ಕರಾವಳಿ

ಭಾರತ್ ಬಂದ್ ವೇಳೆ ಶಿವಭಾಗ್‌ನ ಹೊಟೇಲ್‌ಗೆ ಕಲ್ಲು ತೂರಾಟ :ಇಬ್ಬರು ವ್ಯಕ್ತಿಗಳ ವಿರುದ್ಧ ಪ್ರಕರಣ ದಾಖಲು

Pinterest LinkedIn Tumblr

ಮಂಗಳೂರು, ಸೆಪ್ಟಂಬರ್.10: ಪೆಟ್ರೋಲ್,ಡಿಸೇಲ್ ಹಾಗೂ ಗ್ಯಾಸ್ ಬೆಲೆ ಏರಿಕೆ ವಿರುದ್ಧ ದೇಶದಾದ್ಯಂತ ಸೋಮವಾರ ಕಾಂಗ್ರೆಸ್ ಪಕ್ಷ ನೀಡಿರುವ ಭಾರತ ಬಂದ್‌ ವೇಳೆ ನಗರದ ಶಿವಭಾಗ್‌ನ ಹೊಟೇಲ್‌ವೊಂದಕ್ಕೆ ದುಷ್ಕರ್ಮಿಗಳು ಕಲ್ಲು ತೂರಾಟ ನಡೆಸಿದ ಘಟನೆ ನಡೆದಿದ್ದು, ಈ ಬಗ್ಗೆ ಪೊಲೀಸರು ಇಬ್ಬರು ವ್ಯಕ್ತಿಗಳ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ.

ಸೋಮವಾರ ಬೆಳಗ್ಗೆ ನಂತೂರು ಕಡೆಯಿಂದ ಬೆಂದೂರ್‌ವೆಲ್ ಕಡೆಗೆ ಬೈಕ್‌ನಲ್ಲಿ ಹೆಲ್ಮೆಟ್ ಧರಿಸಿದ ಇಬ್ಬರು ದುಷ್ಕರ್ಮಿಗಳು ಬಂದು ಅದರಲ್ಲಿ ಒಬ್ಬಾತ ಹೊಟೇಲ್ ಮುಂಭಾಗ ಬಂದು ಹೊಟೇಲ್ ಮೇಲೆ ಕಲ್ಲು ತೂರಾಟ ಮಾಡಿದ್ದಾನೆ. ಈ ವೇಳೆ ಶಬ್ದ ಕೇಳಿ ಹೊರಗೆ ಓಡಿ ಬಂದ ಹೊಟೇಲ್ ಸಿಬ್ಬಂದಿ ದುಷ್ಕರ್ಮಿಯನ್ನು ಹಿಡಿಯಲು ಪ್ರಯತ್ನಿಸಿದಾಗ ಆತ ಬೈಕ್ ಮೂಲಕ ಪರಾರಿಯಾಗಿದ್ದಾನೆ.

ಕಲ್ಲು ತೂರಾಟದ ವಿಡಿಯೋ ಸಿಸಿ ಟಿವಿಯಲ್ಲಿ ದಾಖಲಾಗಿದ್ದು, ಈ ಕ್ಲಿಪ್ಪಿಂಗ್ ಪೊಲೀಸರಿಗೆ ನೀಡಲಾಗಿದೆ. ಈ ಅಧಾರದ ಮೇಲೆ ಕದ್ರಿ ಸಂಚಾರಿ ಪೊಲೀಸ್ ಠಾಣೆಯಲ್ಲಿ ಇಬ್ಬರ ಮೇಲೆ ಪ್ರಕರಣ ದಾಖಲಿಸಲಾಗಿದೆ.

Comments are closed.