ಕರಾವಳಿ

ಆಗಸ್ಟ್ 27 – 31: ದ.ಕ.ಜಿಲ್ಲೆಯ ವಿವಿಧೆಡೆ ಲೋಕಾಯುಕ್ತರ ಭೇಟಿ : ಸಾರ್ವಜನಿಕರಿಂದ ದೂರು ಅರ್ಜಿ ಸ್ವೀಕಾರ

Pinterest LinkedIn Tumblr

ಮಂಗಳೂರು ಆಗಸ್ಟ್ 19 : ಮಂಗಳೂರು ಲೋಕಾಯುಕ್ತ ವಿಭಾಗದ ಪೊಲೀಸ್ ಅಧೀಕ್ಷಕರು, ಪೊಲೀಸ್ ಉಪಾಧೀಕ್ಷಕರು ಹಾಗೂ ಪೊಲೀಸ್ ನಿರೀಕ್ಷಕರು ವಿವಿಧ ದಿನ ವಿವಿಧ ಸ್ಥಳಗಳಿಗೆ ಭೇಟಿ ನೀಡಿ, ಕರ್ನಾಟಕ ಲೋಕಾಯುಕ್ತ ಕಾಯಿದೆ ಅಡಿ ದೂರು ಅರ್ಜಿಯ ನಮೂನೆಗಳನ್ನು ವಿತರಿಸಲಾಗುವುದು.

ಭರ್ತಿ ಮಾಡಿ, ನೋಟರಿಯಿಂದ ಅಫಿದಾವಿತ್ ಮಾಡಿಸಿದ ಸದ್ರಿ ದೂರು ಅರ್ಜಿಗಳನ್ನು ಸ್ವೀಕರಿಸಲಾಗುವುದು. ಸರ್ಕಾರಿ ಕಛೇರಿಗಳಲ್ಲಿ ಅಧಿಕೃತ ಕೆಲಸಗಳಲ್ಲಿ ವಿಳಂಬ ಹಾಗೂ ಇನ್ನಿತರೇ ತೊಂದರೆ ನೀಡುತ್ತಿರುವ ಸರಕಾರಿ ಅಧಿಕಾರಿ/ನೌಕರರ ವಿರುದ್ಧ ಸಾರ್ವಜನಿಕರು ದೂರುಗಳನ್ನು ನಿಗಧಿತ ಪ್ರಪತ್ರದಲ್ಲಿ ನೀಡಬಹುದಾಗಿದೆ. ಸಾರ್ವಜನಿಕರು ಈ ಅವಕಾಶವನ್ನು ಸದುಪಯೋಗ ಪಡಿಸಿಕೊಳ್ಳಬಹುದಾಗಿದೆ.

ಆಗಸ್ಟ್ 27 ರಂದು ಬೆಳಿಗ್ಗೆ 11 ರಿಂದ ಮಧ್ಯಾಹ್ನ 1 ಗಂಟೆಯವರೆಗೆ ಸುಳ್ಯ ತಾಲೂಕು ಕಛೇರಿ, ಆಗಸ್ಟ್ 28 ರಂದು ಬೆಳಿಗ್ಗೆ 11 ರಿಂದ ಮಧ್ಯಾಹ್ನ 1 ಗಂಟೆಯವರೆಗೆ ಪುತ್ತೂರು ತಾಲೂಕು ಕಛೇರಿ, ಆಗಸ್ಟ್ 29 ರಂದು ಬೆಳಿಗ್ಗೆ 11 ರಿಂದ ಮಧ್ಯಾಹ್ನ 1 ಗಂಟೆಯವರೆಗೆ ಮೂಡಬಿದ್ರೆ ವಿಶೇಷ ತಹಶೀಲ್ದಾರರ ಕಛೇರಿ, ಆಗಸ್ಟ್ 30 ರಂದು ಬೆಳಿಗ್ಗೆ 11 ರಿಂದ ಮಧ್ಯಾಹ್ನ 1 ಗಂಟೆಯವರೆಗೆ ಬೆಳ್ತಂಗಡಿ ತಾಲೂಕು ಕಛೇರಿ, ಮಧ್ಯಾಹ್ನ 3 ರಿಂದ ಸಂಜೆ 4-30 ಗಂಟೆಯವರೆಗೆ ಬಂಟ್ವಾಳ ತಾಲೂಕು ಕಛೇರಿ, ಆಗಸ್ಟ್ 31 ರಂದು ಬೆಳಿಗ್ಗೆ 11 ರಿಂದ ಮಧ್ಯಾಹ್ನ 1 ಗಂಟೆಯವರೆಗೆ ಮಂಗಳೂರು ತಹಶೀಲ್ದಾರರ ಕಛೇರಿ.

ಇದಲ್ಲದೇ ಉಳಿದ ದಿನಗಳಲ್ಲೂ ಕಛೇರಿ ವೇಳೆಯಲ್ಲಿ ಸಹ ಸಾರ್ವಜನಿಕರು ತಮ್ಮ ಅಹವಾಲು/ದೂರುಗಳನ್ನು ನೀಡಬಹುದಾಗಿದೆ ಅಥವಾ ದೂರವಾಣಿ ಮೂಲಕವೂ ಸಂಪರ್ಕಿಸಬಹುದಾಗಿದೆ. ಸಾರ್ವಜನಿಕರು ಇದರ ಸದುಪಯೋಗವನ್ನು ಪಡೆಯುವಂತೆ ಕೋರಲಾಗಿದೆ.

ಅನಾಮಧೇಯ ಅರ್ಜಿಗಳು ಬಂದಲ್ಲಿ ಯಾವುದೇ ಕ್ರಮ ತೆಗೆದುಕೊಳ್ಳಲು ಸಾಧ್ಯವಾಗುವುದಿಲ್ಲ. ಅರ್ಜಿದಾರರು ನಮೂನೆ I & IIರಲ್ಲಿ ಭರ್ತಿ ಮಾಡಿ ನೋಟರಿಯಿಂದ ಅಫಿದಾವಿತ್ ಮಾಡಿ ಸಲ್ಲಿಸಿದ ಅರ್ಜಿಗಳನ್ನು ಈ ಕಛೇರಿಗೆ ಅಥವಾ ನೇರವಾಗಿ ಮಾನ್ಯ ನಿಬಂಧಕರು, ಕರ್ನಾಟಕ ಲೋಕಾಯುಕ್ತ, ಬಹುಮಹಡಿಗಳ ಕಟ್ಟಡ, ಡಾ/ಬಿ.ಆರ್. ಅಂಬೇಡ್ಕರ್ ವೀಧಿ, ಬೆಂಗಳೂರು-560001 ರವರಿಗೆ ಸಲ್ಲಿಸಬೇಕು.

ಪೊಲೀಸ್ ಉಪಾಧೀಕ್ಷಕರ ಕಛೇರಿ – 0824 – 2453420 ಪೊಲೀಸ್ ನಿರೀೀಕ್ಷಕರ ಕಛೇರಿ – 0824-2427237 /9448530051 ಸಂಪರ್ಕಿಸಲು ಪ್ರಕಟಣೆ ತಿಳಿಸಿದೆ.

Comments are closed.