ಕರಾವಳಿ

ಕುಮಾರಸ್ವಾಮಿ ಅವರ ಭಾವಚಿತ್ರವನ್ನು ಕ್ಷಣದಲ್ಲಿ ಬಿಡಿಸಿದ ಗ್ಲೋ ಆರ್ಟ್ ಕಲಾವಿದೆ ಶಬರಿ ಗಾಣಿಗ ; ಪ್ರಶಂಸೆ ವ್ಯಕ್ತಪಡಿಸಿದ ಸಿಎಂ

Pinterest LinkedIn Tumblr

ಮಂಗಳೂರು : ಕುದ್ರೋಳಿ ಶ್ರೀ ಗೋಕರ್ಣನಾಥೇಶ್ವರ ಕ್ಷೇತ್ರದಲ್ಲಿ ನಡೆಯುತ್ತಿರುವ ವೈಭವದ ಮಂಗಳೂರು ದಸರಾ ಮಹೋತ್ಸವಕ್ಕೆ ರವಿವಾರ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ಚಾಲನೆ ನೀಡಿದ ಸಂದರ್ಭ ನಡೆದ ಸಭಾ ಕಾರ್ಯಕ್ರಮದಲ್ಲಿ ನಗರದ ಖ್ಯಾತ ಗ್ಲೋ ಆರ್ಟ್ ಕಲಾವಿದೆ ಶಬರಿ ಗಾಣಿಗರ ಅವರು ವೇದಿಕೆ ಮೇಲೆ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರ ಭಾವಚಿತ್ರವನ್ನು ಕೆಲವೇ ನಿಮಿಷಗಳಲ್ಲಿ ಬಿಡಿಸುವ ಮೂಲಕ ಮುಖ್ಯಮಂತ್ರಿ ಸಹಿತಾ ವೇದಿಕೆಯಲ್ಲಿದ್ದ ಗಣ್ಯರ ಹಾಗೂ ನೆರದವರ ಮೆಚ್ಚುಗೆ ಗಳಿಸಿದರು.

ಈ ಚಿತ್ರವನ್ನು ಕುದ್ರೋಳಿ ದೇವಸ್ಥಾನದ ನವೀಕರಣ ರೂವಾರಿ, ಕೇಂದ್ರದ ಮಾಜಿ ಸಚಿವ ಬಿ.ಜನಾರ್ದನ ಪೂಜಾರಿ ಅವರು ಮುಖ್ಯಮಂತ್ರಿ .ಕುಮಾರಸ್ವಾಮಿ ಅವರಿಗೆ ಹಸ್ತಾಂತರಿಸಿದರು. ಕಾರ್ಯಕ್ರಮದಲ್ಲಿ ಕಲಾವಿದೆ ಶಬರಿ ಗಾಣಿಗರನ್ನು ಶ್ರೀ ಕ್ಷೇತ್ರದ ವತಿಯಿಂದ ಅಭಿನಂಧಿಸಲಾಯಿತು.

ಈ ಸಂದರ್ಭ ವೇದಿಕೆಯಲ್ಲಿ ಸಂಸದ ನಳಿನ್ ಕುಮಾರ್ ಕಟೀಲ್, ಶಾಸಕರಾದ ಕೋಟ ಶ್ರೀನಿವಾಸ ಪುಜಾರಿ, ರಾಜೇಶ್ ನಾಯ್ಕಾ, ವೇದವ್ಯಾಸ ಕಾಮತ್, ಹರೀಶ್ ಕುಮಾರ್, ಭೋಜೇಗೌಡ, ಮಾಜಿ ಸಚಿವರಾದ ಬಿ.ರಮಾನಾಥ ರೈ, ವಿನಯ ಕುಮಾರ್ ಸೊರಕೆ, ಮಾಜಿ ಶಾಸಕ ಜೆ.ಆರ್.ಲೋಬೊ, ಮನಪಾ ಮೇಯರ್ ಭಾಸ್ಕರ ಕೆ, ಕುದ್ರೋಳಿ ದೇವಸ್ಥಾನದ ಆಡಳಿತ ಸಮಿತಿಯ ಅಧ್ಯಕ್ಷ ಎಚ್.ಎಸ್.ಸಾಯಿರಾಮ್, ಉಪಾಧ್ಯಕ್ಷ ರಾಘವೇಂದ್ರ ಕೂಳೂರು, ಖಜಾಂಜಿ ಪದ್ಮ ರಾಜ್ ಆರ್, ಕಾರ್ಯದರ್ಶಿ ಮಾಧವ ಸುವರ್ಣ, ಕ್ಷೇತ್ರದ ಅಭಿವೃದ್ಧಿ ಸಮಿತಿಯ ಉಪಾಧ್ಯಕ್ಷೆ ಉರ್ಮಿಳಾ ರಮೇಶ್ ಪದಾಧಿಕಾರಿಗಳಾದ ಬಿ.ಕೆ.ತಾರಾನಾಥ್, ರವಿಶಂಕರ್ ಮಿಜಾರ್, ಕೆ. ಮಹೇಶ್‌ಚಂದ್ರ, ಸದಸ್ಯರಾದ ಹರಿಕೃಷ್ಣ ಬಂಟ್ವಾಳ, ಡಾ.ಬಿ.ಜೆ.ಸುವರ್ಣ, ಡಾ. ಅನಸೂಯ ಬಿ.ಟಿ, ರಾಧಾಕೃಷ್ಣ, ಹರಿಶ್ಚಂದ್ರ, ಡಿ.ಡಿ.ಕಟ್ಟೆಮಾರ್, ದೇವೇಂದ್ರ ಪುಜಾರಿ, ಶೇಖರ ಪೂಜಾರಿ ಮೊದಲಾದವರು ಉಪಸ್ಥಿತರಿದ್ದರು.

Comments are closed.