
ಮಂಗಳೂರು : ತುಳುನಾಡಿನಲ್ಲಿ ಹಿಂದಿನಿಂದಲೂ ನಾಗ ದೇವರ ಆರಾಧನೆಯನ್ನು ಶ್ರದ್ಧಾ ಭಕ್ತಿಯಿಂದ ಆಚರಿಸಲಾಗುತ್ತದೆ. ಬುಧವಾರ ನಾಗರಪಂಚಮಿ ಪ್ರಯುಕ್ತ ಕಾಸರಗೋಡಿನ ಮಂಜೇಶ್ವರದ ಅನಂತೇಶ್ವರ ದೇವಾಲಯದಲ್ಲಿ ಸಾವಿರಾರು ಭಕ್ತರು ನಾಗದೇವರಿಗೆ ವಿಶೇಷ ಪೂಜೆ ಸಲ್ಲಿಸಿದರು.
ಶ್ರಾವಣ ಮಾಸದ ಶುಕ್ಲಪಕ್ಷದ ಪಂಚಮಿಗೆ ಗರುಡಪಂಚಮಿ ಮತ್ತು ನಾಗರ ಪಂಚಮಿ ಎಂದು ಹೆಸರಿದೆ. ನಾಗರ ಪಂಚಮಿಯಂದು ಅಕ್ಕಿ, ತೆಂಗಿನಕಾಯಿ ಇಟ್ಟು ನಾಗರ ಕಲ್ಲಿಗೆ ಪಂಚಾಮೃತ ಅಭಿಷೇಕ ಮಾಡಿ ಆರಾಧಿಸುವ ಸಂಪ್ರದಾಯವಿದೆ. ಮಂಜೇಶ್ವರದಲ್ಲಿ ನಾಗಪಂಚಮಿಯಂದು ಸಾವಿರಾರು ಭಕ್ತರು ಆಗಮಿಸಿ ಶ್ರದ್ಧಾ ಭಕ್ತಿಯಿಂದ ದೇವರಿಗೆ ಪೂಜೆ ಸಲ್ಲಿಸಿದರು.
ಬುಧವಾರ ಬೆಳಗ್ಗೆಯಿಂದ ಸುರಿಯುತ್ತಿದ್ದ ಮಳೆಯ ನಡುವೆಯೇ ಸಾವಿರಾರು ಭಕ್ತಾದಿಗಳು ಮಂಜೇಶ್ವರದ ಅನಂತೇಶ್ವರ ದೇವಾಲಯಕ್ಕೆ ಆಗಮಿಸಿ ದೇವಸ್ಥಾನದ ಆವರಣದಲ್ಲಿರುವ ನಾಗರಕಟ್ಟೆಯಲ್ಲಿ ವಿಶೇಷ ಪೂಜೆ ಸಲ್ಲಿಸಿದರು. ಕ್ಷೀರಾಭಿಷೇಕ, ಪಂಚಾಮೃತ ಅಭಿಷೇಕ ಮಾಡಿದರು.

ಮಂಜೇಶ್ವರಕ್ಕೆ ಹರಿದು ಬಂದ ಭಕ್ತಸಾಗರ :
ಬುಧವಾರ ಕಾಸರಗೋಡಿನ ಮಂಜೇಶ್ವರದ ಅನಂತೇಶ್ವರ ದೇವಾಲಯದಲ್ಲಿ ಸಾವಿರಾರು ಭಕ್ತಾದಿಗಳು ಶ್ರದ್ಧಾ ಭಕ್ತಿಯಿಂದ ನಾಗರ ಪಂಚಮಿ ಹಬ್ಬವನ್ನು ಆಚರಿಸಿದರು.ಹದಿನೆಂಟು ಪೇಟೆಯ ದೇವಳವೆಂಬ ಖ್ಯಾತಿ ಪಡೆದಿರುವ ಅನಂತೇಶ್ವರ ದೇವಾಲಯಕ್ಕೆ ನಾಗರ ಪಂಚಮಿಯಂದು ಭಕ್ತರು ಸಾವಿರಾರು ಸಂಖ್ಯೆಯಲ್ಲಿ ಆಗಮಿಸಿ ವಿಶೇಷ ಪೂಜೆ ಸಲ್ಲಿಸಿದರು.
ಮಳೆಯ ನಡುವೆಯೂ ಪೂಜೆ :
ಕಾಸರಗೋಡಿನಲ್ಲಿ ಇಂದು ಬೆಳಗ್ಗೆಯಿಂದಲೇ ಭಾರೀ ಮಳೆ ಸುರಿಯುತ್ತಿತ್ತು. ಅದನ್ನು ಲೆಕ್ಕಿಸದೆ ದೇವಾಲಯಕ್ಕೆ ಆಗಮಿಸಿದ ಭಕ್ತರು ನಾಗರ ಕಲ್ಲಿಗೆ ಪಂಚಾಮೃತ ಮತ್ತು ಕ್ಷೀರಾಭಿಷೇಕ ಮಾಡಿದರು.
ದೂರ-ದೂರದಿಂದ ಬಂದರು :
ಪುರಾಣ ಪ್ರಸಿದ್ಧ ಅನಂತೇಶ್ವರ ದೇವಾಲಯಕ್ಕೆ ಮಂಗಳೂರು, ಉಡುಪಿ ,ಕುಂದಾಪುರ , ಪುತ್ತೂರು , ಹಾಸನ, ಮಡಿಕೇರಿ, ಮುಂಬೈ , ಬೆಂಗಳೂರು , ಚೆನೈ ಮುಂತಾದ ಜಿಲ್ಲೆಗಳಿಂದ ಸಾವಿರಾರು ಭಕ್ತರು ಆಗಮಿಸಿದ್ದರು.
ಚಿತ್ರ : ಮಂಜು ನಿರೇಶ್ವಾಲ್ಯ
Comments are closed.