ಕರಾವಳಿ

ನಿಯಮ‌ ಉಲ್ಲಂಘಿಸುವ ಬಸ್ಸುಗಳ ವಿರುದ್ಧ ಸಮರ ಸಾರಿದ ಪೊಲೀಸ್ ಇಲಾಖೆ ; 35ಕ್ಕೂ ಅಧಿಕ ಬಸ್ ವಶ

Pinterest LinkedIn Tumblr

ಮಂಗಳೂರು, ಅಕ್ಟೋಬರ್.16: ನಗರದಲ್ಲಿ ಓಡಾಟ ನಡೆಸುವ ಸಮಯದಲ್ಲಿ ನಿಯಮ‌ ಉಲ್ಲಂಘಿಸುವ ಸಿಟಿ ಬಸ್ಸುಗಳ ವಿರುದ್ಧ ಸೋಮವಾರ ಪೊಲೀಸ್ ಇಲಾಖೆ ಹಾಗೂ ಆರ್ ಟಿ ಓ ಜಂಟೀ ಕಾರ್ಯಾಚರಣೆ ಆರಂಭಿಸಿದ್ದು, ನಿಯಮ ಉಲ್ಲಂಘನೆ ಮಾಡಿದ 35ಕ್ಕೂ ಅಧಿಕ ನಗರ ಸಾರಿಗೆ ಖಾಸಗಿ ಬಸ್‌ಗಳನ್ನು ವಶಪಡಿಸಿಕೊಳ್ಳಲಾಗಿದೆ.

ನಗರದ ಪೊಲೀಸ್ ಕಮಿಷನರೇಟ್ ಕಚೇರಿಯಲ್ಲಿ ನಡೆದ ಪೊಲೀಸ್ ಫೋನ್ ಇನ್ ಕಾರ್ಯಕ್ರಮದಲ್ಲಿ ಖಾಸಗಿ ಬಸ್‌ಗಳು ನಿಯಮ ಉಲ್ಲಂಘಿಸಿ ಸಂಚಾರ ನಡೆಸುತ್ತಿರುವ ಬಗ್ಗೆ ಸಾರ್ವಜನಿಕರಿಂದ ಆರೋಪ ಕೇಳಿ ಬಂದ ಹಿನ್ನೆಲೆ ಸೋಮವಾರ ಪೊಲೀಸರು ಮತ್ತು ಆರ್‌ಟಿಒ ಅಧಿಕಾರಿಗಳು ಜಂಟಿ ಕಾರ್ಯಾಚರಣೆ ನಡೆಸಿ ನಿಯಮ ಉಲ್ಲಂಘಿಸಿದ ಖಾಸಗಿ ಸಿಟಿ ಬಸ್‌ಗಳನ್ನು ವಶಕ್ಕೆ ಪಡೆದಿದ್ದಾರೆ. ವಶಪಡಿಸಿಕೊಂಡ 34ಕ್ಕೂ ಅಧಿಕ ನಗರ ಬಸ್‌ಗಳನ್ನು ಮಂಗಳೂರಿನ ಕೇಂದ್ರ ಮೈದಾನದಲ್ಲಿ ನಿಲ್ಲಿಸಲಾಗಿದೆ.

Comments are closed.