ಕರಾವಳಿ

ದಕ್ಷಿಣ ಕನ್ನಡ ಜಿಲ್ಲೆಯ ಋಣ ಇದೆ – ಜಿಲ್ಲೆಗೆ ಸ್ವಲ್ಪವಾದರೂ ಕೊಡುಗೆ ನೀಡಲು ಪ್ರಯತ್ನಿಸುತ್ತೇನೆ : ಸಚಿವೆ ಜಯಮಾಲ

Pinterest LinkedIn Tumblr

ಮಂಗಳೂರು, ಜುಲೈ. 24: ದಕ್ಷಿಣ ಕನ್ನಡ ಜಿಲ್ಲೆಗೆ ರಂಗ ಮಂದಿರ ಆಗಬೇಕು ಎನ್ನುವ ಬೇಡಿಕೆಯನ್ನು ಆಧ್ಯತೆಯೊಂದಿಗೆ ಪರಿಗಣಿಸ ಲಾಗುವುದು. ಹಾಗೂ ಬ್ಯಾರಿ, ಕೊಂಕಣಿ ಸಾಹಿತ್ಯ ಅಕಾಡಮಿಗಳಿಗೆ ಕಟ್ಟಡ ನಿರ್ಮಾಣದ ಬಗ್ಗೆಯೂ ಗಮನಹರಿಸಲಾಗುವುದು ಎಂದು ರಾಜ್ಯ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಜಯಮಾಲ ತಿಳಿಸಿದ್ದಾರೆ.

ರಾಜ್ಯ ಸರಕಾರದ ಸಂಪುಟ ದರ್ಜೆಯ ಸಚಿವೆಯಾಗಿ ಆಯ್ಕೆಯಾದ ಬಳಿಕ ದಕ್ಷಿಣ ಕನ್ನಡ ಜಿಲ್ಲೆಗೆ ಪ್ರಥಮ ಬಾರಿಗೆ ಭೇಟಿ ನೀಡಿರುವ ಅವರು ಜಿಲ್ಲಾ ಕಾಂಗ್ರೆಸ್ ಕಚೇರಿಗೆ ಭೇಟಿ ನೀಡಿದ ಸಂದರ್ಭ ಕಾಂಗ್ರೆಸ್ ಜಿಲ್ಲಾ ಘಟಕದ ವತಿಯಿಂದ ಅಭಿನಂಧನೆ ಸ್ವೀಕರಿಸಿ ಮಾತನಾಡಿದರು.

ತುಳು ಭಾಷೆಯನ್ನು ಸಂವಿಧಾನದ ಎಂಟನೆ ಪರಿಚ್ಛೇದಕ್ಕೆ ಸೇರಿಸಲು ಪೂರಕವಾಗುವ ಎಲ್ಲಾ ಕೆಲಸವನ್ನು ಪ್ರಾಮಾಣಿಕವಾಗಿ ಮಾಡುತ್ತೇನೆ ಎಂದು ಹೇಳಿದ ಅವರು, ದಕ್ಷಿಣ ಕನ್ನಡ ಜಿಲ್ಲೆಯವಳಾದ ನನ್ನ ಮೇಲೆ ಜಿಲ್ಲೆಯ ಋಣ ಇದೆ. ಅದನ್ನು ತೀರಿಸಲು ಸಾಧ್ಯವಿಲ್ಲ. ಅದು ತಾಯಿಯ ಋಣ ಇದ್ದಂತೆ ಸ್ವಲ್ಪವಾದರೂ ಕೊಡುಗೆ ನೀಡಲು ಪ್ರಯತ್ನಿಸುತ್ತೇನೆ ಎಂದು ತಿಳಿಸಿದರು.

ಎನ್ನ ಅಪ್ಪೆಗ್ ತುಳು ಬುಡುಂಡ ಬೇತೆ ಬಾಸೆ ಗೊತ್ತಿಜಾಂಡ್. ತುಳು ಬಾಸೆನ್‌ ಮರಪರೆ ಉಂಡಾ ”(ನನ್ನ ತಾಯಿಗೆ ತುಳು ಭಾಷೆ ಬಿಟ್ಟರೆ ಬೇರೆ ಭಾಷೆ ಬರುತ್ತಿರಲಿಲ್ಲ.ಆ ಭಾಷೆಯನ್ನು ಮರೆಯಲು ಸಾಧ್ಯ ಉಂಟೆ ..?) ಎನ್ನುತ್ತಾ ತುಳು ಭಾಷೆಯ ಬಗ್ಗೆ ಜಯಮಾಲ ಅಭಿಮಾನದಿಂದ ಮಾತನಾಡಿದರು.

ಸಮಾರಂಭದಲ್ಲಿ ಮಾಜಿ ಸಚಿವರಾದ ಬಿ. ರಮಾನಾಥ ರೈ, ಅಭಯ ಚಂದ್ರ ಜೈನ್, ಮಾಜಿ ಶಾಸಕಿ ಶಕುಂತಳಾ ಶೆಟ್ಟಿ, ದ.ಕ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹರೀಶ್ ಕುಮಾರ್, ಮಂಗಳೂರು ತಾಲೂಕು ಪಂಚಾಯತ್ ಅಧ್ಯಕ್ಷ ಮುಹಮ್ಮದ್ ಮೋನು, ಪಕ್ಷದ ಮುಖಂಡರಾದ ಸುರೇಶ್ ಬಲ್ಲಾಳ್, ರಾಜಶೇಖರ ಕೋಟ್ಯಾನ್, ಸದಾಶಿವ ಉಳ್ಳಾಲ್, ರಕ್ಷಿತ್,ಪಿ.ವಿ., ಮೋಹನ್, ಎಂ.ಎಸ್.ಮುಹಮ್ಮದ್, ಮಮತಾ ಗಟ್ಟಿ, ಶಾಲೆಟ್ ಪಿಂಟೋ, ತುಳು ಅಕಾಡಮಿಯ ಅಧ್ಯಕ್ಷ ಎ.ಸಿ .ಭಂಡಾರಿ ಮೊದಲಾದವರು ಉಪಸ್ಥಿತರಿದ್ದರು.

Comments are closed.