ಕರಾವಳಿ

ಕೇಂದ್ರ ಮೈದಾನದಲ್ಲಿ ಬೃಹತ್ ಜನಾಗ್ರಹ ಸಮಾವೇಶ : ಜ್ಯೋತಿ ವೃತ್ತದಿಂದ ಬೃಹತ್ ಮೆರವಣಿಗೆ

Pinterest LinkedIn Tumblr

ಮಂಗಳೂರು, ನವೆಂಬರ್.25: ಅಯೋಧ್ಯೆಯಲ್ಲಿ ಶ್ರೀ ರಾಮ ಮಂದಿರ ನಿರ್ಮಾಣಕ್ಕಾಗಿ ಆಗ್ರಹಿಸಿ ವಿಶ್ವ ಹಿಂದೂ ಪರಿಷತ್ ಸೇರಿದಂತೆ ಸಂಘಪರಿವಾರದ ಆಶ್ರಯದಲ್ಲಿ ಬಾನುವಾರ ಸಂಜೆ ನಗರದ ಕೇಂದ್ರ ಮೈದಾನದಲ್ಲಿ ಹಮ್ಮಿಕೊಳ್ಳಲಾದ ಜನಾಗ್ರಹ ಸಮಾವೇಶದ ಅಂಗವಾಗಿ ಇಂದು ಮಧ್ಯಾಹ್ನ ನಗರದ ಅಂಬೇಡ್ಕರ್ (ಜ್ಯೋತಿ ವೃತ) ಸರ್ಕಲ್ ನಿಂದ ನೆಹರೂ ಮೈದಾನದವರೆಗೆ ಬೃಹತ್ ಮೆರವಣಿಗೆ ನಡೆಯಿತು.

ಮೆರವಣಿಗೆಯಲ್ಲಿ ಜಿಲ್ಲೆಯ ಎಂಟು ಮಂದಿ ಸಾಧು ಸಂತರು ಸೇರಿದಂತೆ ಸಂಸದ ನಳಿನ್ ಕುಮಾರ್ ಕಟೀಲ್. ಶಾಸಕರಾದ ವೇದವ್ಯಾಸ ಕಾಮಾತ್, ಡಾ. ಭರತ್ ಕುಮಾರ್ ಶೆಟ್ಟಿ, ಉಮನಾಥ ಕೋಟ್ಯಾನ್, ವಿಧಾನ ಪರಿಷತ್ ಮಾಇ ಸದಸ್ಯ ಕ್ಯಾಪ್ಟನ್ ಗಣೇಶ್ ಕಾರ್ಣಿಕ್, ಆರ್ ಎಸ್ ಎಸ್ ಮುಖಂಡ ಡಾ.ಪ್ರಭಾಕರ್ ಭಟ್ ಕಲ್ಲಡ್ಕ, ವಿಶ್ವ ಹಿಂದೂ ಪರಿಷತ್ ಮುಖಂಡರಾದ ಪ್ರೋ.ಎಂ.ಬಿ.ಪುರಾಣಿಕ್, ಜಗದೀಶ್ ಶೇಣವ, ಶರಣ್ ಪಂಪ್‍‍ವೆಲ್ ಹಾಗೂ ಬಜರಂಗದಳ, ದುರ್ಗಾವಾಹಿನಿ ಮತ್ತಿತರ ಸಂಘಟನೆಗಳ ಪ್ರಮುಖರು ಮತ್ತು ಕಾರ್ಯಕರ್ತರು ಪಾಲ್ಗೊಂಡಿದ್ದರು.

ಮೆರವಣಿಗೆಯಲ್ಲಿ ಪಾಲ್ಗೊಂಡ ಕಾರ್ಯಕರ್ತರು ಮೆರವಣಿಯುದ್ದಕ್ಕೂ ಅಯೋಧ್ಯೆಯಲ್ಲಿ ಶ್ರೀ ರಾಮ ಮಂದಿರ ನಿರ್ಮಾಣವಾಗ ಬೇಕು ಎಂಬ ಘೋಷಣೆಗಳನ್ಮು ಕೂಗಿದರು.. ಶ್ರೀರಾಮ ಕುರಿತ “ಡಿ.ಜೆ.” ಸಾಂಗ್ ಗಳನ್ನು ಹಾಕಲಾಗಿತ್ತು. ಮೆರವಣಿಗೆಯಲ್ಲಿ ಭಗವಾಧ್ವಜಗಳ ಪ್ರದರ್ಶನ ನಡೆಯಿತು. ಈ ಬೃಹತ್ ಶೋಭಾ ಯಾತ್ರೆ ಸಂದರ್ಭ ವಿಶ್ವ ಹಿಂದೂ ಪರಿಷತ್ ನಿಂದ ಧರ್ಮ ರಕ್ಷಾ ನಿಧಿ ಸಂಗ್ರಹಿಸಲಾಯಿತು.

ನಗರದಲ್ಲಿ ಬಿಗಿ ಪೊಲೀಸ್ ಬಂದೋ ಬಸ್ತ್ : ಮದ್ಯದಂಗಡಿ ಬಂದ್

ನಗರದ ಕೇಂದ್ರ ಮೈದಾನದಲ್ಲಿ ಬೃಹತ್ ಜನಾಗ್ರಹ ಸಭೆ ಹಮ್ಮಿಕೊಂಡ ಹಿನ್ನೆಲೆಯಲ್ಲಿ ಈ ವೇಳೆ ಯಾವೂದೇ ಅಹಿತಕರ ಘಟನೆಗಳು ಸಂಭವಿಸದಂತೆ ಜಿಲ್ಲಾದ್ಯಂತ ಬಿಗಿ ಬಂದೋಬಸ್ತ್ ಕೈಗೊಳ್ಳಲಾಗಿತ್ತು. ಸಮಾವೇಶ ಸಂದರ್ಭದಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡಲು ಸಾಕಷ್ಟು ಪೊಲೀಸರನ್ನು ನಿಯೋಜಿಸಲಾಗಿದೆ. ಇಬ್ಬರು ಡಿಸಿಪಿ ಮತ್ತು ಹತ್ತು ಮಂದಿ ಎಸಿಪಿ ದರ್ಜೆಯ ಅಧಿಕಾರಿಗಳು, ನಲ್ವತ್ತು ಮಂದಿ ಪೊಲೀಸ್ ಇನ್‌ಸ್ಪೆಕ್ಟರ್, ಎಪ್ಪತ್ತು ಮಂದಿ ಪಿಎಸ್ಐ, ೧೪೦೦ ಸಿಬ್ಬಂದಿಗಳು, ಹತ್ತು ಕೆ‌ಎಸ್‌ಆರ್‌ಪಿ ಫ್ಲಟೂನ್, ೧೪ ಡಿಎಆರ್ / ಸಿ ಎ ಆರ್ ಫ್ಲಟೂನ್ ಹಾಗೂ ಹೊರ ಜಿಲ್ಲೆಗಳಿಂದ ಮುನ್ನೂರು ಮಂದಿ ಪೊಲೀಸರನ್ನು ನಿಯೋಜನ ಮಾಡಲಾಗಿತ್ತು.

ಜಿಲ್ಲಾದ್ಯಂತ ಮದ್ಯದಂಗಡಿ ಬಂದ್ :

ವಿಶ್ವ ಹಿಂದೂ ಪರಿಷತ್ತು, ಭಜರಂಗದಳ ಮತ್ತಿತರ ಸಂಘಟನೆಗಳ ವತಿಯಿಂದ ಅಯೋಧ್ಯೆಯ ಶ್ರೀರಾಮ ಜನ್ಮ ಭೂಮಿಯಲ್ಲಿ ಭವ್ಯ ಮಂದಿರ ನಿರ್ಮಾಣದ ಕುರಿತು ಮಂಗಳೂರಿನ ಕೇಂದ್ರ ಮೈದಾನದಲ್ಲಿ ಇಂದು ಸಂಜೆ ಬೃಹತ್ ಜನಾಗ್ರಹ ಸಭೆ ಹಮ್ಮಿಕೊಂಡಿರುವ ಸಭೆಗೆ ವಿಶ್ವ ಹಿಂದೂ ಪರಿಷತ್ತು, ಭಜರಂಗದಳ ಮತ್ತಿತರ ಸಂಘಟನೆಗಳ ಸುಮಾರು 50 ಸಾವಿರ ಕಾರ್ಯಕರ್ತರು ಭಾಗವಹಿಸುವ ಸಾಧ್ಯತೆ ಇರುವುದರಿಂದ ಈ ಅವಧಿಯಲ್ಲಿ ಜಿಲ್ಲೆಯಲ್ಲಿ ಸಾರ್ವಜನಿಕ ಶಾಂತಿ, ಕಾನೂನು ಸುವ್ಯವಸ್ಥೆ ಹಾಗೂ ಸುರಕ್ಷತೆಯನ್ನು ಕಾಪಾಡುವ ಉದ್ದೇಶದಿಂದ ಸಾರ್ವಜನಿಕ ಹಿತದೃಷ್ಟಿಯಿಂದ ಕರ್ನಾಟಕ ಅಬಕಾರಿ ಕಾಯಿದೆ 1965 ಸೆಕ್ಷನ್ 21(1) ರ ಅಡಿಯಲ್ಲಿ ದತ್ತವಾದ ಅಧಿಕಾರವನ್ನು ಚಲಾಯಿಸಿ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಎಸ್. ಸಸಿಕಾಂತ್ ಸೆಂಥಿಲ್ ಅವರು ನವೆಂಬರ್ 25 ರಂದು ಪೂರ್ವಾಹ್ನ 6 ಗಂಟೆಯಿಂದ ಮಧ್ಯರಾತ್ರಿವರೆಗೆ ಎಲ್ಲಾ ಬಾರ್ ಮತ್ತು ರೆಸ್ಟೋರೆಂಟ್‍ಗಳನ್ನು ಹಾಗೂ ಯಾವುದೇ ವಿಧದ ಅಮಲು ಪದಾರ್ಥ ಮಾರಾಟ ಮಾಡದಂತೆ ಆದೇಶಿಸಿ ಅಧಿಸೂಚನೆ ಹೊರಡಿಸಿದ್ದರು.

Comments are closed.