ಕರಾವಳಿ

ಉರ್ವಾದ ಬಾಡಿಗೆ ಮನೆಯಲ್ಲಿ ವೇಶ್ಯಾವಾಟಿಕೆ : ದಡ್ಡಲ್‌ಕಾಡ್ (ಪಿಂಪ್) ನಿವಾಸಿ ಸೆರೆ

Pinterest LinkedIn Tumblr

ಮಂಗಳೂರು : ನಗರದ ಉರ್ವಾ ಮಠದಕಣಿ ಬಳಿಯ ಬಾಡಿಗೆ ಮನೆಯೊಂದರಲ್ಲಿ ಯುವತಿಯರನ್ನು ವೇಶ್ಯಾವಾಟಿಕೆಗೆ ಗ್ರಾಹಕರಿಗೆ ಒದಗಿಸುತ್ತಿದ್ದ ದಲ್ಲಾಳಿ (ಪಿಂಪ್) ಓರ್ವನನ್ನು ಮಂಗಳೂರು ಸಿಸಿಬಿ ಪೊಲೀಸರು ಬಂಧಿಸಿ ಆತನ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಬಂಧಿತ ಆರೋಪಿಯನ್ನು ನಗರದ ಕುಂಟಿಕಾನ್ ಸಮೀಪದ ದಡ್ಡಲಕಾಡು ನಿವಾಸಿ ಮೇಘರಾಜ್ (26) ಎಂದು ಗುರುತಿಸಲಾಗಿದೆ.

ನಗರದ ಉರ್ವಾ (ಆಟದ ಮೈದಾನದಸಮೀಪ ) ಮಠದಕಣಿ 1 ನೇ ಅಡ್ಡ ರಸ್ತೆಯಲ್ಲಿರುವ ಸ್ಕೋಡಾ ಕಾರ್ ಸರ್ವಿಸ್ ಸೆಂಟರ್ ಬಳಿಯ ಬಾಡಿಗೆ ಮನೆಯೊಂದರಲ್ಲಿ ಯುವತಿಯರನ್ನು ಇಟ್ಟುಕೊಂಡು ವೇಶ್ಯಾವಾಟಿಕೆ ನಡೆಸುತ್ತಿರುವ ಬಗ್ಗೆ ಖಚಿತ ಮಾಹಿತಿ ಲಭಿಸಿದ ಹಿನ್ನೆಲೆಯಲ್ಲಿ ಮಂಗಳೂರು ಸಿಸಿಬಿ ಪೊಲೀಸರು ದಾಳಿ ನಡೆಸಿ ವೇಶ್ಯಾವಾಟಿಕೆಗೆ ಯುವತಿಯರನ್ನು ಒದಗಿಸುತ್ತಿದ್ದ ಆರೋಪದಲ್ಲಿ ಮೇಘರಾಜ್ ನನ್ನು ಬಂಧಿಸಿದ್ದಾರೆ.

ಆರೋಪಿಯ ವಶದಿಂದ 2 ಮೊಬೈಲ್ ಫೋನ್, ಲ್ಯಾಪ್ ಟಾಪ್, ನಗದು ಹಣ ರೂ. 6,000/-, 2 ಬೈಕ್, ಆಟೋ ರಿಕ್ಷಾವನ್ನು ವಶಪಡಿಸಿಕೊಳ್ಳಲಾಗಿದೆ. ವಶಪಡಿಸಿಕೊಂಡ ಸೊತ್ತಿನ ಮೌಲ್ಯ ರೂ. 1,71,000/- ಆಗಿರುತ್ತದೆ ಎಂದು ಪೊಲೀಸರು ತಿಳಿಸಿದ್ದಾರೆ.

ಈತನು ಈ ಬಾಡಿಗೆ ಮನೆಯಲ್ಲಿ ಯುವತಿಯರನ್ನು ಇಟ್ಟುಕೊಂಡು ವೇಶ್ಯಾವಾಟಿಕೆ ದಂಧೆಗೆ ಬಳಸಿಕೊಂಡು ಹಣವನ್ನು ಗಳಿಸುತ್ತಿದ್ದನು. ಈ ಬಗ್ಗೆ ಬರ್ಕೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ. ಆರೋಪಿಯ ಜೊತೆ ಇತರರು ಭಾಗಿಯಾಗಿದ್ದು, ತನಿಖೆ ಮುಂದುವರಿದಿದೆ.

ಕಾರ್ಯಾಚರಣೆಯಲ್ಲಿ ಸಿಸಿಬಿ ಘಟಕದ ಇನ್ಸ್ ಪೆಕ್ಟರ್ ಶಾಂತಾರಾಮ, ಪಿಎಸ್ಐ, ಕಬ್ಬಾಳ್ ರಾಜ್ ‌ಮತ್ತು ಸಿಬ್ಬಂದಿಗಳು, ಬರ್ಕೆ ಠಾಣಾ ಪಿಎಸ್ಐ ಶೋಭಾ ಹಾಗೂ ಸಿಬ್ಬಂದಿಗಳು ಭಾಗವಹಿಸಿದ್ದರು.

Comments are closed.