
ಮಂಗಳೂರು : ನಗರದಲ್ಲಿ ಸಾರ್ವಜನಿಕರಿಗೆ ಮಾದಕ ವಸ್ತುವಾದ ಕೋಕೆನ್ ಅನ್ನು ಮಾರಾಟ ಮಾಡುತ್ತಿದ್ದ ಆರೋಪಿಗಳಿಗೆ ಗೋವಾ ದಿಂದ ಪೂರೈಕೆ ಮಾಡುತ್ತಿದ್ದ ಪ್ರಮುಖ ಆರೋಪಿಯನ್ನು ಮಂಗಳೂರು ಸಿಸಿಬಿ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.
ಮೂಲತಹ ಗೋವಾ ಕಾಂಡೋಲಿಮ್ ನಿವಾಸಿ (ಪ್ರಸ್ತುತ ಕಾಸರಗೋಡು ಕುಂಜತ್ತೂರುನಲ್ಲಿ ವಾಸ್ತವ್ಯ ) ಅಜ್ಮಲ್ ಪುಲಿಕ್ಕಲ್ ಮೊಹಮ್ಮದ್ (44) ಬಂಧಿತ ಆರೋಪಿ.
ಈ ಹಿಂದೆ ಆಗೋಸ್ತ್ ತಿಂಗಳಲ್ಲಿ ಮಂಗಳೂರು ನಗರದ ಪೂರ್ವ ಪೊಲೀಸ್ ಠಾಣಾ ವ್ಯಾಪ್ತಿಯ ಮರೋಳಿ ಬಳಿಯಲ್ಲಿ ಅಕ್ರಮವಾಗಿ ಮಾದಕ ವಸ್ತುವಾದ ಕೋಕೆನ್ ನ್ನು ಹೊಂದಿದ 5 ಮಂದಿಯನ್ನು ಮಂಗಳೂರು ಸಿಸಿಬಿ ಪೊಲೀಸರು ದಸ್ತಗಿರಿ ಮಾಡಿ ರೂ. 70,000/- ಮೌಲ್ಯದ ಮಾದಕ ವಸ್ತುವಾದ ಕೋಕೆನ್ ಮೂರು ಕಾರು, ನಗದು ಹಣ ಮತ್ತು ಮೊಬೈಲ್ ಪೋನ್ ಗಳನ್ನು ವಶಪಡಿಸಿಕೊಂಡಿದ್ದರು.
ಈ ಪ್ರಕರಣದಲ್ಲಿನ ಆರೋಪಿಗಳಿಗೆ ಗೋವಾದಿಂದ ಮಾದಕ ವಸ್ತುವಾದ ಕೋಕೆನ್ ನ್ನು ಪೂರೈಕೆ ಮಾಡಿದ ವ್ಯಕ್ತಿಯು ತಲೆಮರೆಸಿಕೊಂಡಿದ್ದನು. ಈ ಆರೋಪಿಯ ಬಗ್ಗೆ ಮಾಹಿತಿ ಪಡೆದ ಮಂಗಳೂರು ನಗರ ಸಿಸಿಬಿ ಪೊಲೀಸರು ಮತ್ತು ಮಂಗಳೂರು ಪೂರ್ವ ಠಾಣೆ ಯ ಪೊಲೀಸರು ಕಾರ್ಯಾಚರಣೆ ನಡೆಸಿ ಅಜ್ಮಲ್ ಪುಲಿಕ್ಕಲ್ ಮೊಹಮ್ಮದ್ ನನ್ನು ಬಂಧಿಸಿದ್ದಾರೆ.
ಈತನು ಗೋವಾದಿಂದ ಮಂಗಳೂರಿಗೆ ಅಕ್ರಮವಾಗಿ ಕೋಕೆನ್ ನ್ನು ಮಾರಾಟ ಮಾಡುತ್ತಿದ್ದನು. ಈತನ ವಿರುದ್ಧ ಈ ಹಿಂದೆ ನಕಲಿ ಪಾಸ್ ಪೋರ್ಟ್ ಹೊಂದಿದ ಬಗ್ಗೆ 2008 ನೇ ಇಸವಿಯಲ್ಲಿ ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
ಆರೋಪಿಯ ಪತ್ತೆ ಕಾರ್ಯಾಚರಣೆಯಲ್ಲಿ ಸಿಸಿಬಿ ಘಟಕದ ಇನ್ಸ್ ಪೆಕ್ಟರ್ ಶಾಂತಾರಾಮ ಹಾಗೂ ಸಿಬ್ಬಂದಿಗಳು ಮತ್ತು ಮಂಗಳೂರು ಪೂರ್ವ ಪೊಲೀಸ್ ಠಾಣೆಯ ಇನ್ಸ್ ಪೆಕ್ಟರ್ ಮಾರುತಿ ನಾಯಕ್ ಮತ್ತು ಸಿಬ್ಬಂದಿಗಳು ಭಾಗವಹಿಸಿದ್ದರು.
Comments are closed.