ಬೆಂಗಳೂರು: ಕೇಂದ್ರ ಸಚಿವ ಅನಂತಕುಮಾರ್ ನಿಧನದ ಹಿನ್ನಲೆಯಲ್ಲಿ ಇಂದು ಎಲ್ಲಾ ಸರಕಾರಿ ಹಾಗೂ ಖಾಸಗಿ ಶಾಲಾ-ಕಾಲೇಜಿಗೆ ಮತ್ತು ಸರ್ಕಾರಿ ಕಚೇರಿಗಳಿಗೆ ರಜೆಯನ್ನು ಘೋಷಣೆ ಮಾಡಲಾಗಿದೆ.

ರಾಜ್ಯಾದ್ಯಂತ ಶಾಲಾ-ಕಾಲೇಜಿಗೆ ಮತ್ತು ಕಚೇರಿಗೆ ಸರ್ಕಾರಿ ರಜೆಯನ್ನು ಘೋಷಣೆ ಮಾಡಲಾಗಿದೆ. ಸಕಲ ಗೌರವದೊಂದಿಗೆ ಅನಂತ ಕುಮಾರ್ ಅವರ ಅಂತ್ಯಕ್ರಿಯೆ ನಡೆಸಲಾಗುತ್ತಿದೆ. ರಾಜ್ಯದಲ್ಲಿ ಮೂರು ದಿನಗಳ ಕಾಲ ಶೋಕಾಚರಣೆ ನಡೆಯಲಿದ್ದು ಸರಕಾರಿ ಸಭೆ ಸಮಾರಂಭ ನಡೆಯಲ್ಲ. ಇನ್ನು ವಿವಿಧ ವಿಶ್ವವಿದ್ಯಾಲಯಗಳಲ್ಲಿ ಇಂದು ಇದ್ದ ಪರೀಕ್ಷೆಗಳನ್ನು ಮುಂದೂಡಲಾಗಿದೆ.
Comments are closed.