ಕರಾವಳಿ

ಲಾಲ್‌ಭಾಗ್ ಜಂಕ್ಷನ್‌ನಲ್ಲಿ ಅಕ್ರಮ ಗಾಂಜಾ ಮಾರಾಟಕ್ಕೆ ಯತ್ನಿಸುತ್ತಿದ್ದ ಮೂವರು ಆರೋಪಿಗಳ ಸೆರೆ

Pinterest LinkedIn Tumblr

ಮಂಗಳೂರು, ಆಗಸ್ಟ್.19: ಕಾನೂನು ಬಾಹಿರವಾಗಿ ಗಾಂಜಾ ಮಾರಾಟಕ್ಕೆ ಯತ್ನಿಸುತ್ತಿದ್ದ ಆರೋಪದ ಮೇಲೆ ಮೂವರು ಆರೋಪಿಗಳನ್ನು ಆರ್ಥಿಕ ಮತ್ತು ನಾರ್ಕೊಟಿಕ್ ಕ್ರೈಂ ಠಾಣಾ ಪೊಲೀಸರು ಶನಿವಾರ ನಗರದ ಲಾಲ್‌ಭಾಗ್ ಜಂಕ್ಷನ್‌ನಲ್ಲಿ ಬಂಧಿಸಿದ್ದಾರೆ.

ಬಂಧಿತ ಆರೋಪಿಗಳನ್ನು ಸಕಲೇಶಪುರ ನಿವಾಸಿಗಳಾದ ರಫೀಕ್ (30), ಸೈಯದ್ ಶಫೀದ್ (30), ಮಲ್ಲಿಕಾರ್ಜುನ (30) ಎಂದು ಗುರುತಿಸಲಾಗಿದೆ.

ಆ.18ರಂದು ನಗರದ ಲಾಲ್‌ಭಾಗ್ ಜಂಕ್ಷನ್‌ನ ಬಸ್ ನಿಲ್ದಾಣದ ಬಳಿ ಮೂವರು ವ್ಯಕ್ತಿಗಳು ಗಾಂಜಾ ಮಾರಾಟ ಮಾಡಲು ಪ್ರಯತ್ನಿಸುತ್ತಿದ್ದ ಬಗ್ಗೆ ಖಚಿತ ಮಾಹಿತಿ ಪಡೆದ ಪೊಲೀಸರು ದಾಳಿ ನಡೆಸಿ ಮೂವರನ್ನು ವಶಕ್ಕೆ ಪಡೆದುಕೊಂಡಿದ್ದಾರೆ.

ಆರೋಪಿಗಳಿಂದ 3.5 ಕೆ.ಜಿ. ತೂಕದ 46 ಸಾವಿರ ರೂ. ಮೌಲ್ಯದ ಗಾಂಜಾ, 12 ಸಾವಿರ ರೂ. ಮೌಲ್ಯದ ಮೂರು ಮೊಬೈಲ್ ಫೋನ್‌ಗಳು ಹಾಗೂ 550 ರೂ. ನಗದು ಸೇರಿ 58,550 ರೂ. ಮೌಲ್ಯದ ಸೊತ್ತುಗಳನ್ನು ಸ್ವಾಧೀನಪಡಿಸಿಕೊಳ್ಳಲಾಗಿದೆ.

ನಗರ ಪೊಲೀಸ್ ಆಯುಕ್ತ ಟಿ.ಸುರೇಶ್ ಆದೇಶದಂತೆ ಕಾನೂನು ಮತ್ತು ಸುವ್ಯವಸ್ಥೆಯ ಡಿಸಿಪಿ ಹನುಮಂತರಾಯ ನಿರ್ದೇಶನದಂತೆ ಅಪರಾಧ ಮತ್ತು ಸಂಚಾರ ವಿಭಾಗದ ಡಿಸಿಪಿ ಉಮಾ ಪ್ರಶಾಂತ್ ಮಾರ್ಗದರ್ಶನದಲ್ಲಿ ನಡೆದ ಕಾರ್ಯಾಚರಣೆಯಲ್ಲಿ ಪೊಲೀಸ್ ನಿರೀಕ್ಷಕ ಮುಹಮ್ಮದ್ ಶರೀಫ್, ಪೊಲೀಸ್ ಉಪನಿರೀಕ್ಷಕಿ ಮಂಜುಳಾ ಮತ್ತು ಸಿಬ್ಬಂದಿ ಲಕ್ಷ್ಮೀಶ್, ಜಗದೀಶ್, ಶಾಜು ನಾಯರ್, ಕಿಶೋರ್ ಪೂಜಾರಿ ಹಾಗೂ ಭಾಸ್ಕರ್ ಮುಂತಾದವರು ಭಾಗವಹಿಸಿದ್ದರು.ಈ ಬಗ್ಗೆ ಇಕೊನಾಮಿಕ್ ಮತ್ತು ನಾರ್ಕೊಟಿಕ್ಸ್ ಕ್ರೈಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Comments are closed.