ಕರಾವಳಿ

ಪ್ರಾಕೃತಿಕ ವಿಕೋಪ: ದ.ಕ. ಜಿಲ್ಲೆಗೆ 50 ಕೋಟಿ ರೂ. ಬಿಡುಗಡೆ

Pinterest LinkedIn Tumblr

ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ತೀವ್ರ ಮಳೆಯಾಗಿ, ಪ್ರಾಕೃತಿಕ ವಿಕೋಪಗಳು ಸಂಭವಿಸುತ್ತಿರುವ ಹಿನ್ನೆಲೆಯಲ್ಲಿ ಗುರುವಾರ ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಕುಮಾರಸ್ವಾಮಿ ಅವರು ಸಚಿವರೊಂದಿಗೆ ಸಭೆ ನಡೆಸಿದರು.

ಕಂದಾಯ ಸಚಿವ ಆರ್.ವಿ.ದೇಶಪಾಂಡೆ, ನಗರಾಭಿವೃದ್ಧಿ ಮತ್ತು ದ.ಕ. ಜಿಲ್ಲಾ ಉಸ್ತುವಾರಿ ಸಚಿವ ಯು.ಟಿ. ಖಾದರ್, ಕೊಡಗು ಜಿಲ್ಲಾ ಉಸ್ತುವಾರಿ ಸಚಿವ ಸಾ.ರಾ. ಮಹೇಶ್ ಮತ್ತಿತರರು ಸಭೆಯಲ್ಲಿ ಭಾಗವಹಿಸಿದ್ದರು.

ಸಚಿವ ಖಾದರ್, ಮುಖ್ಯಮಂತ್ರಿಗಳಿಗೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಉಂಟಾಗಿರುವ ಪ್ರಕ್ರತಿ ವಿಕೋಪಗಳ ಬಗ್ಗೆ ಮುಖ್ಯಮಂತ್ರಿಗಳಿಗೆ ಮನವರಿಕೆ ಮಾಡಿದರು.

ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಉಂಟಾಗಿರುವ ಪ್ರಾಕೃತಿಕ ವಿಕೋಪ ದುರಂತಗಳ ನಿರ್ವಹಣೆಗೆ ರೂ. 200 ಕೋಟಿ ನೆರವನ್ನು ಜಿಲ್ಲಾಧಿಕಾರಿಗಳಿಗೆ ಬಿಡುಗಡೆ ಮಾಡಲು ಮುಖ್ಯಮಂತ್ರಿಗಳು ಸೂಚಿಸಿದ್ದು, ಈ ಪೈಕಿ ದ.ಕ. ಜಿಲ್ಲೆಗೆ 50 ಕೋಟಿ ರೂ. ಬಿಡುಗಡೆ ಯಾಗಲಿದೆ. ಇನ್ನಷ್ಟು ನೆರವು ನೀಡಲು ರಾಜ್ಯ ಸರಕಾರ ಸಿದ್ಧವಿದೆ ಎಂದು ಸಚಿವ ಯು.ಟಿ. ಖಾದರ್ ತಿಳಿಸಿದ್ದಾರೆ.

Comments are closed.