ಕರಾವಳಿ

ಟಿಪ್ಪು ಜಯಂತಿ ಹಿನ್ನೆಲೆ : ಇಂದಿನಿಂದ ದ.ಕ. ಜಿಲ್ಲೆಯಾದ್ಯಂತ ನಿಷೇಧಾಜ್ಞೆ ಜಾರಿ

Pinterest LinkedIn Tumblr

ಮಂಗಳೂರು ನವೆಂಬರ್ 09 : ಹಜರತ್ ಟಿಪ್ಪು ಸುಲ್ತಾನ್ ಜಯಂತಿ ಸರ್ಕಾರದ ಕಾರ್ಯಕ್ರಮವಾಗಿ ಆಚರಿಸಲಾಗುತ್ತಿದ್ದು, ಕಾರ್ಯಕ್ರಮ ಸುಸೂತ್ರವಾಗಿ ನಡೆಯಲು ಹಾಗೂ ಕಾನೂನು ಸುವ್ಯವಸ್ಥೆಗೆ ಭಂಗ ಬಾರದ ರೀತಿಯಲ್ಲಿ ಜಿಲ್ಲೆಯಾದ್ಯಂತ 9.11.18ರ ಸಂಜೆ 6 ಗಂಟೆಯಿಂದ ದಿನಾಂಕ 11.11.18ರ ಮಧ್ಯರಾತ್ರಿ 12 ಗಂಟೆಯವರೆಗೆ ಯಾವುದೇ ಸಾರ್ವಜನಿಕ ರಾಜಕೀಯ ಮುಂತಾದ ಬಹಿರಂಗ ಸಭೆ ಸಮಾರಂಭ, ಜಾಥಾ ಮತ್ತು ಮೆರವಣಿಗೆಗಳನ್ನು ನಿರ್ಬಂಧಿಸಿ ದಂಡ ಪ್ರಕ್ರಿಯೆ ಸಂಹಿತೆ 144 ರನ್ವಯ ನಿಷೇಧಾಜ್ಞೆ ವಿಧಿಸಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ದಕ್ಷಿಣ ಕನ್ನಡ ಜಿಲ್ಲೆ ಎಸ್ ಸಸಿಕಾಂತ್ ಸೆಂಥಿಲ್ ಇವರು ಆದೇಶಿಸಿರುತ್ತಾರೆ.

ಪೊಲೀಸ್ ಕಮಿಷನರ್ ಮತ್ತು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ವರದಿಯನ್ನು ಆಧರಿಸಿ ಮುನ್ನೆಚ್ಚರಿಕೆ ಕ್ರಮವಾಗಿ ನಿಷೇಧಾಜ್ಞೆಯನ್ನು ಹೊರಡಿಸಲಾಗಿದೆ.

ಜಿಲ್ಲೆಯಾದ್ಯಂತ ಯಾವುದೇ ವ್ಯಕ್ತಿ, ಸಂಘಟನೆಯ ಸದಸ್ಯರು ಯಾವುದೇ ರೀತಿಯ ಪ್ರತಿಭಟನೆ ಮೆರವಣಿಗೆ, ಬ್ಯಾನರ್ಸ್, ಬಂಟಿಂಗ್ಸ್, ಬಾವುಟ, ಧ್ವನಿವರ್ಧಕ ಅಳವಡಿಸಿ ಘೋಷಣೆಗಳನ್ನು ಕೂಗದಂತೆ ಹಾಗೂ ಗುಂಪುಗುಂಪಾಗಿ ಸೇರಿ ಪ್ರತಿಭಟನೆಗಳನ್ನು ನಡೆಸುವುದನ್ನು ನಿಷೇಧಿಸಿ ಜಿಲ್ಲಾಧಿಕಾರಿಗಳು ಆದೇಶಿಸಿದ್ದಾರೆ.

Comments are closed.