ಕರಾವಳಿ

ಮಾದಕ ವಸ್ತು ಮಾರಾಟ ಮಾಡುತ್ತಿದ್ದ ದರೋಡೆ ಆರೋಪಿಗಳ ಬಂಧನ : LSD ಸಹಿತಾ 2,89,000 ಮೌಲ್ಯದ ಸೊತ್ತು ವಶ

Pinterest LinkedIn Tumblr

ಮಂಗಳೂರು : ನಗರದಲ್ಲಿ LSD ಹೆಸರಿನ ಮಾದಕ ವಸ್ತು ಮಾರಾಟ ಮಾಡುತ್ತಿದ್ದ ಹಾಗೂ ದರೋಡೆ ಪ್ರಕರಣದಲ್ಲಿ ಭಾಗಿಯಾಗಿದ್ದ ಇಬ್ಬರು ಆರೋಪಿಗಳನ್ನು ಬಂಧಿಸಿರುವ ಮಂಗಳೂರು ದಕ್ಷಿಣ ಠಾಣಾ ಪೊಲೀಸರು ಬಂಧಿತ ಆರೋಪಿಗಳಿಂದ ಸುಮಾರು 13,000 ಮೌಲ್ಯದ LSD ಮಾದಕ ವಸ್ತು ಸಹಿತಾ ಸುಮಾರು ರೂ. 2,89,000 ಮೌಲ್ಯದ ಸೊತ್ತುಗಳನ್ನು ವಶಪಡಿಸಿಕೊಂಡಿದ್ದಾರೆ.

ಬಂಧಿತ ಆರೋಪಿಗಳನ್ನು ಕಾವೂರು ಆಕಾಶ್ ಭವನದ ಗೌತಮ್ ಯಾನೆ ಗೌತು (28) ಹಾಗೂ ದೇರೆಬೈಲು ಕೊಂಚಾಡಿ ಮಂದಾರ ಬೈಲು ನಿವಾಸಿ ಲಾಯ್ ವೇಗಸ್ ( 26 ) ಎಂದು ಗುರುತಿಸಲಾಗಿದೆ. ಆರೋಪಿಗಳು ಮಂಗಳೂರು ದಕ್ಷಿಣ ಪೊಲೀಸ್ ಠಾಣೆಯಲ್ಲಿ ನಡೆದ ದರೋಡೆ ಪ್ರಕರಣದಲ್ಲಿ ಭಾಗಿಯಾಗಿರುತ್ತಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಆರೋಪಿಗಳ ವಶದಿಂದ ಸುಮಾರು 13,000/- ಮೌಲ್ಯದ 13, LSD ಎಂಬ ಮಾದಕ ವಸ್ತುವನ್ನು, ಹಾಗೂ ದರೋಡೆ ಮಾಡಿದ ಮೊಬೈಲ್ ಹ್ಯಾಂಡ್ ಸೆಟ್, ಸ್ಕೂಟರ್, ನಗದು ಹಣ ಮತ್ತು ದರೋಡೆ ಕೃತ್ಯಕ್ಕೆ ಬಳಸಿದ SWIFT ಕಾರು, ಚೂರಿ,ಕಬ್ಬಿಣದ ರಾಡ್ ಒಟ್ಟು 2,89,000/- ಮೌಲ್ಯದ ಸೊತ್ತುಗಳನ್ನು ಮಂಗಳೂರು ದಕ್ಷಿಣ ಠಾಣಾ ಪೊಲೀಸರು ಸ್ವಾಧೀನಪಡಿಸಿಕೊಂಡಿದ್ದಾರೆ.

ಮಂಗಳೂರು ನಗರದ ಹೆರಿಟೇಜ್ ಕಟ್ಟಡದ ಎದುರಿನ ರಸ್ತೆ ಬದಿಯಲ್ಲಿ ಆರೋಪಿಗಳು LSD ಎಂಬ ಮಾದಕ ವಸ್ತುವನ್ನು ಗ್ರಾಹಕರಿಗೆ ಮಾರಾಟ ಮಾಡಲು ವಶದಲ್ಲಿ ಇಟ್ಟುಕೊಂಡಿರುವ ಬಗ್ಗೆ ಮಾಹಿತಿ ಪಡೆದ ಮಂಗಳೂರು ದಕ್ಷಿಣ ಪೊಲೀಸ್ ಠಾಣಾ ಪೊಲೀಸ್ ನಿರೀಕ್ಷಕರಾದ ಕೆ.ಎಂ.ಶರೀಫ್ ರವರು ಸಿಬ್ಬಂದಿಗಳೊಂದಿಗೆ ಸ್ಥಳಕ್ಕೆ ತೆರಳಿ ಆರೋಪಿಗಳನ್ನು ಬಂಧಿಸಿದ್ದಾರೆ.

ಆರೋಪಿಗಳನ್ನಿ ತೀವ್ರ ವಿಚಾರಣೆ ನಡೆಸಿದಾಗ ಆರೋಪಿಗಳಾದ ಗೌತಮ್ ,ಲಾಯಿ ವೇಗಸ್ ರವರು ಇತರರೊಂದಿಗೆ ಸೇರಿಕೊಂಡು ದಿನಾಂಕ 05-12-2018 ರಂದು ಮಂಗಳೂರು ನಗರದ ಫಳ್ನೀರ್ ಬ್ರಿಟ್ಟೊ ಲೇನ್ ನಿವಾಸಿ ಹಸನ್ ಶಿಮಾಕ್ ಎಂಬವರನ್ನು ಫಳ್ನೀರ್ ಎಂಬಲ್ಲಿದ ಅಪಹರಿಸಿ ಅವರಿಗೆ ಹಲ್ಲೆ ಮಾಡಿ ಅವರ ಸ್ಕೂಟರ್, ನಗದುಹಣ,ಹಾಗೂ ಮೊಬೈಲ್ ನ್ನು ದರೋಡೆ ಮಾಡಿದ ಪ್ರಕರಣದಲ್ಲಿ ಭಾಗಿಯಾಗಿರುವುದು ಬಾಯಿಬಿಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಆರೋಪಿಗಳ ಪೈಕಿ ಗೌತಮ್ ಮೇಲೆ ಕಾವೂರು ಪೊಲೀಸ್ ಠಾಣೆಯಲ್ಲಿ 01ಹಲ್ಲೆ, 01ಕೊಲೆ ಪ್ರಕರಣ ದಾಖಲಾಗಿದ್ದು, ಈತನ ಮೇಲೆ ದಾಖಲಾದ ಕೊಲೆ ಪ್ರಕರಣದಲ್ಲಿ ಈತನಿಗೆ ನ್ಯಾಯಾಲಯ ಜೀವಾವಧಿ ಶಿಕ್ಷೆ ವಿಧಿಸಿದ್ದು ಪ್ರಸ್ತುತ ಈತನು ಉಚ್ಚ ನ್ಯಾಯಾಲಯದಿಂದ ಜಾಮೀನು ಪಡೆದಿರುತ್ತಾರೆ.

ಆರೋಪಿಗಳ ಪೈಕಿ ಲಾಯ್ ವೇಗಸ್ ಎಂಬಾತನ ಮೇಲೆ ಕಾವೂರು ಪೊಲೀಸ್ ಠಾಣೆಯಲ್ಲಿ2 ದರೋಡೆ ಯತ್ನ ಪ್ರಕರಣ, ಉತ್ತರ ಪೊಲೀಸ್ ಠಾಣೆಯಲ್ಲಿ 01 ದರೋಡೆ ಯತ್ನ ಪ್ರಕರಣ, ಬರ್ಕೆ ಪೊಲೀಸ್ ಠಾಣೆಯಲ್ಲಿ 01, ಕೊಲೆ ಯತ್ನ, 02 ಹಲ್ಲೆ ಪ್ರಕರಣ . ಹಾಗೂ ಮಂಗಳೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ 01 ಹಲ್ಲೆ ಪ್ರಕರಣ ದಾಖಲಾಗಿರುತ್ತದೆ.

ಪೊಲೀಸ್ ಆಯುಕ್ತರಾದ ಟಿ.ಆರ್ ಸುರೇಶ್, ಕಾನೂನು ಮತ್ತು ಸುವ್ಯವಸ್ಥೆ ವಿಭಾಗದ ಉಪ ಪೊಲೀಸ್ ಆಯುಕ್ತರಾದ ಹನುಮಂತರಾಯ, ಅಪರಾಧ ಮತ್ತು ಸಂಚಾರ ವಿಭಾಗದ ಉಪ ಪೊಲೀಸ್ ಆಯುಕ್ತರಾದ ಶ್ರೀಮತಿ ಉಮಾ ಪ್ರಶಾಂತ್ ಹಾಗೂ ಮಂಗಳೂರು ಕೇಂದ್ರ ಉಪವಿಭಾಗದ ಸಹಾಯಕ ಪೊಲೀಸ್ ಆಯುಕ್ತರಾದ ಭಾಸ್ಕರ್ ಒಕ್ಕಲಿಗ ಇವರ ಮಾರ್ಗದರ್ಶನದಲ್ಲಿ ನಡೆದ ಕಾರ್ಯಾಚರಣೆಯಲ್ಲಿ ಮಂಗಳೂರು ದಕ್ಷಿಣ ಪೊಲೀಸ್ ಠಾಣಾ ಪ್ರಭಾರ ಪೊಲೀಸ್ ನಿರೀಕ್ಷಕರಾದ ಕೆ.ಎಂ ಶರೀಫ್ ರವರು ಆರೋಪಿಗಳನ್ನು ಬಂಧಿಸಿರುತ್ತಾರೆ.

ಆರೋಪಿಗಳ ಪತ್ತೆಗೆ ಮಂಗಳೂರು ಕೇಂದ್ರ ಉಪ ವಿಭಾಗದ ರೌಡಿ ನಿಗ್ರಹ ದಳದ ಪೊಲೀಸ್ ನಿರೀಕ್ಷಕರಾದ ರವೀಶ್ ನಾಯಕ್ ಹಾಗೂ ಸಿಬ್ಬಂದಿಗಳು, ಮಂಗಳೂರು ಪೂರ್ವ ಠಾಣೆಯ ಪೊಲೀಸ್ ನಿರೀಕ್ಷಕರಾದ ಮಾರುತಿ ನಾಯಕ್, ಮಂಗಳೂರು ದಕ್ಷಿಣ ಠಾಣೆಯ ಪಿಎಸ್ಐ ರವರುಗಳಾದ ರಾಜೇಂದ್ರ ಬಿ ಮತ್ತು ಮಂಜುಳಾ ಹಾಗೂ ಸಿಬ್ಬಂಧಿಗಳು ಸಹಕರಿಸಿದ್ದಾರೆ.

Comments are closed.