ಕರಾವಳಿ

ತೊಕ್ಕೊಟ್ಟು : ಟ್ರಾಫಿಕ್ ಪೊಲೀಸರ ಎಡವಟ್ಟಿಗೆ ಲಾರಿ ಕ್ಲಿನರ್ ಬಲಿ- ಪೊಲೀಸರ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಪ್ರತಿಭಟನೆ

Pinterest LinkedIn Tumblr

ಮಂಗಳೂರು / ತೊಕ್ಕೊಟ್ಟು, ಡಿಸೆಂಬರ್. 18: ಟ್ರಾಫಿಕ್ ಪೊಲೀಸರ ಎಡವಟ್ಟಿನಿಂದ ಲಾರಿ ಮಗುಚಿ ಬಿದ್ದು ಲಾರಿಯ ಕ್ಲೀನರ್ ಸಾವನ್ನಪ್ಪಿದ ಘಟನೆ ಮಂಗಳವಾರ ಮಧ್ಯಾಹ್ನ ಉಳ್ಳಾಲ ಠಾಣಾ ವ್ಯಾಪ್ತಿಯ ತೊಕ್ಕೊಟ್ಟು ಜಂಕ್ಷನ್ ನಲ್ಲಿ ನಡೆದಿದೆ.

ಮರದ ತುಂಡುಗಳನ್ನು ಸಾಗಿಸುತ್ತಿದ್ದ ಲಾರಿಯನ್ನು ಟ್ರಾಫಿಕ್ ಪೊಲೀಸರು ನಿಲ್ಲಿಸಿ ಕೇಸ್ ಹಾಕಲು ಮುಂದಾದಾಗ ಚಾಲಕ ಲಾರಿ ರಸ್ತೆ ಬದಿಯಲ್ಲಿ ಲಾರಿ ನಿಲ್ಲಿಸಲು ಚಲಿಸಿದಾಗ ಲಾರಿ ಪಕ್ಕದಲ್ಲಿದ್ದ ಒಳಚರಂಡಿಗೆ ಮಗುಚಿ ಬಿದ್ದಿದೆ.

ಘಟನೆಯಲ್ಲಿ ಮೃತಪಟ್ಟ ವ್ಯಕ್ತಿಯನ್ನು​​ ಶಿವಮೊಗ್ಗ ಜಿಲ್ಲೆ ಶಿಕಾರಿಪುರ ನಿವಾಸಿ ವಸಂತ ಕುಮಾರ್ (25) ಎಂದು ಗುರುತಿಸಲಾಗಿದೆ.

ಇಂದು ಮಧ್ಯಾಹ್ನ ಟ್ರಾಫಿಕ್ ಪೊಲೀಸ್ ಲಾರಿಯನ್ನು ನಿಲ್ಲಿಸಲು ಸೂಚನೆ ನೀಡಿದಾಗ ಲಾರಿ ಚಾಲಕ ಲಾರಿಯನ್ನು ಬದಿಗೆ ತಂದು ನಿಲ್ಲಿಸಿದ್ದಾರೆ. ರಾಷ್ಟ್ರೀಯ ಹೆದ್ದಾರಿ ಬದಿಯ ಚರಂಡಿಗೆ ಹಾಸಲಾದ ಕಾಂಕ್ರೀಟ್ ಸ್ಲಾಬ್ ಮೇಲೆ ಲಾರಿ ನಿಂತ ಪರಿಣಾಮ ಸ್ಲಾಬ್ ತುಂಡಾಗಿ ಲಾರಿ ಪಲ್ಟಿಯಾಗಿದೆ. ಲಾರಿ ಪಲ್ಟಿಯಾಗುವ ಸಂದರ್ಭದಲ್ಲಿಅದೇ ಬದಿಯಲ್ಲಿದ್ದ ಕ್ಲೀನರ್ ಗಂಭೀರವಾಗಿ ಗಾಯಗೊಂಡಿದ್ದು, ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಅವರು ಸಾವನ್ನಪ್ಪಿದ್ದಾರೆ ಎಂದು ತಿಳಿದು ಬಂದಿದೆ..

ಘಟನೆಯಿಂದ ಈ ಪರಿಸರದಲ್ಲಿ ಟ್ರಾಫಿಕ್ ಜಾಮ್ ಉಂಟಾಗಿತ್ತು. ಸ್ಥಳದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಸಾರ್ವಜನಿಕರು ಜಮಾಯಿಸಿದ್ದರಿಂದ ಜನರನ್ನು ಚದುರಿಸಲು ಪೊಲೀಸರು ಹರಸಾಹಸ ಪಡಬೇಕಾಯಿತು.

ಇದೇ ಸಂದರ್ಭದಲ್ಲಿ ತೊಕ್ಕೊಟ್ಟು ಜಂಕ್ಷನ್ ನಲ್ಲಿ ಕಾನೂನು ಬಾಹಿರವಾಗಿ ಕರ್ತವ್ಯ ನಿರ್ವಹಿಸುವ ಟ್ರಾಪಿಕ್ ಪೊಲೀಸರ ವಿರುದ್ಧ ಕ್ರಮಕ್ಕೆ ಒತ್ತಾಯಿಸಿ ಸುಮಾರು ಎರಡು ಗಂಟೆಗಳ ಕಾಲ ನೂರಾರು ನೂರಾರು ಮಂದಿ ಪ್ರತಿಭಟನೆ ನಡೆಸಿದರು.

Comments are closed.