ಕರಾವಳಿ

ದ.ಕ.ಜಿಲ್ಲಾ ಉಸ್ತುವಾರಿ ಸಚಿವರಾಗಿ ವಸತಿ ಮತ್ತು ನಗರಾಭಿವೃದ್ಧಿ ಸಚಿವ ಯು.ಟಿ ಖಾದರ್ ನೇಮಕ

Pinterest LinkedIn Tumblr

ಮಂಗಳೂರು : ಮುಖ್ಯಮಂತ್ರಿ ಕುಮಾರಸ್ವಾಮಿ ನೇತೃತ್ವದ ಜೆಡಿಎಸ್ ​ -ಕಾಂಗ್ರೆಸ್​ ಸಮ್ಮಿಶ್ರ ಸರ್ಕಾರದಲ್ಲಿ ಹಲವು ಕತೂಹಲಗಳನ್ನು ಮೂಡಿಸಿದ್ದ ಜಿಲ್ಲಾ ಉಸ್ತುವಾರಿ ಸಚಿವರ ನೇಮಕಾತಿ ಮಾಡಲಾಗಿದ್ದು, ದ.ಕ.ಜಿಲ್ಲೆಗೆ ರಾಜ್ಯ ವಸತಿ ಮತ್ತು ನಗರಾಭಿವೃದ್ಧಿ ಸಚಿವ ಯು.ಟಿ ಖಾದರ್ ಅವರನ್ನು ಉಸ್ತುವಾರಿ ಸಚಿವರನ್ನಾಗಿ ನೇಮಕ ಮಾಡಲಾಗಿದೆ.

ಖಾತೆ ಹಂಚಿಕೆ, ಸಚಿವರಿಗೆ ಆಡಳಿತ ಕೇಂದ್ರ ವಿಧಾನ ಸೌಧ ಹಾಗೂ ವಿಕಾಸ ಸೌಧದಲ್ಲಿ ಕೊಠಡಿ ಹಂಚಿಕೆ ಕಾರ್ಯ ಪೂರ್ಣಗೊಳಿಸಿರುವ ಸಿಎಂ ಕುಮಾರಸ್ವಾಮಿ ಅವರು, ಜಿಲ್ಲಾ ಉಸ್ತುವಾರಿ ಸಚಿವರನ್ನು ನೇಮಕ ಮಾಡಿ ಅಧಿಕೃತ ಆದೇಶ ಹೊರಡಿಸಿದ್ಧಾರೆ. ಸಿಎಂ ಕುಮಾರ ಸ್ವಾಮಿ ಸಚಿವ ಸಂಪುಟದ 26 ಸಚಿವರುಗಳಿಗೆ ರಾಜ್ಯದ 30 ಜಿಲ್ಲೆಗಳ ಉಸ್ತುವಾರಿಯನ್ನು ವಹಿಸಲಾಗಿದೆ.

ಕಾಂಗ್ರೆಸ್-ಜೆಡಿಎಸ್ ಸಮ್ಮಿಶ್ರ ಸರ್ಕಾರದ ಜಿಲ್ಲಾ ಉಸ್ತುವಾರಿ ಸಚಿವರ ನೇಮಕ ಸಾಕಷ್ಟು ಕುತೂಹಲಕ್ಕೆ ಕಾರಣವಾಗಿತ್ತು . ಈ ಹಿನ್ನಲೆಯಲ್ಲಿ ಸಾಕಷ್ಟು ಅಳೆದು ತೂಗಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರ ಸಂಪುಟದ ಸಚಿವರಿಗೆ ಜಿಲ್ಲಾ ಉಸ್ತುವಾರಿ ಜವಾಬ್ದಾರಿಯನ್ನು ವಹಿಸಲಾಗಿದೆ.ಇದರಂತೆ ಜೆಡಿಎಸ್​ 9 ಜಿಲ್ಲೆ , ಕಾಂಗ್ರೆಸ್​ 20 ಜಿಲ್ಲೆಗಳ ಜವಾಬ್ದಾರಿಯನ್ನು ಹಂಚಿಕೊಂಡಿವೆ. ಇನ್ನು ಈ ಬಗ್ಗೆ ಉಭಯ ಪಕ್ಷಗಳ ನಾಯಕರು ಸಮಾಲೋಚನೆ ನಡೆಸಿ ಜಿಲ್ಲಾ ಉಸ್ತುವಾರಿ ಸಚಿವರನ್ನು ಹಂಚಿಕೆ ಮಾಡಿದ್ದಾರೆ ಎಂದು ಉನ್ನತ ಮೂಲಗಳು ತಿಳಿಸಿವೆ.

ದ.ಕ.ಜಿಲ್ಲೆಯ ಸಹೋದರ ಸಂಸ್ಕೃತಿಯನ್ನು ಉಳಿಸಲು ಶ್ರಮಿಸುತ್ತೇನೆ : ಸಚಿವ ಖಾದರ್

ನನ್ನ ಜಿಲ್ಲೆಯಲ್ಲೇ ಉಸ್ತುವಾರಿ ಸಚಿವ ಸ್ಥಾನ ಲಭಿಸಿರುವುದು ಸಂತಸ ತಂದಿದೆ. ಎಲ್ಲಾ ನಾಯಕರ, ಹಿರಿಯರ ಹಾಗೂ ಎಲ್ಲ ಧಾರ್ಮಿಕ ನಾಯಕರ ಮಾರ್ಗದರ್ಶನ ಪಡೆದು ರಾಜಕೀಯ ರಹಿತವಾಗಿ ಜಿಲ್ಲೆಯ ಅಭಿವೃದ್ಧಿ ಪಥದಲ್ಲಿ ಕೊಂಡೊಯ್ಯುತ್ತೇನೆ. ದಕ್ಷಿಣ ಕನ್ನಡದ ಸಹೋದರ ಸಂಸ್ಕೃತಿಯನ್ನು ಉಳಿಸಲು ಶ್ರಮಿಸುತ್ತೇನೆ ಎಂದು ನೂತನ ಉಸ್ತುವಾರಿ ಸಚಿವ ಯು.ಟಿ ಖಾದರ್ ಮಾಧ್ಯಮಕ್ಕೆ ಹೇಳಿಕೆ ನೀಡಿದ್ದಾರೆ.

Comments are closed.