ಕರಾವಳಿ

ಉಡುಪಿ SP ವರ್ಗಾವಣೆ ಮಾಡಿದ್ರೆ ಸಹಿಸಲ್ಲ: ಸರಕಾರಕ್ಕೆ ಕೋಟ ಶ್ರೀನಿವಾಸ ಪೂಜಾರಿ ಎಚ್ಚರಿಕೆ

Pinterest LinkedIn Tumblr

ಉಡುಪಿ: ಸುಸೂತ್ರ ಆಡಳಿತಕ್ಕೆ ನಮ್ಮ ಸಹಕಾರವಿದೆ. ಆದರೆ ಉಡುಪಿ ಜಿಲ್ಲಾ ಎಸ್ಪಿಯವರನ್ನು ರಾಜಕೀಯ ಕಾರಣಕ್ಕೆ ವರ್ಗಾವಣೆ ಮಾಡಿದರೆ ಸಹಿಸೋದಿಲ್ಲ..ಇದು ಎಚ್ಚರಿಕೆ ಎಂದು ಸರಕಾರಕ್ಕೆ ವಿಧಾನ ಪರಿಷತ್ ವಿಪಕ್ಷ ನಾಯಕ ಕೋಟ ಶ್ರೀನಿವಾಸ ಪೂಜಾರಿ ಎಚ್ಚರಿಸಿದ ಟ್ವೀಟ್ ಇದು.

(ಕೋಟ ಶ್ರೀನಿವಾಸ ಪೂಜಾರಿ)

(ಉಡುಪಿ ಎಸ್ಪಿ ಲಕ್ಷ್ಮಣ ನಿಂಬರ್ಗಿ)

ಕೆಲ ದಿನಗಳ ಹಿಂದೆ ನಡೆದ ಭಾರತ್ ಬಂದ್ ವೇಳೆ ಉಡುಪಿಯಲ್ಲಿ ಬಿಜೆಪಿ ಹಾಗೂ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರ ಜೊತೆ ವಾಗ್ವಾದ ನಡೆದಿತ್ತು. ಆ ಬಳಿಕ ಪೊಲೀಸ್ ವರಿಷ್ಟಾಧಿಕಾರಿಗಳ ಕಛೆರಿ ಎದುರು ಇತ್ತಂಡದವರು ಜಮಾಯಿಸಿದ್ದರು. ಈ ವಾಗ್ವಾದ ವಿಕೋಪಕ್ಕೆ ತಿರುಗಿ ಕಾನೂನು ಸುವ್ಯಸ್ಥೆಗೆ ಹದಗೆಡುವ ಸ್ಥಿತಿ ತಲುಪಿದಾಗ ಖುದ್ದು ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲಕ್ಷ್ಮಣ ನಿಂಬರಗಿ ಸ್ಥಳಕ್ಕಾಗಮಿಸಿದ್ದರು. ಆ ವೇಳೆಯೂ ಪರಿಸ್ಥಿತಿ ಕೈ ಮೀರಿದಾಗ ಲಘು ಲಾಠಿ ಚಾರ್ಜ್ ನಡೆಸಿದ್ದರು.

ಈ ಬಗ್ಗೆ ಇಂದು ಕಾಂಗ್ರೆಸ್ ಕಾರ್ಯಕರ್ತರು ಜಿಲ್ಲಾ ಉಸ್ತುವಾರಿ ಸಚಿವೆ ಡಾ. ಜಯಮಾಲಾರನ್ನು ತರಾಟೆಗೆತ್ತಿಕೊಂಡು ಎಸ್ಪಿ ವರ್ಗಾವಣೆ ಬಗ್ಗೆ ಪಟ್ಟು ಹಿಡಿದಿದ್ದಾರೆ. ಅದಕ್ಕೆ ಅವರು ಯವುದೇ ಪ್ರತಿಕ್ರಿಯೆಯನ್ನು ನೀಡಿಲ್ಲ.

ಮುಂದುವರಿದ ರಾಜಕೀಯ ಬೆಳವಣಿಗೆಯಲ್ಲಿ ವಿಧಾನ ಪರಿಷತ್ ವಿಪಕ್ಷ ನಾಯಕ ಕೋಟ ಶ್ರೀನಿವಾಸ ಪೂಜಾರಿ ಟ್ವೀಟ್ ಮಾಡಿದ್ದು ತಾನು ಎಸ್ಪಿ ಬೆಂಬಲಕ್ಕೆ ನಿಲ್ಲುವ ಪರೋಕ್ಷ ಎಚ್ಚರಿಕೆ ನೀಡಿದ್ದಾರೆ.

(ವರದಿ- ಯೋಗೀಶ್ ಕುಂಭಾಸಿ)

Comments are closed.