ಕರಾವಳಿ

ಗ್ಯಾಸ್ ಟ್ಯಾಂಕರ್ ಪಲ್ಟಿ : ಗ್ಯಾಸ್ ಸೋರಿಕೆ ಹಿನ್ನೆಲೆ ಉಪ್ಪಿನಂಗಡಿ – ಬೆದ್ರೋಡಿ ಪರಿಸರದಲ್ಲಿ ಬೆಂಕಿ ಉರಿಸದಂತೆ ಎಚ್ಚರಿಕೆ

Pinterest LinkedIn Tumblr

ಮಂಗಳೂರು / ಉಪ್ಪಿನಂಗಡಿ ಡಿಸೆಂಬರ್.02: ಜಿಲ್ಲೆಯಲ್ಲಿ ಈಗಾಗಲೇ ಅನೇಕ ಬಾರಿ ಗ್ಯಾಸ್ ಟ್ಯಾಂಕರ್ ಗಳು ಉರುಳಿ ಬಿದ್ದು ಅನಾಹುತಗಳು ಸಂಭವಿಸುತ್ತಿದ್ದರೂ ಸೂಕ್ತವಾದ ಮುನ್ನೆಚ್ಚರಿಕೆ ವಹಿಸದ ಕಾರಣ ಮತ್ತೊಂದು ಅನಿಲ ಟ್ಯಾಂಕರ್ ಮಗುಚಿ ಬಿದ್ದು ಗ್ಯಾಸ್ ಸೋರಿಕೆಯಾದ ಘಟನೆ ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಉಪ್ಪಿನಂಗಡಿ ಬಳಿಯ ಬೆದ್ರೋಡಿ ಎಂಬಲ್ಲಿ ನಿನ್ನೆ ತಡರಾತ್ರಿ ಸಂಭವಿಸಿದೆ.

ಶನಿವಾರ ತಡರಾತ್ರಿ 1:50ರ ಸುಮಾರಿಗೆ ಮಂಗಳೂರಿನಿಂದ ಬೆಂಗಳೂರು ಕಡೆ ತೆರಳುತ್ತಿದ್ದ ಭಾರತ್ ಪೆಟ್ರೋಲಿಯಂ ಕಂಪೆನಿಯ ಅನಿಲ ಟ್ಯಾಂಕರ್ ಬೆದ್ರೋಡಿಯ ತೂಗುಸೇತುವೆಯ ಬಳಿಯ ತಿರುವಿನಲ್ಲಿ ಮಗುಚಿಬಿದ್ದಿದೆ. ಟ್ಯಾಂಕರ್ ನಲ್ಲಿ ಅನಿಲ ಸೋರಿಕೆಯಾಗುತ್ತಿದ್ದು, ಮುನ್ನೆಚ್ಚರಿಕಾ ಕ್ರಮವಾಗಿ ಪರಿಸರದ ನಿವಾಸಿಗಳಿಗೆ ಬೆಂಕಿ ಉರಿಸದಂತೆ ಎಚ್ಚರಿಕೆ ನೀಡಲಾಗಿದೆ.

ಹತ್ತಿರದ ಮನೆಯವರನ್ನು ರಾತ್ರಿಯೇ ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸಲಾಗಿದೆ. ಅನಿಲ ಶಿಪ್ಪಿಂಗ್ ಕಾರ್ಯ ನಡೆಯುತ್ತಿದ್ದು, ಇದಕ್ಕಾಗಿ ಸ್ಥಳಕ್ಕೆ ಮೂರು ಖಾಲಿ ಟ್ಯಾಂಕರ್ ಗಳನ್ನು ತರಿಸಲಾಗಿದೆ. ರಾಷ್ಟ್ರೀಯ ಹೆದ್ದಾರಿಯಲಿ ವಾಹನ ಸಂಚಾರ ಸ್ಥಗಿತಗೊಳಿಸಲಾಗಿದ್ದು, ಪೆರಿಯಶಾಂತಿ ಹಾಗೂ ಹಳೆಗೇಟು ಬಳಿ ವಾಹನಗಳನ್ನು‌ ತಡೆದು ಬದಲಿ ಮಾರ್ಗದಲ್ಲಿ ಕಳುಹಿಸಲಾಗುತ್ತಿದೆ. ಸ್ಥಳದಲ್ಲಿ ಅಗ್ನಿಶಾಮಕ ದಳ, ಪೊಲೀಸರು ಸ್ಥಳದಲ್ಲಿದ್ದಾರೆ.

Comments are closed.