ಕರಾವಳಿ

ಅಕ್ರೆಮ ಗಾಂಜಾ ಮಾರಾಟ ಹಾಗೂ ಗಾಂಜಾ ಸೇವನೆ ಪ್ರಕರಣ : ಏಳು ಮಂದಿ ಬಂಧನ

Pinterest LinkedIn Tumblr

ಬಂಧಿತ ಆರೋಪಿ ಕೇಶವ ಸನಿಲ್

ಮಂಗಳೂರು, ಜುಲೈ. 23: ಎರಡು ಪ್ರತ್ಯೇಕ ಪ್ರಕರಣಗಳಲ್ಲಿ ಅಕ್ರೆಮ ಗಾಂಜಾ ಮಾರಾಟಕ್ಕೆ ಯತ್ನಿಸುತ್ತಿದ್ದ ಆರೋಪಿ ಹಾಗೂ ಗಾಂಜಾ ಸೇವನೆ ಮಾಡುತ್ತಿದ್ದ 6 ಮಂದಿ ಯುವಕರನ್ನು ಮಂಗಳೂರು ಪೊಲೀಸರು ಶನಿವಾರ ಬಂಧಿಸಿದ್ದಾರೆ.

ಕೇರಳದಿಂದ ಗಾಂಜಾವನ್ನು ಅಕ್ರಮವಾಗಿ ತಂದು ಮಂಗಳೂರಿನಲ್ಲಿ ಮಾರಾಟ ಮಾಡಲು ಯತ್ನಿಸುತ್ತಿದ್ದ ಆರೋಪಿಯನ್ನು ಮಂಗಳೂರು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ಮಂಗಳೂರು ಹೊರವಲಯದ ಕಾಟಿಪಳ್ಳ ನಿವಾಸಿ ಕೇಶವ ಸನಿಲ್ (47) ಎಂದು ಗುರುತಿಸಲಾಗಿದೆ.

ಬಂಧಿತ ಆರೋಪಿ ಕೇಶವ ಸನೀಲ್ ನಗರಕ್ಕೆ ಕೇರಳದಿಂದ ಅಕ್ರಮವಾಗಿ ಗಾಂಜಾವನ್ನು ತಂದು ಕಾಲೇಜು ವಿದ್ಯಾರ್ಥಿಗಳಿಗೆ ಹಾಗೂ ಸಾರ್ವಜನಿಕರಿಗೆ ಮಾರಾಟ ಮಾಡುತ್ತಿದ್ದ ಬಗ್ಗೆ ಖಚಿತ ಮಾಹಿತಿ ಪೊಲೀಸರಿಗೆ ದೊರೆತಿತ್ತು. ಈ ಹಿನ್ನೆಲೆಯಲ್ಲಿ ಸಿಸಿಬಿ ಪೊಲೀಸರ ತಂಡ ಉಳ್ಳಾಲ ಬಳಿಯ ತಲಪಾಡಿ ಟೋಲ್ ಗೇಟ್ ಬಳಿ ಹುಂಡೈ ಇಯಾನ್ ಕಾರನ್ನು ತಡೆದು ನಿಲ್ಲಿಸಿ ಪರಿಶೀಲನೆ ನಡೆಸಿದಾಗ ಅಕ್ರಮ ಗಾಂಜಾ ಪತ್ತೆಯಾಗಿದೆ.

ಗಾಂಜಾ ಸಾಗಾಟಕ್ಕೆ ಬಳಸಲಾಗುತ್ತಿದ್ದ ಕಾರು ಹಾಗು ಕಾರ್‌ನ ಡಿಕ್ಕಿಯಲ್ಲಿ ಅಡಗಿಸಿ ಇಡಲಾಗಿದ್ದ ಗಾಂಜಾವನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ವಶಪಡಿಸಿಕೊಂಡ ಸೊತ್ತಿನ ಒಟ್ಟು ಮೌಲ್ಯ ರೂ. 2,85,500 ಎಂದು ಅಂದಾಜಿಸಲಾಗಿದೆ.

ಬಂಧಿತ ಆರೋಪಿ ಕೇಶವ ಸನಿಲ್ ವಿರುದ್ಧ ಈ ಹಿಂದೆ ಮುಲ್ಕಿ ಪೊಲೀಸ್ ಠಾಣೆಯಲ್ಲಿ ಕೊಲೆ ಯತ್ನ ಪ್ರಕರಣ, ಸುರತ್ಕಲ್ ಪೊಲೀಸ್ ಠಾಣೆಯಲ್ಲಿ ಒಂದು ಕೊಲೆ , ಶಸ್ತ್ರಾಸ್ತ್ರ ಕಾಯ್ದೆ ಹಾಗೂ ಗಾಂಜಾ ಮಾರಾಟಕ್ಕೆ ಸಂಬಂಧಪಟ್ಟಂತೆ ಒಟ್ಟು 12 ಪ್ರಕರಣ, ಪಣಂಬೂರು ಪೊಲೀಸ್ ಠಾಣೆಯಲ್ಲಿ ಕೊಲೆ ಯತ್ನ ಪ್ರಕರಣ, ಉಡುಪಿ ಜಿಲ್ಲೆಯ ಕಾರ್ಕಳ ಪೊಲೀಸ್ ಠಾಣೆಯಲ್ಲಿ ಗಾಂಜಾ ಪ್ರಕರಣ, ಹೀಗೆ ಒಟ್ಟು 15 ಪ್ರಕರಣ ದಾಖಲಾಗಿವೆ.

ಗಾಂಜಾ ಸೇವನೆ : 6 ಮಂದಿ ಬಂಧನ

ಇನ್ನೊಂದು ಪ್ರಕರಣದಲ್ಲಿ ನಗರದ ಬಂದರು, ಕುದ್ರೋಳಿ ಮತ್ತು ಕಾರ್‌ಸ್ಟ್ರೀಟ್ ಪ್ರದೇಶಗಳಲ್ಲಿ ಗಾಂಜಾ ಸೇವನೆ ಮಾಡುತ್ತಿದ್ದ 6 ಮಂದಿ ಯುವಕರನ್ನು ಬಂದರು ಪೊಲೀಸರು ಬಂಧಿಸಿದ್ದಾರೆ.

ಪೊಲೀಸರು ರೌಂಡ್ಸ್ ಕರ್ತವ್ಯದಲ್ಲಿದ್ದಾಗ ಅನುಮಾನಾಸ್ಪದವಾಗಿ ತಿರುಗಾಡುತ್ತಿದ್ದ 6 ಮಂದಿ ಯುವಕರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದಾಗ ಅವರು ಗಾಂಜಾ ಸೇವಿಸಿರುವುದು ಪತ್ತೆಯಾಗಿದೆ. ಆರೋಪಿಗಳನ್ನು ಬಂಧಿಸಲಾಗಿದ್ದು, ಬಳಿಕ ಜಾಮೀನಿನಲ್ಲಿ ಬಿಡುಗಡೆ ಹೊಂದಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

Comments are closed.