ಕರಾವಳಿ

ಹಳೆಯಂಗಡಿ ಬಳಿ ದ್ವಿಚಕ್ರ ವಾಹನಕ್ಕೆ ಸ್ಕಾರ್ಪಿಯೋ ಢಿಕ್ಕಿ : ಸ್ಕೂಟರ್ ಸವಾರ ಮೃತ್ಯು

Pinterest LinkedIn Tumblr

ಮಂಗಳೂರು / ಸುರತ್ಕಲ್, ಆಗಸ್ಟ್. 4: ಹಳೆಯಂಗಡಿ ಸಮೀಪದ ಪಾವಂಜೆ ಬಳಿ ಇಂದು ಬೆಳಿಗ್ಗೆ ಸಂಭವಿಸಿದ ರಸ್ತೆ ಅಪಘಾತದಲ್ಲಿ ದ್ವಿಚಕ್ರ ವಾಹನ ಸವಾರರೊಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ಅಪಘಾತದಲ್ಲಿ ಮೃತಪಟ್ಟ ವ್ಯಕ್ತಿಯನ್ನು ಕೊಲ್ನಾಡು ನಿವಾಸಿ ರವೀಂದ್ರ  ( 45 ) ಎಂದು ಗುರುತಿಸಲಾಗಿದೆ.

ರವೀಂದ್ರ  ಅವರು ಪಾವಂಜೆಯಿಂದ ಎನ್‌ಐಟಿಕೆ ಕಡೆಗೆ ತಮ್ಮ ದ್ವಿಚಕ್ರ ವಾಹನದಲ್ಲಿ ತೆರಳುತಿದ್ದ ಸಂದರ್ಭ ಇವರ ಸ್ಕೂಟರ್‌ಗೆ ಸ್ಕಾರ್ಪಿಯೋ ಕಾರೊಂದು ಡಿಕ್ಕಿ ಹೊಡೆದಿದೆ. ಅಪಘಾತದ ರಭಸಕ್ಕೆ ರವೀಂದ್ರ ಅವರು ಸಮೀಪದಲ್ಲಿ ಚಲಿಸುತ್ತಿದ್ದ ಲಾರಿಯ ಅಡಿಗೆ ಬಿದ್ದಿದ್ದು, ಗಂಭೀರ ಗಾಯಗೊಂಡ ರವೀಂದ್ರ  ಅವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.

ರವೀಂದ್ರ ಅವರು ಸುರತ್ಕಲ್ ನ ಎನ್‌ಐಟಿಕೆ ಸಂಸ್ಥೆಯಲ್ಲಿ ಸೆಕ್ಯುರಿಟಿ ಗಾರ್ಡ್ ಆಗಿ ಕೆಲಸ ಮಾಡುತ್ತಿದ್ದರು. ಎಂದಿನಂತೆ ಇಂದು ಕೂಡ ಕೆಲಸಕ್ಕೆಂದು ಹೋಗುವ ಸಂದರ್ಭ ಈ ಘಟನೆ ನಡೆದಿದೆ. ಮೃತರು ಪತ್ನಿ ಮತ್ತು ಮಗಳನ್ನು ಅಗಲಿದ್ದಾರೆ.

ಅಪಘಾತ ಸಂಭವಿಸಿದ ಕೂಡಲೇ ಸ್ಕಾರ್ಪಿಯೋ ಚಾಲಕ ಸ್ಥಳದಿಂದ ಪರಾರಿಯಾಗಿದ್ದು, ಪೋಲಿಸರು ಆತನ ಶೋಧ ಕಾರ್ಯ ಆರಂಭಿಸಿದ್ದಾರೆ. ಮಂಗಳೂರು ಉತ್ತರ ವಲಯ ಸಂಚಾರಿ ಠಾಣೆಯಲ್ಲಿ ಈ ಬಗ್ಗೆ ಪ್ರಕರಣ ದಾಖಲಾಗಿದೆ.

Comments are closed.