ಕರಾವಳಿ

ಕಲ್ಲಡ್ಕ : ಚೂರಿ ಇರಿತ ಪ್ರಕರಣದ ಆರೋಪಿ ಎಂಟು ತಿಂಗಳ ಬಳಿಕ ಸೆರೆ

Pinterest LinkedIn Tumblr

ಬಂಟ್ವಾಳ, ಸೆಪಟಂಬರ್. 02: ಕಲ್ಲಡ್ಕದಲ್ಲಿ ನಡೆದ ಚೂರಿ ಇರಿತ ಪ್ರಕರಣವೊಂದಕ್ಕೆ ಸಂಬಂಧಪಟ್ಟಂತೆ ಕಳೆದ ಎಂಟು ತಿಂಗಳಿನಿಂದ ಪೊಲೀಸರಿಂದ ತಎಮರೆಸಿಕೊಂಡಿದ್ದ ಆರೋಪಿಯನ್ನು ಬಂಟ್ವಾಳ ನಗರ ಠಾಣೆ ಪೊಲೀಸರು ಶನಿವಾರ ಬಂಧಿಸಿದ್ದಾರೆ.

ಬಂಧಿತ ಆರೋಪಿಯನ್ನು ಕಲ್ಲಡ್ಕ ನಿವಾಸಿ ಫಾರೂಕ್ ಯಾನೆ ಚೆನ್ನ ಫಾರೂಕ್ ಎಂದು ಗುರುತಿಸಲಾಗಿದೆ.

ಫಾರೂಕ್‍ ಕಲ್ಲಡ್ಕದಲ್ಲಿ ಎಂಟು ತಿಂಗಳ ಹಿಂದೆ ವೀರಕಂಭ ನಿವಾಸಿ ಕೇಶವ ಎಂಬಾತನಿಗೆ ಚೂರಿ ಇರಿದು ಪರಾರಿಯಾಗಿದ್ದ. ಆರೋಪಿ ಕರೋಪಾಡಿ ಗ್ರಾಮ ಪಂಚಾಯತ್ ಉಪಾಧ್ಯಕ್ಷ ಜಲೀಲ್ ಕರೋಪಾಡಿ ಕೊಲೆ ಪ್ರಕರಣದ ಆರೋಪಿಯಾಗಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

ಬಂಟ್ವಾಳ ವೃತ್ತ ನಿರೀಕ್ಷಕ ಟಿ.ಡಿ.ನಾಗರಾಜ್ ಮತ್ತು ಬಂಟ್ವಾಳ ನಗರ ಠಾಣಾ ಉಪನಿರೀಕ್ಷಕ ಚಂದ್ರಶೇಖರ್, ಅಪರಾಧ ವಿಭಾಗದ ಎಸ್ಸೈ ಹರೀಶ್, ಗ್ರಾಮಾಂತರ ಠಾಣಾ ಎಸ್ಸೈ ಪ್ರಸನ್ನ ನೇತೃತ್ವದಲ್ಲಿ ನಡೆದ ಕಾರ್ಯಾಚರಣೆಯಲ್ಲಿ ಆರೋಪಿಯನ್ನು ಕಲ್ಲಡ್ಕದಲ್ಲಿ ಬಂಧಿಸಲಾಗಿದೆ.

ಆರೋಪಿ ಫಾರೂಕ್‍ಗೆ ಆಶ್ರಯ ನೀಡಿದ ಕಲ್ಲಡ್ಕ ನಿವಾಸಿ ತೌಫೀಕ್ ಎಂಬಾತನನ್ನು ಕೂಡಾ ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದು, ಮುಂದಿನ ಕ್ರಮ ಕೈಗೊಂಡಿದ್ದಾರೆ ಎಂದು ತಿಳಿದು ಬಂದಿದೆ.

Comments are closed.