ಕರಾವಳಿ

ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರ : ಸಚಿವೆ ಜಯಮಾಲರಿಂದ ಗೋಕರ್ಣನಾಥ ಆರೋಗ್ಯ ಕಾರ್ಡ್ ಬಿಡುಗಡೆ – ವಿತರಣೆ

Pinterest LinkedIn Tumblr

ಮಂಗಳೂರು, ಅಕ್ಟೋಬರ್. 19: ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದಲ್ಲಿ ನವರಾತ್ರಿ ಉತ್ಸವ ಮತ್ತು ‘ಮಂಗಳೂರು ದಸರಾ’ ಮಹೋತ್ಸವ ಹಿನ್ನೆಲೆಯಲ್ಲಿ ಶ್ರೀ ಕ್ಷೇತ್ರದ ವತಿಯಿಂದ ಗುರುವಾರ ಸಂಜೆ 10 ಕ್ರೀಡಾ ಸಾಧಕರಿಗೆ ಸನ್ಮಾನ ಹಾಗೂ ಗೋಕರ್ಣನಾಥ ಆರೋಗ್ಯ ಕಾರ್ಡ್ ಬಿಡುಗಡೆ ಕಾರ್ಯಕ್ರಮ ಜರಗಿತು.

ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದಲ್ಲಿ ನಡೆಯುತ್ತಿರುವ ನವರಾತ್ರಿ ಉತ್ಸವ ಮತ್ತು ‘ಮಂಗಳೂರು ದಸರಾ’ಮಹೋತ್ಸವದಲ್ಲಿ ಪಾಲ್ಗೊಳ್ಳಲು ಆಗಮಿಸಿದ ಸಚಿವೆ ಡಾ.ಜಯಮಾಲ ಅವರು ಗೋಕರ್ಣನಾಥ ಆರೋಗ್ಯ ಕಾರ್ಡ್ ಅನ್ನು ಬಿಡುಗಡೆಗೊಳಿಸಿ, ಅರ್ಹ ಫಲಾನುಭವಿಗಳಿಗೆ ಗೋಕರ್ಣನಾಥ ಆರೋಗ್ಯ ಕಾರ್ಡ್ ವಿತರಣೆ ಮಾಡಿದರು.

ಕಾರ್ಯಕ್ರಮದಲ್ಲಿ ಕ್ರೀಡಾಕ್ಷೇತ್ರದಲ್ಲಿ ಸಾಧನೆ ತೋರಿದ ಪೂವಮ್ಮ, ಗುರುರಾಜ್, ಜಗದೀಶ್, ಪ್ರದೀಪ್ ಆಚಾರ್ಯ, ಪಂಚಮಿ ಸೇರಿದಂತೆ 10 ಮಂದಿಯನ್ನು ಸನ್ಮಾನಿಸಿ ಗೌರವಿಸಲಾಯಿತು.

ಕ್ಷೇತ್ರದ ನವೀಕರಣದ ರೂವಾರಿ ಜನಾರ್ದನ ಪೂಜಾರಿಯವರ ಇಚ್ಛೆಯಂತೆ ಹಾಗೂ ನಿರ್ದೇಶನದಂತೆ ಈ ಬಾರಿ ಸಮಾಜಮುಖಿ ಕಾರ್ಯಕ್ರಮದ ಅಂಗವಾಗಿ ಗೋಕರ್ಣನಾಥ ಆರೋಗ್ಯ ಕಾರ್ಡ್, ವಿದ್ಯಾನಿಧಿ ಮತ್ತು ಸಾಮಾಜಿಕ ನಿಧಿ ಬಿಡುಗಡೆ ಮಾಡಲಾಗಿದೆ. ಈ ಕಾರ್ಡ್ ಪ್ರಥಮವಾಗಿ 2,000 ಬಡ ಕುಟುಂಬಗಳಿಗೆ ಪ್ರಯೋಜನವಾಗಲಿದ್ದು, ಮುಂದೆ 10,000 ಕುಟುಂಬಗಳಿಗೆ ಈ “ಆರೋಗ್ಯ ಕಾರ್ಡ್” ವಿತರಿಸುವ ಯೋಜನೆಯನ್ನು ವಿಸ್ತರಿಸಲಾಗುವುದು ಎಂದು ಕುದ್ರೋಳಿ ಕ್ಷೇತ್ರಾಡಳಿತ ಸಮಿತಿಯ ಕೋಶಾಧಿಕಾರಿ ಪದ್ಮರಾಜ್ ಆರ್. ( ಅಡ್ವಕೇಟ್) ಅವರು ಈ ವೇಳೆ ತಿಳಿಸಿದರು.

ಆರೋಗ್ಯಕಾರ್ಡ್” ವಿತರಣೆ ಸಂಬಂಧ ನಗರದ ಎ ಜೆ ಇನ್‌ಸ್ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸ್ ಜತೆ ಒಪ್ಪಂದ ಮಾಡಲಾಗಿದೆ. ಈ ಅರೋಗ್ಯ ಕಾರ್ಡ್ ಹೊಂದಿದ ಪ್ರತಿಯೊಬ್ಬ ವ್ಯಕ್ತಿಗೂ ಚಿಕಿತ್ಸೆ ಹಾಗೂ ಇತರ ವೆಚ್ಚದಲ್ಲಿ ಶೇ. 25ರಷ್ಟು ರಿಯಾಯಿತಿ ಸಿಗಲಿದೆ. ಈ ಆರೋಗ್ಯಕಾರ್ಡ್‌ ಪ್ರಥಮ ಹಂತದಲ್ಲಿ ಬಿಪಿಎಲ್ ಕಾರ್ಡ್ ಹೊಂದಿರುವವರಿಗೆ ವಿತರಣೆಯಾಗಲಿದೆ. ಯಾವುದೇ ಜಾತಿ ಧರ್ಮದ ಭೇದವಿಲ್ಲದೆ ಬಿಪಿಎಲ್ ಪಡಿತರ ಚೀಟಿಯೊಂದಿಗೆ ಅರ್ಜಿ ಪಡೆದು ಕಾರ್ಡ್ ಪಡೆದುಕೊಳ್ಳಬಹುದು ಎಂದು ಪದ್ಮರಾಜ್ ಆವರು ತಿಳಿಸಿದರು.

ಅತಿಹಿಗಳಾಗಿ ಮಾಜಿ ಸಚಿವರಾದ ರಮಾನಾಥ ರೈ, ವಿನಯ ಕುಮಾರ ಸೊರಕೆ, ಮಾಜಿ ಶಾಸಕ ಜೆ.ಆರ್. ಲೋಬೊ, ನಟಿ, ನಿರೂಪಕಿ ಅನುಶ್ರೀ, ಕೆ.ಪಿ.ಸಿ.ಸಿ. ಪದಾಧಿಕಾರಿಗಳಾದ ರಾಜಶೇಖರ ಕೊಟ್ಯಾನ್, ರಕ್ಷಿತ್ ಸುವರ್ಣ ಮುಂತಾದವರು ಭಾಗವಹಿಸಿದ್ದರು.

ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದ ಆಡಳಿತ ಮಂಡಳಿ ಅಧ್ಯಕ್ಷ ಎಚ್.ಎಸ್. ಸಾಯಿರಾಮ್, ಕಾರ್ಯದರ್ಶಿ ಮಾಧವ ಸುವರ್ಣ, ಅಭಿವೃದ್ಧಿ ಸಮಿತಿ ಸದಸ್ಯರಾದ ಊರ್ಮಿಳಾ ರಮೇಶ್ ಕುಮಾರ್, ರವಿಶಂಕರ ಮಿಜಾರ್,ಡಾ.ಬಿ.ಜಿ. ಸುವರ್ಣ,ಡಾ.ಅನಸೂಯಾ, ಶೇಖರ ಪೂಜಾರಿ, ಡಿ.ಡಿ. ಕಟ್ಟೆಮಾರ್ ಸೇರಿದಂತೆ ದೇವಾಲಯದ ಪದಾಧಿಕಾರಿಗಳು ಉಪಸ್ಥಿತರಿದ್ದರು.

Comments are closed.