ಕರಾವಳಿ

ಜ್ಞಾನಪೀಠ ಪ್ರಶಸ್ತಿ ವಿಜೇತ ಕೋಟ ಕಾರಂತರ 116ನೇ ಹುಟ್ಟುಹಬ್ಬ ಆಚರಣೆ :ಸಾಧಕರಿಗೆ ಪ್ರಶಸ್ತಿ ಪ್ರದಾನ

Pinterest LinkedIn Tumblr

ಮಂಗಳೂರು, ಅಕ್ಟೋಬರ್.11: ಜ್ಞಾನಪೀಠ ಪ್ರಶಸ್ತಿ ವಿಜೇತ ಕೋಟ ಕಾರಂತರ 116ನೇ ಹುಟ್ಟುಹಬ್ಬವನ್ನು‌ ಬುಧವಾರ ಮಂಗಳೂರು ಪುರಭವನದಲ್ಲಿ ‌ಆಚರಿಸಲಾಯಿತು.

ದ.ಕ. ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಮತ್ತು ಸಂಸ್ಕೃತಿ ಇಲಾಖೆ ಹಾಗೂ ಕಲ್ಕೂರ ಪ್ರತಿಷ್ಠಾನದ‌ ಆಶ್ರಯಲ್ಲಿ ಹಮ್ಮಿಕೊಳ್ಳಲಾದ ಈ ಸಮಾರಂಭವನ್ನು ಮಂಗಳೂರು ಮಹಾನಗರ ಪಾಲಿಕೆಯ ಮೇಯರ್‌ ಭಾಸ್ಕರ್ ಕೆ. ಉದ್ಘಾಟಿಸಿ, ಡಾ.ಶಿವರಾಮ ಕಾರಂತರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿದರು.

ದ.ಕ. ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್‌ ಅಧ್ಯಕ್ಷ‌ ಎಸ್. ಪ್ರದೀಪ ಕುಮಾರ ಕಲ್ಕೂರ‌ ಅಧ್ಯಕ್ಷತೆಯಲ್ಲಿ ಜರಗಿದ ಈ ಕಾರ್ಯಕ್ರಮದಲ್ಲಿ ಕಾರಂತ ಹುಟ್ಟುಹಬ್ಬ ಪ್ರಯುಕ್ತ ವಿವಿಧ ವಿಭಾಗಗಳಲ್ಲಿ ಸಾಧನೆಗೈದ ಸಾಧಕರಿಗೆ ಪ್ರಶಸ್ತಿ ಪ್ರದಾನ ಮಾಡಲಾಯಿತು.

ಶಾಂತಿವನ ಟ್ರಸ್ಟ್ ಕಾರ್ಯದರ್ಶಿ ಸೀತಾರಾಮ ತೊಳ್ಪಡಿತ್ತಾಯ ಅವರಿಗೆ ‘ಕಲ್ಕೂರ ಸಾಧನಾ ಪ್ರಶಸ್ತಿ’, ಎಕ್ಕಾರು ಕನ್ನಡ ಪ್ರಾಧ್ಯಾಪಕ ಡಾ.ಎಸ್.ಪದ್ಮನಾಭ ಭಟ್, ಸಾಲಿಗ್ರಾಮ ಗೆಳೆಯರ ಬಳಗದ ಅಧ್ಯಕ್ಷ ತಾರಾನಾಥ ಹೊಳ್ಳ, ಚಿತ್ರಕಲಾ ಶಿಕ್ಷಕ ತಾರನಾಥ ಕೈರಂಗಳ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಪ್ರಭಾಕರ್ ಅವರಿಗೆ ‘ಕಲ್ಕೂರ ಸೇವಾ ಪ್ರಶಸ್ತಿ’ ನೀಡಿ ಗೌರವಿಸಲಾಯಿತು. ವಿಶೇಷ ಚೇತನ ರಾಷ್ಟ್ರ ಮಟ್ಟದ ಚೆಸ್ ಆಟಗಾರ್ತಿ ಯಶಸ್ವಿ ಕೆ. ಹಾಗೂ ರಾಷ್ಟ್ರ ಮಟ್ಟದ ತಬಲ ಸಾಧಕ ವಿಜಿತ್ ಕೆ. ಅವರಿಗೆ ‘ಕಲ್ಕೂರ ಯುವ ಪ್ರಶಸ್ತಿ’ ನೀಡಿ ಗೌರವಿಸಲಾಯಿತು.

ಚಿತ್ರರಂಗದಲ್ಲಿ ಕನ್ನಡ ಜಾಗೃತಿ ಸಂಚಲನ ಮೂಡಿಸಿರುವ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಕಾಸರಗೋಡು ಚಿತ್ರದ ಬಾಲನಟರಾದ ರಂಜನ್ ಸಾಜು, ಸಂಪತ್ ಗಣೇಶ್, ಸಪ್ತಾ ಪಾವೂರು, ಪ್ರಕೃತಿ ಡಿ. ಅಮೀನ್ ಅವರಿಗೆ ‘ಕಾರಂತ ಹುಟ್ಟುಹಬ್ಬ ಸಾಧನಾ ಪ್ರಶಸ್ತಿ’ಯನ್ನು ನೀಡಿ ಗೌರವಿಸಲಾಯಿತು.

ಮನಪಾ ಮೇಯರ್ ಭಾಸ್ಕರ್ ಕೆ., ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡಮಿಯ ಮಾಜಿ ಅಧ್ಯಕ್ಷ ಮುಹಮ್ಮದ್ ಹನೀಫ್ ಹಾಗೂ ಕಸಾಪ ಮಾಜಿ ಅಧ್ಯಕ್ಷ ಹರಿಕೃಷ್ಣ ಪುನರೂರು ಸಾಧಕರಿಗೆ ಪ್ರಶಸ್ತಿ ಪ್ರದಾನ ಮಾಡಿ, ಗೌರವಿಸಿದರು.

ಕಾರ್ಯಕ್ರಮದಲ್ಲಿ ಹಿರಿಯ ಸಾಹಿತಿ, ವಿಮರ್ಶಕ ಡಾ.ಪ್ರಭಾಕರ್ ಶಿಶಿಲ, ಮನಪಾದ ಮುಖ್ಯ ಸಚೇತಕ ಶಶಿಧರ್ ಹೆಗಡೆ, ಯೋಗಿಶ್ ಶೆಟ್ಟಿ, ರಾಧಾಕೃಷ್ಣ ಆಚಾರ್ಯ, ಪುರುಷೋತ್ತಮ, ಪ್ರದೀಪ್ ಆಳ್ವ ಮತ್ತಿತರರು ಉಪಸ್ಥಿತರಿದ್ದರು. ಕಾರ್ಯಕ್ರಮದ ಆರಂಭದಲ್ಲಿ ಸುರೇಶ್ ಶೆಟ್ಟಿ ಮತ್ತು ತಂಡ ಪ್ರಾರ್ಥನೆ ನೆರವೇರಿಸಿದರು. ಕಸಾಪ ಜಿಲ್ಲಾ ಅಧ್ಯಕ್ಷ ಪ್ರದೀಪಕುಮಾರ್ ಕಲ್ಕೂರ ಸ್ವಾಗತಿಸಿದರು.

Comments are closed.