ಕರಾವಳಿ

ಮಂಗಳೂರಿನಲ್ಲಿ ಮಾದಕ ವಸ್ತು ಮಾರಾಟ ಜಾಲ ಪತ್ತೆ : 5 ಮಂದಿ ಸೆರೆ -ಕೋಕೆನ್, ನಗದು ಸೇರಿದಂತೆ ರೂ.20 ಲಕ್ಷ ಮೌಲ್ಯದ ಸೊತ್ತು ವಶ

Pinterest LinkedIn Tumblr

(ಸಾಂದರ್ಭಿಕ ಚಿತ್ರ)

ಮಂಗಳೂರು, ಆಗಸ್ಟ್.17 : ನಗರದಲ್ಲಿ ಸಾರ್ವಜನಿಕರಿಗೆ ಮಾದಕ ವಸ್ತು ಕೋಕೆನ್ ಅನ್ನು ಮಾರಾಟ ಮಾಡಲು ಯತ್ನಿಸುತ್ತಿದ್ದ ಬೃಹತ್ ಜಾಲವನ್ನು ಪತ್ತೆ ಹಚ್ಚಿರುವ ಮಂಗಳೂರು ಸಿಸಿಬಿ ಪೊಲೀಸರು 5 ಮಂದಿ ಆರೋಪಿಗಳನ್ನು ಬಂಧಿಸಿದ್ದಾರೆ.

ಬಂಧಿತ ಆರೋಪಿಗಳನ್ನು ಮಂಜೇಶ್ವರ, ಕಾಸರಗೋಡು ಕುಂಜತ್ತೂರು ನಿವಾಸಿ ವಿಜೇಶ್ ಕುಮಾರ್ (34), ಪುತ್ತೂರು ನರಿಮೊಗರು ನಿವಾಸ್ ನಿತಿನ್ (35), ಮಂಗಳೂರು ಬಿಜೈ ಚರ್ಚ್ ರಸ್ತೆಯ ಸಂತೋಷ್ ಕುಮಾರ್ (36), ಬೊಂದೇಲ್ ಕೆಎಚ್ ಬಿ ಕಾಲೋನಿಯ ಸಂದೀಪ್ ಕುಮಾರ್ (34) ಹಾಗೂ ಬಿಕರ್ನಕಟ್ಟೆ ಸೌಜನ್ಯ ಲೇನ್, 2 ನೇ ಕ್ರಾಸ್ ನಿವಾಸಿ ರಾಹುಲ್ (26) ಎಂದು ಗುರುತಿಸಲಾಗಿದೆ.

ಮಂಗಳೂರು ನಗರದಲ್ಲಿ ಮಾದಕ ವಸ್ತುವಾದ ಕೋಕೆನ್ ಅನ್ನು ಅಕ್ರಮವಾಗಿ ಹೊಂದಿಕೊಂಡು 4-5 ಮಂದಿ ವ್ಯಕ್ತಿಗಳು ತಮ್ಮ ಕಾರುಗಳಲ್ಲಿ ಯುವಕರಿಗೆ ಮಾರಾಟ ಮಾಡುತ್ತಿರುವುದಾಗಿ ದೊರೆತ ಖಚಿತ ಮಾಹಿತಿಯಂತೆ ಮಂಗಳೂರು ಸಿಸಿಬಿ ಪೊಲೀಸರು ನಡೆಸಿದ ಕಾರ್ಯಾಚರಣೆಯಲ್ಲಿ ಕೋಕೆನ್ ಹೊಂದಿದ ಐವರು ಆರೋಪಿಗಳನ್ನು ಬಂಧಿಸಿದ್ದಾರೆ. ಆರೋಪಿಗಳು ಗೋವಾದಿಂದ ಈ ಮಾದಕ ವಸ್ತುಗಳನ್ನು ತಂದು ಮಂಗಳೂರು ನಗರದಲ್ಲಿ ಸಾರ್ವಜನಿಕರಿಗೆ ಮಾರಾಟ ಮಾಡುತ್ತಿರುವುದಾಗಿ ಆರೋಪಿಗಳು ಒಪ್ಪಿಕೊಂಡಿರುವುದಾಗಿ ಪೊಲೀಸರು ತಿಳಿಸಿದ್ದಾರೆ.

ಬಂಧಿತ ಆರೋಪಿಗಳಿಂದ್ ರೂ. 50,000/- ಮೌಲ್ಯದ ಮಾದಕ ವಸ್ತುವಾದ ಕೋಕೆನ್ ಅನ್ನು ವಶಪಡಿಸಿಕೊಳ್ಳಲಾಗಿದೆ. ಅಲ್ಲದೇ ಆರೋಪಿಗಳಿಂದ, ಹೊಂಡಾ ಜಾಝ್, ಹುಂಡೈ ಐ20, ಮಾರುತಿ ಝೆನ್, 7 ಮೊಬೈಲ್ ಫೋನ್ ಹಾಗೂ ನಗದು ಹಣ ರೂ. 1,02,000/ ನ್ನು ಸ್ವಾಧೀನಪಡಿಸಿಕೊಳ್ಳಲಾಗಿದೆ. ವಶಪಡಿಸಿಕೊಂಡ ಸೊತ್ತಿನ ಆಂದಾಜು ಒಟ್ಟು ಮೌಲ್ಯ ರೂ. 19,57,000/ ಎಂದು ಹೇಳಲಾಗಿದೆ.

ಆರೋಪಿಗಳು ಮಂಗಳೂರು ನಗರದಲ್ಲಿ ಹಲವು ವ್ಯಕ್ತಿಗಳಿಗೆ ಈ ಮಾದಕ ವಸ್ತುವಾದ ಕೋಕೆನ್ ನ್ನು ಮಾರಾಟ ಮಾಡಿರುವ ಬಗ್ಗೆ ತಿಳಿದುಬಂದಿದ್ದು, ಈ ಬಗ್ಗೆ ಪೊಲೀಸರು ಹೆಚ್ಚಿನ ತನಿಖೆ ಮುಂದುವರಿಸಿದ್ದಾರೆ.

ಆರೋಪಿಗಳ ಪತ್ತೆ ಕಾರ್ಯಾಚರಣೆಯಲ್ಲಿ ಸಿಸಿಬಿ ಘಟಕದ ಇನ್ಸ್ ಪೆಕ್ಟರ್ ಶಾಂತಾರಾಮ ಮಂಗಳೂರು ಪೂರ್ವ ಪೊಲೀಸ್ ಠಾಣೆಯ ಇನ್ಸ್ ಪೆಕ್ಟರ್ ಮಾರುತಿ ನಾಯಕ್ ಹಾಗೂ ಸಿಸಿಬಿ ಘಟಕದ ಪಿಎಸ್ಐ ಶ್ಯಾಮ್ ಸುಂದರ್, ಹೆಚ್.ಡಿ.ಕಬ್ಬಾಳ್ ರಾಜ್ ಹಾಗೂ ಸಿಸಿಬಿ ಘಟಕದ ಸಿಬ್ಬಂದಿಗಳು ಮತ್ತು ಮಂಗಳೂರು ಪೂರ್ವ ಪೊಲೀಸ್ ಠಾಣೆಯ ಸಿಬ್ಬಂದಿಯವರು ಭಾಗವಹಿಸಿದ್ದರು.

Comments are closed.