ಕರಾವಳಿ

ಮಂಗಳೂರು ಬೀಚ್‌ನಲ್ಲಿ ಯುವತಿಯ ಮೇಲೆ ಸಾಮೂಹಿಕ ಅತ್ಯಾಚಾರ ಆರೋಪ : ಆರು ಮಂದಿ ಪೊಲೀಸ್ ವಶ

Pinterest LinkedIn Tumblr

ಮಂಗಳೂರು ನವೆಂಬರ್ 27 : ಸಮುದ್ರ ತೀರಕ್ಕೆ ವಿಹಾರಕ್ಕೆ ಬಂದಿದ್ದ ಯುವಜೋಡಿಯನ್ನು ಅಡ್ಡಗಟ್ಟಿ ಬೆದರಿಸಿದ ಅಪರಿಚಿತ ದುಷ್ಕರ್ಮಿಗಳ ತಂಡವೊಂದು ಯುವತಿಯ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ ಘಟನೆ ನಗರದ ತಣೀರು ಬಾವಿ ಸಮೀಪದ ತೋಟ ಬೆಂಗ್ರೆಯಲ್ಲಿ ನಡೆದಿದೆ ಎನ್ನಲಾಗಿದ್ದು, ಪ್ರಕರಣ ತಡವಾಗಿ ಬೆಳಕಿಗೆ ಬಂದಿದೆ.

ಪ್ರಕರಣಕ್ಕೆ ಸಂಬಂಧಿಸಿ 7 ಮಂದಿಯ ವಿರುದ್ಧ ಮಹಿಳಾ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಈಗಾಗಲೇ ಪೊಲೀಸರು ಆರು ಮಂದಿಯನ್ನು ವಶಕ್ಕೆ ಪಡೆದು ವಿಚಾರಣೆಗೊಳಪಡಿಸಿದ್ದಾರೆ.

ನ. 18ರಂದು ಘಟನೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಅಂದು ಮಧ್ಯಾಹ್ನ ಪ್ರೇಮಿಗಳು ತಣ್ಣೀರುಬಾವಿ ಸಮೀಪದ ತೋಟ ಬೆಂಗ್ರೆ ಬೀಚಿಗೆ ಹೋಗಿದ್ದರು. ಅದು ನಿರ್ಜನ ಪ್ರದೇಶವಾಗಿತ್ತು.ಈ ವೇಳೆ ಅಲ್ಲಿದ್ದ ಅಪರಿಚಿತ ಯುವಕರ ತಂಡ ಈ ಪ್ರೇಮಿಗಳನ್ನು ಬೆದರಿಸಿ ಪ್ರೇಮಿಯೊಂದಿಗೆ ಸುತ್ತಾಡಲು ಬಂದಿದ್ದ ಯುವತಿಯ ಮೇಲೆ ಏಳು ಮಂದಿ ಕಾಮುಕರು ಅತ್ಯಾಚಾರ ಎಸಗಿದ್ದಾರೆ ಎಂದು ಆರೋಪಿಸಲಾಗಿದೆ.

ವಾರದ ಹಿಂದೆ ಬಂಟ್ವಾಳ ಮೂಲದ ಪ್ರೇಮಿಗಳು ಮಂಗಳೂರಿನ ತೋಟ ಬೆಂಗ್ರೆ ಬೀಚ್ ಗೆ ಬಂದಿದ್ದರು . ಈ ಇಬ್ಬರು ಪ್ರೇಮಿಗಳು (ಕಡಲಕಿನಾರೆಯಲ್ಲಿ) ಬೀಚ್ ನಲ್ಲಿ ಸುತ್ತಾಡುತ್ತಿದ್ದ ಸಂದರ್ಭದಲ್ಲಿ ಅಲ್ಲೆ ಮಾದಕ ವಸ್ತು ಸೇವಿಸುತ್ತಿದ್ದ 7 ಮಂದಿ ಯುವಕರ ಗುಂಪೊಂದು ಯುವತಿ ಜೊತೆಗೆ ಇದ್ದ ಯುವಕನ ಮೇಲೆ ದಾಳಿ ನಡೆಸಿದೆ. ಯುವಕನ ಮೇಲೆ ಹಲ್ಲೆ ನಡೆಸಿದ ನಂತರ ಯುವತಿಯ ಮೇಲೆ 7 ಮಂದಿ ಯುವಕರು ಸೇರಿ ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ.

ಈ ವಿಷಯವನ್ನು ನ. 26ರಂದು ಪ್ರೇಮಿಗಳು ಬಂಟ್ವಾಳದಲ್ಲಿ ಪೊಲೀಸರಿಗೆ ತಿಳಿಸಿದ್ದರು. ಅವರು ಪಣಂಬೂರು ಪೊಲೀಸರಿಗೆ ಅಥವಾ ಮಂಗಳೂರು ಪೊಲೀಸರಿಗೆ ದೂರು ಕೊಡುವಂತೆ ಸಲಹೆ ನೀಡಿದ್ದರು. ಆದರೆ ಯುವತಿ ಮಂಗಳೂರಿಗೆ ತೆರಳಿ ದೂರು ನೀಡಲು ಮುಂದಾಗಿರಲಿಲ್ಲ. ಈ ಹಿನ್ನೆಲೆಯಲ್ಲಿ ಮಂಗಳೂರಿನ ಪೊಲೀಸರು ಸ್ವಯಂಪ್ರೇರಿತರಾಗಿ ದೂರು ದಾಖಲಿಸಲು ಮುಂದಾಗಿದ್ದಾರೆ ಎಂದು ಪೊಲೀಸ್‌ ಕಮಿಷನರ್‌ ಟಿ.ಆರ್‌.ಸುರೇಶ್‌ ತಿಳಿಸಿದ್ದಾರೆ.

ಇದೀಗ ಈ ಸಾಮೂಹಿಕ ಅತ್ಯಾಚಾರ ಘಟನೆಗೆ ಸಂಬಂಧಿಸಿದಂತೆ ಪಣಂಬೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಆರುಮಂದಿ ಪೊಲೀಸ್ ವಶ : ತೀವ್ರ ವಿಚಾರಣೆ

ತೋಟ ಬೆಂಗ್ರೆಯಲ್ಲಿ ನಡೆದಿದೆ ಎನ್ನಲಾದ ಯುವತಿಯ ಸಾಮೂಹಿಕ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಪಣಂಬೂರು ಠಾಣೆಯ ಪೊಲೀಸರು 6 ಮಂದಿಯನ್ನು ವಶಕ್ಕೆ ಪಡೆದು ಆರೋಪಿಗಳ ವಿರುದ್ಧ ಸೆಕ್ಷನ್ 376ಆ, 323, 504, 506ರಡಿ ಪ್ರಕರಣ ದಾಖಲಿಸಿ, ಹೆಚ್ಚಿನ ವಿಚಾರಣೆಗೊಳಪಡಿಸಿದ್ದಾರೆ ಎಂದು ತಿಳಿದು ಬಂದಿದೆ.

ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಇನ್ನಷ್ಟು ಆರೋಪಿಗಳನ್ನು ಬಂಧಿಸಲು ಪೊಲೀಸರು ಬಲೆ ಬೀಸಿದ್ದಾರೆ. ಸಮಗ್ರ ತನಿಖೆಯ ಬಳಿಕವಷ್ಟೆ ಸಂಪೂರ್ಣ ವಿಷಯ ಬೆಳಕಿಗೆ ಬರಲಿದೆ.

Comments are closed.