ಕರಾವಳಿ

ಮಂಗಳೂರು ಸೆಂಟ್ರಲ್ ಮಾರುಕಟ್ಟೆಯಲ್ಲಿ ಬೆಂಕಿ ಅವಘಡದ ; ನಾಲ್ಕು ಅಂಗಡಿಗಳು ಬೆಂಕಿಗಾಹುತಿ

Pinterest LinkedIn Tumblr

ಮಂಗಳೂರು, ಡಿಸೆಂಬರ್.06: ನಗರದ ಸೆಂಟ್ರಲ್ ಮಾರುಕಟ್ಟೆಯಲ್ಲಿ ಬುಧವಾರ ರಾತ್ರಿ ಸಂಭವಿಸಿದ ಬೆಂಕಿ ಅವಘಡದಲ್ಲಿ ನಾಲ್ಕು ಅಂಗಡಿಗಳು ಸುಟ್ಟು ಹೋಗಿದ್ದು, ಲಕ್ಷಾಂತರ ರೂ. ಮೌಲ್ಯದ ಸೊತ್ತು ಬೆಂಕಿಗಾಹುತಿಯಾಗಿದೆ.

ಜನನಿಬಿಡ ಪ್ರದೇಶವಾಅದ ಕೇಂದ್ರ ಮಾರುಕಟ್ಟೆಯಲ್ಲಿನ ಅಂಗಡಿಗಳಿಗೆ ಬೆಂಕಿ ಹೊತ್ತಿ ಉರಿದು ಭಾರೀ ಹೊಗೆ ಆವರಿಸಿತ್ತು. ಸುದ್ದಿ ತಿಳಿದ ತಕ್ಷಣ ಸ್ಥಳಕ್ಕೆ ಆಗಮಿಸಿದ ನಗರದ ಪಾಂಡೇಶ್ವರ ಹಾಗೂ ಕದ್ರಿ ಠಾಣೆಯ ನಾಲ್ಕು ಅಗ್ನಿಶಾಮಕ ವಾಹನಗಳು ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದೆ.

ವಿದ್ಯುತ್ ಶಾರ್ಟ್ ಸರ್ಕ್ಯೂಟ್ ಘಟನೆಗೆ ಕಾರಣ ಎಂದು ಶಂಕಿಸಲಾಗಿದೆ.ಘಟನೆಯಿಂದ ಅಪಾರ ಹಾನಿ ಸಂಭವಿಸಿದೆ ಎನ್ನಲಾಗಿದೆ. ಹೆಚ್ಚಿನ ವಿವರ ನಿರೀಕ್ಷಿಸಲಾಗಿದೆ.

Comments are closed.