ಕರಾವಳಿ

ಶಾಲೆ ಕೊಠಡಿಯಲ್ಲೇ ವಿದ್ಯಾರ್ಥಿನಿಯೊಂದಿಗೆ ಅಶ್ಲೀಲ ವರ್ತನೆ: ಪೋಕ್ಸೋ ಕಾಯ್ದೆಯಡಿ ಶಿಕ್ಷಕ ಅರೆಸ್ಟ್?

Pinterest LinkedIn Tumblr

ಉಡುಪಿ: ಕಾರ್ಕಳದ ಖಾಸಗಿ ಶಾಲೆಯೊಂದರ ಶಿಕ್ಷಕ ಅದೇ ಶಾಲೆ ವಿದ್ಯಾರ್ಥಿಯೊಬ್ಬಳ ಜೊತೆ ಶಾಲಾ ಕೊಠಡಿಯಲ್ಲಿ ಅಶ್ಲೀಲವಾಗಿ ವರ್ತಿಸಿದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಕಳೆದೆರಡು ದಿನಗಳ ಹಿಮ್ದೆ ವೈರಲ್ ಆಗಿತ್ತು.

ಪ್ರಕರಣಕ್ಕೆ ಸಂಬಂಧಿಸಿದಂತೆ ಶಾಲೆ ವ್ಯವಸ್ಥಾಪಕರು ನೀಡಿದ ದೂರಿನಂತೆ ಕಾರ್ಕಳ ಗ್ರಾಮಾಂತರ ಠಾಣೆ ಪೊಲೀಸ್ ಠಾಣೆಯಲ್ಲಿ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ ಎನ್ನಲಾಗಿದ್ದು ಆರೋಪಿ ಶಿಕ್ಷಕ ಪ್ರಸಾದ್ ಎಂಬಾತನನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ. ಇನ್ನು ಈ ಶಿಕ್ಷಕ ವಿದ್ಯಾರ್ಥಿನಿಯನ್ನು ಕೆಟ್ಟದ್ದಾಗಿ ಬಳಸಿಕೊಂಡು ವಿಡಿಯೋ ಮಾಡಿದ್ದ ಎನ್ನಲಾಗಿದೆ. ಕೆಲ ಸಮಯಗಳ ಹಿಂದಿನ ವಿಡಿಯೋ ಇದೆನ್ನಲಾಗುತ್ತಿದ್ದು ಹೇಗೆ ವೈರಲ್ ಆಯ್ತು ಎಂಬುದು ಇನ್ನಷ್ಟೇ ತಿಳಿಯಬೇಕಿದೆ.

Comments are closed.