ಕರಾವಳಿ

ಬಾಡಿ ಮಸಾಜ್ ಹೆಸರಿನಲ್ಲಿ ವೇಶ್ಯಾವಾಟಿಕೆ : ಓರ್ವ ಮಹಿಳಾ ಪಿಂಪ್ ವಶ – ಮೂವರು ಪರಾರಿ

Pinterest LinkedIn Tumblr

ಮಂಗಳೂರು, ಜುಲೈ. 30: ನಗರದಲ್ಲಿ ಮಸಾಜ್ ಸೆಂಟರ್ ಹೆಸರಿನಲ್ಲಿ ವೈಶ್ಯಾವಾಟಿಕೆ ನಡೆಸುತ್ತಿರುವ ಪ್ರಕರಣಗಳು ಹೆಚ್ಚುತ್ತಿದ್ದು, ಕೆಲವೊಂದು ಕಡೆ ಮಾತ್ರ ಪೊಲೀಸರು ದಾಳಿ ನಡೆಸುತ್ತಿರುವ ಬಗ್ಗೆ ವರದಿಯಾಗುತ್ತಿದೆ.

ಇದೀಗ ಮಂಗಳೂರು ಸಿಸಿಬಿ ಪೊಲೀಸರು ಹಾಗೂ ಕಾವೂರು ಪೊಲೀಸರು ನಡೆಸಿರುವ ಕಾರ್ಯಾಚರಣೆಯಲ್ಲಿ ಬಾಡಿ ಮಸಾಜ್ ಹೆಸರಿನಲ್ಲಿ ವೇಶ್ಯಾವಾಟಿಕೆಗೆ ಪ್ರೇರೆಪಿಸುತ್ತಿರುವ ಪ್ರಕರಣವನ್ನು ಪತ್ತೆಹಚ್ಚಿ ಓರ್ವ ಮಹಿಳಾ ಪಿಂಪ್ ಅನ್ನು ಬಂಧಿಸಿದ್ದಾರೆ.

ನಗರದ ಕಾವೂರು ಪೊಲೀಸ್ ಠಾಣೆ ವ್ಯಾಪ್ತಿಯ ಕೊಟ್ಟಾರ ಚೌಕಿ ಬಳಿಯಿರುವ ಮಸಾಜ್ ಸೆಂಟರ್ ಗೆ ಮಂಗಳೂರು ಸಿಸಿಬಿ ಪೊಲೀಸರು ಹಾಗೂ ಕಾವೂರು ಪೊಲೀಸರು ದಾಳಿ ಮಾಡಿ, ಮಹಿಳೆ ವಶಕ್ಕೆ ಪಡೆದುಕೊಂಡು ಪ್ರಕರಣವನ್ನು ದಾಖಲಿಸಿಕೊಂಡಿದ್ದಾರೆ.

ಮಸಾಜ್ ಸೆಂಟರ್ ನಲ್ಲಿ ಯುವತಿಯರನ್ನು ಬಳಸಿಕೊಂಡು ಬಾಡಿ ಮಸಾಜ್ ಹೆಸರಿನಲ್ಲಿ ವೇಶ್ಯಾವಾಟಿಕೆಗೆ ಪ್ರೇರೆಪಿಸುತ್ತಿರುವುದಾಗಿ ಮಾಹಿತಿ ಬಂದ ಮೇರೆಗೆ ಪೊಲೀಸರು ಮಸಾಜ್ ಪಾರ್ಲರ್ ಗೆ ದಾಳಿ ನಡೆಸಿ ವೇಶ್ಯಾವಾಟಿಕೆಗೆ ಪ್ರೇರೆಪಿಸುತ್ತಿದ್ದ ಓರ್ವ ಮಹಿಳೆ ಹಾಗು 14,700 ರೂ.,2 ಮೊಬೈಲ್ ಫೋನ್ ಗಳನ್ನು ವಶಪಡಿಸಿಕೊಂಡಿದ್ದಾರೆ.

ಮಸಾಜ್ ಸೆಂಟರ್ ನ್ನು ನಡೆಸುತ್ತಿದ್ದ ರಾಜೇಶ್, ಸತೀಶ್ ಮತ್ತು ಜಯರಾಜ್ ಎಂಬವರು ತಲೆಮರೆಸಿಕೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಕಾರ್ಯಾಚರಣೆಯಲ್ಲಿ ಸಿಸಿಬಿ ಘಟಕದ ಇನ್ಸ್‌ಪೆಕ್ಟರ್ ಶಾಂತರಾಮ, ಕಾವೂರು ಪೊಲೀಸ್ ಠಾಣೆಯ ಇನ್ಸ್ ಪೆಕ್ಟರ್ ಕೆ. ಆರ್ ನಾಯ್ಕ್ ಹಾಗೂ ಸಿಸಿಬಿ ಘಟಕದ ಪಿಎಸ್‌ಐ ಶ್ಯಾಮ್ ಸುಂದರ್, ಹೆಚ್.ಡಿ. ಕಬ್ಬಾಳ್ ರಾಜ್ ಹಾಗೂ ಸಿಸಿಬಿ ಘಟಕದ ಮತ್ತು ಕಾವೂರು ಪೊಲೀಸ್ ಠಾಣೆಯ ಸಿಬ್ಬಂದಿಗಳು ಭಾಗವಹಿಸಿದ್ದರು.

Comments are closed.