ಕರಾವಳಿ

ಟಿಪ್ಪು ಜಯಂತಿ ಕಾರ್ಯಕ್ರಮಕ್ಕೆ ಮುತ್ತಿಗೆ ಹಾಕಲು ಯತ್ನ : ಬಜರಂಗದಳ, ವಿಎಚ್ ಪಿ ಕಾರ್ಯಕರ್ತರ ಬಂಧನ

Pinterest LinkedIn Tumblr

ಮಂಗಳೂರು, ನವೆಂಬರ್. 10: ಟಿಪ್ಪು ಜಯಂತಿ ಆಚರಣೆಗೆ ಅಡ್ಡಿಪಡಿಸಿದ ಹಿನ್ನೆಲೆಯಲ್ಲಿ ವಿಎಚ್ ಪಿ ಹಾಗೂ ಬಜರಂಗದಳ ಕಾರ್ಯಕರ್ತರನ್ನು ಉರ್ವಾ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.

ದ.ಕ. ಜಿಲ್ಲಾ ಪಂಚಾಯತ್ ಕಚೇರಿಯಲ್ಲಿ ನಡೆಯುತ್ತಿರುವ ಟಿಪ್ಪು ಜಯಂತಿ ಕಾರ್ಯಕ್ರಮಕ್ಕೆ ವಿರೋಧ ವ್ಯಕ್ತಪಡಿಸಿ ಕಾರ್ಯಕ್ರಮ ನಡೆಯುವ ಸ್ಥಳಕ್ಕೆ ಮುತ್ತಿಗೆ ಹಾಕಲು ಯತ್ನಿಸಿದ ಬಜರಂಗದಳ ಹಾಗೂ ವಿಎಚ್ ಪಿ ಕಾರ್ಯಕರ್ತರನ್ನು ಪೊಲೀಸರು ಬಂಧಿಸಿದ್ದಾರೆ.

ಕಾರ್ಯಕ್ರಮ ನಡೆಯುತ್ತಿದ್ದ ಜಿಲ್ಲಾ ಪಂಚಾಯತ್ ಕಚೇರಿಯ ಸಭಾಂಗಣಕ್ಕೆ ನುಗ್ಗಲು ಯತ್ನಿಸಿದ ಸುಮಾರು 60ಕ್ಕೂ ಹೆಚ್ಚು ಕಾರ್ಯಕರ್ತರನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

Comments are closed.