ಕರಾವಳಿ

ಬೈಕಂಪಾಡಿ -ಜೋಕಟ್ಟೆ ಬಳಿ ಉರುಳಿ ಬಿದ್ದ ಸಿಟಿ ಬಸ್ : 30ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಾಯ

Pinterest LinkedIn Tumblr

ಮಂಗಳೂರು, ಸೆಪ್ಟಂಬರ್.11: ಸುರತ್ಕಲ್‌: ಬೈಕಂಪಾಡಿ -ಜೋಕಟ್ಟೆ ಬಳಿ ಖಾಸಗಿ ಬಸ್ಸೊಂದು ಉರುಳಿಬಿದ್ದ ಪರಿಣಾಮ ಹಲವು ಪ್ರಯಾಣಿಕರು ಗಂಭೀರವಾಗಿ ಗಾಯಗೊಂಡ ಘಟನೆ ಇಂದು ಬೆಳಗ್ಗೆ ಸಂಭವಿಸಿದೆ.

ಕಾಟಿಪಳ್ಳ-ಕೈಕಂಬ ಕಡೆಯಿಂದ ಮಂಗಳೂರಿನತ್ತ ಬರುತ್ತಿದ್ದ ಖಾಸಗಿ ಬಸ್ ಇದಾಗಿದ್ದು, ಇಂದು ಬೆಳಗ್ಗೆ 8 ಗಂಟೆ ಸುಮಾರಿಗೆ ಸುರತ್ಕಲ್‌: ಬೈಕಂಪಾಡಿ -ಜೋಕಟ್ಟೆ ಬಳಿ ಈ ಅಪಘಾತ ಸಂಭವಿಸಿದೆ. ಕಾಟಿಪಳ್ಳ ಕಡೆಯಿಂದ ಮಂಗಳೂರಿನತ್ತ ಬರುತ್ತಿದ್ದ ಬಸ್ ಬೈಕಂಪಾಡಿಯಿಂದ ಜೋಕಟ್ಟೆಗೆ ತೆರಳುವ ತಿರುವಿನ ಸಮೀಪ ಚಾಲಕನ ನಿಯಂತ್ರಣ ತಪ್ಪಿದ ರಸ್ತೆ ಬದಿಗೆ ಉರುಳಿಬಿದ್ದಿದೆ.

ಬಸ್ಸಿನಲ್ಲಿದ್ದ 35ಕ್ಕೂ ಅಧಿಕ ಪ್ರಯಾಣಿಕರಿಗೆ ಗಾಯಗಳಾಗಿವೆ. ಈ ಪೈಕಿ ಇಬ್ಬರ ಸ್ಥಿತಿ ಗಂಭೀರವಾಗಿದೆ ಎಂದು ತಿಳಿದುಬಂದಿದೆ. ಕೆಲವರ ಮೂಳೆ ಮುರಿತಕ್ಕೊಳಗಾಗಿದೆ ಎಂದು ತಿಳಿದು ಬಂದಿದೆ. ಗಾಯಾಳುಗಳನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಎಲ್ಲಾ ಗಾಯಾಳುಗಳು ಪ್ರಾಯಾಪಾಯದಿಂದ ಪಾರಾಗಿದ್ದಾರೆ ಎಂದು ತಿಳಿದು ಬಂದಿದೆ.

ಬೆಳಗ್ಗಿನ ವೇಳೆಯಾದ ಕಾರಣ ಪ್ರಯಾಣಿಕರಿಂದ ಬಸ್‌ ತುಂಬಿಕೊಂಡಿತ್ತು.ಶಾಲಾ ,ಕಾಲೇಜು ವಿದ್ಯಾರ್ಥಿಗಳು, ಕಚೇರಿಗಳಿಗೆ ತೆರಳುತ್ತಿದ್ದವರಿದ್ದರು. ಬಸ್ ಪ್ರಯಾಣಿಕರಿಂದ ತುಂಬಿ ತುಳುಕುತ್ತಿತ್ತು. ಅದೃಷ್ಟವಶಾತ್ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ.

ಘಟನೆಯ ಬಗ್ಗೆ ಮಂಗಳೂರು ಉತ್ತರ ಸಂಚಾರಿ ಪೊಲೀಸರು ಸ್ಥಳಕ್ಕಾಗಮಿಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ

Comments are closed.