ಕರಾವಳಿ

ಗ್ಯಾಂಗ್ ರೇಪ್ ಪ್ರಕರಣ : ಆರೋಪಿಗಳನ್ನು ಶೀಘ್ರ ಬಂಧಿಸಿದ ಪೊಲೀಸರ ತಂಡಕ್ಕೆ ರೂ.1 ಲಕ್ಷ ಬಹುಮಾನ ಹಸ್ತಾಂತರ

Pinterest LinkedIn Tumblr

ಮಂಗಳೂರು: ನಗರದ ತಣ್ಣೀರು ಬಾವಿ ಸಮೀಪದ ತೋಟ ಬೆಂಗ್ರೆಗೆ ಪ್ರೇಮಿಯೊಂದಿಗೆ ವಿಹಾರಕ್ಕೆ ಬಂದಿದ್ದ‌ ಯುವತಿಯ ಮೇಲೆ ನಡೆದ ಗ್ಯಾಂಗ್ ರೇಪ್ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಮೊಟೋ ಪ್ರಕರಣ ದಾಖಲಿಸಿ‌ ಆರೋಪಿಗಳನ್ನು ಶೀಘ್ರ ಬಂಧಿಸಿದ ಮಂಗಳೂರು ನಗರ ಪೊಲೀಸರ ತಂಡಕ್ಕೆ ನಾಗರೀಕರ ಪರವಾಗಿ ಒಂದು ಲಕ್ಷ ರೂ. ಮೊತ್ತದ ಚೆಕ್ ಅನ್ನು ದ.ಕ ಜಿಲ್ಲಾ ಉಸ್ತುವಾರಿ ಸಚಿವ ಯು.ಟಿ.ಖಾದರ್ ಅವರು ನಗರ ಪೊಲೀಸ್ ಅಯುಕ್ತ ಟಿ.ಆರ್.ಸುರೇಶ್ ಅವರಿಗೆ ಶುಕ್ರವಾರ ಹಸ್ತಾಂತರಿಸಿದರು.

ಮಂಗಳೂರಿನ ಸರ್ಕ್ಯೂಟ್ ಹೌಸ್​ನಲ್ಲಿ ಚೆಕ್ ಹಸ್ತಾಂತರ ಮಾಡಿ ಪೊಲೀಸರ ಸಾಧನೆಗೆ ಅಭಿನಂದಿಸಿದ ಸಚಿವರು, ಈ ಮೊತ್ತವನ್ನು ತನ್ನ ವೇತನದಿಂದ ನಾಗರೀಕರ ಪರವಾಗಿ ನೀಡಿದ್ದೇನೆ. ಅಲ್ಲದೇ ಪ್ರತ್ಯೇಕ ನಗದು ಬಹುಮಾನ ನೀಡುವಂತೆ ರಾಜ್ಯ ಪೊಲೀಸ್ ಇಲಾಖೆಗೆ ಶಿಫಾರಸು ಮಾಡುವುದಾಗಿ ಹೇಳಿದರು.

ಬಂಟ್ವಾಳ ಪೊಲೀಸರು ಪ್ರಕರಣ ದಾಖಲಿಸಲು ಹಿಂದೇಟು ಹಾಕಿದಾಗ, ತಮಗೆ ದೂರು ಬಾರದೆ ಇದ್ದರೂ ಮಾಹಿತಿ ಸಂಗ್ರಹಿಸಿ ಸುಮೊಟೋ ಪ್ರಕರಣ ದಾಖಲಿಸಿ ಆರೋಪಿಗಳನ್ನು ಬಂಧಿಸಿದ ಪೊಲೀಸರ ಕಾರ್ಯವನ್ನು ಸಚಿವರು ಶ್ಲಾಘಿಸಿದರು.

Comments are closed.