲಿ ಉಳ್ಳಾಲ ಪೊಲೀಸ್ ಠಾಣಾ ಪೊಲೀಸ್ ನಿರೀಕ್ಷಕ ಕೆ.ಆರ್.ಗೋಪಿಕೃಷ್ಣ, ಪೊಲೀಸ್ ಉಪ-ನಿರೀಕ್ಷಕ ಗುರಪ್ಪಕಾಂತಿ, ವಿನಾಯಕ ತೋರಗಲ್, ಮತ್ತು ರಂಜಿತ್, ದಿನೇಶ ಶೆಟ್ಟಿ, ಪ್ರಶಾಂತ, ವಾಸುದೇವ, ಚಿದಾನಂದ, ಸುರೇಶ ಭಾಗವಹಿಸಿದ್ದರು.

Comments are closed.