ಕುಂದಾಪುರ: ವಿದ್ಯಾರ್ಥಿ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ ಪತ್ರಕರ್ತ ಚಂದ್ರ ಕೆ.ಹೆಮ್ಮಾಡಿಯನ್ನು ಗುರುವಾರ ಉಡುಪಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ನ್ಯಾಯಾಂಗ ಬಂಧನ ವಿಧಿಸಿದೆ.
ಬೈಂದೂರು ಶಾಲೆ ವಿದ್ಯಾರ್ಥಿಯೊಬ್ಬರ ಮೇಲೆ ನ.10 ರಂದು ಕಾಡಿನಲ್ಲಿ ಲೈಂಗಿಕ ದೌರ್ಜನ್ಯ ನಡೆಸಿದ್ದು, ಪೊಲೀಸರು ಚಂದ್ರ ಕೆ.ಹೆಮ್ಮಾಡಿ ಅವರ ಪೊಲೀಸ್ ಕಷ್ಟಡಿಗೆ ನೀಡುವಂತೆ ನ್ಯಾಯಾಲಯದಲ್ಲಿ ಮನವಿ ಮಾಡಿಕೊಂಡಿದ್ದು, ನ್ಯಾಯಾಲಯ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ.
ದೌರ್ಜನ್ಯ ನಡೆದ ನಂತರ ಅಪ್ರಾಪ್ತ ಬಾಲಕ ಮಾನಸಿಕ ಖಿನ್ನತೆಗೆ ಒಳಗಾಗಿದ್ದು, ಪೋಷಕರು ಮಣಿಪಾಲ ಖಾಸಗಿ ಆಸ್ಪತ್ರೆ ಮನೋವೈದ್ಯರಲ್ಲಿ ಪರೀಕ್ಷೆ ನಡೆಸಿದ ನಂತರ ದೌರ್ಜನ್ಯ ನಡೆದಿರುವುದು ಬೆಳಕಿಗೆ ಬಂದಿತ್ತು. ಪೋಷಕರು ನೇರವಾಗಿ ಉಡುಪಿ ಜಿಲಾ ಪೊಲೀಸ್ ವರಿಷ್ಟಾಧಿಕಾರಿ ಲಕ್ಷ್ಮಣ ನಿಂಬರ್ಗಿ ಅವರಿಗೆ ದೂರು ನೀಡಿದ್ದರು. ಪೊಲೀಸ್ ವರಿಷ್ಠಾಧಿಕಾರಿ ಸೂಚನೆಯಂತೆ ಕಾರ್ಯಾಚರಣೆ ನಡೆಸಿದ ಕುಂದಾಪುರ ಎಸ್ಸೈ ಹರೀಶ್ ಆರ್.ನಾಯ್ಕ್ ತಂಡ ಮಂಗವಾರ ರಾತ್ರಿ ನಾರ್ಕಳಿ ಮನೆಯಲ್ಲಿದ್ದ ಚಂದ್ರ ಕೆ. ಹೆಮ್ಮಾಡಿ ವಶಕ್ಕೆ ಪಡೆದುಕೊಂಡಿದ್ದರು.
ಶುಕ್ರವಾರ ಮತ್ತೆ ಚಂದ್ರ ಕೆ.ಹೆಮ್ಮಾಡಿ ಉಡುಪಿ ನ್ಯಾಯಾಲಯಕ್ಕೆ ಹಾಜರು ಪಡಿಸಿ, ಹೆಚ್ಚಿನ ತನಿಖೆ ಹಿನ್ನೆಲೆಯಲ್ಲಿ ಮತ್ತೆ ಪೊಲೀಸ್ ಕಷ್ಟಡಿಗೆ ಪಡೆಯಲಾಗುತ್ತದೆ ಎಂದು ಕುಂದಾಪುರ ಡಿಎಸ್ಪಿ ಬಿ.ಪಿ.ದಿನೇಶ್ ಕುಮಾರ್ ತಿಳಿಸಿದ್ದಾರೆ. ಬೈಂದೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Comments are closed.