ಉಡುಪಿ: ಒಂದೇ ಮನೆಯಲ್ಲಿ ಭಾವ ಮತ್ತು ಬಾಮೈದ ಆತ್ಮಹತ್ಯೆ ಮಾಡಿಕೊಂಡ ಘಟನೆ ಉಡುಪಿಯ ಕಾರ್ಕಳದಲ್ಲಿ ನಡೆದಿದೆ.ಕಾರ್ಕಳ ತಾಲೂಕಿನ ಕಲ್ಯ ಗ್ರಾಮದಲ್ಲಿ ಈ ಘಟನೆ ನಡೆದಿದೆ.ನವೀನ್ (28) ಮತ್ತು ಪ್ರೀತೇಶ್ (24) ಆತ್ಮಹತ್ಯೆ ಮಾಡಿಕೊಂಡ ಯುವಕರಾಗಿದ್ದಾರೆ.

ನವೀನ್ ಗೇರುಬೀಜ ಫ್ಯಾಕ್ಟರಿಯೊಂದರಲ್ಲಿ ಕೆಲಸ ಮಾಡುತ್ತಿದ್ದರು. ಮತ್ತೋರ್ವ ಪ್ರೀತೇಶ್ ಮಣಿಪಾಲದ ಖಾಸಗಿ ಕಂಪೆನಿಯಲ್ಲಿ ಉದ್ಯೋಗಿಯಾಗಿದ್ದರು. ಇವರಿಬ್ಬರೂ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ.
ಕಾರ್ಕಳ ಗ್ರಾಮಾಂತರ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದ್ದು ,ಪೊಲೀಸರು ಘಟನಾ ಸ್ಥಳಕ್ಕೆ ಆಗಮಿಸಿದ್ದು, ತನಿಖೆ ಕೈಗೆತ್ತಿಕೊಂಡಿದ್ದಾರೆ.
Comments are closed.