ಕರಾವಳಿ

ಉಳ್ಳಾಲ : ದ್ವಿಚಕ್ರ ವಾಹನಕ್ಕೆ ಕಂಟೈನರ್ ಢಿಕ್ಕಿ – ಬೈಕ್ ಸವಾರ ಮೃತ್ಯು

Pinterest LinkedIn Tumblr

ಉಳ್ಳಾಲ, ಡಿಸೆಂಬರ್.24: ಮಂಗಳೂರು – ಕಾಸರಗೋಡು ರಾ.ಹೆ.66ರ ಕಲ್ಲಾಪುವಿನಲ್ಲಿ ರವಿವಾರ ರಾತ್ರಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ಬೈಕ್ ಸವಾರನೋರ್ವ ಗಂಭೀರಗಾಯಗೊಂಡು ಬಳಿಕ ಆಸ್ಪತ್ರೆಯಲ್ಲಿ ಮೃತಪಟ್ಟ ಘಟನೆ ನಡೆದಿದೆ.

ಅಪಘಾತದಲ್ಲಿ ಮೃತಪಟ್ಟ ದುರ್ದೈವಿ ಯುವಕನನ್ನು ಕುಂಪಲ ಆಶ್ರಯ ಕಾಲನಿ ನಿವಾಸಿ ಯತೀಶ್(24) ಎಂದು ಗುರುತಿಸಲಾಗಿದೆ.

ಮಂಗಳೂರಿನ ಎಂ.ಸಿ.ಎಫ್. ಉದ್ಯೋಗಿಯಾಗಿರುವ ಯತೀಶ್ ತಮ್ಮ ದ್ವಿಚಕ್ರ ವಾಹನದಲ್ಲಿ ಮಂಗಳೂರಿನಿಂದ ಕುಂಪಲ ಕಡೆಗೆ ತೆರಳುವ ಸಂದರ್ಭ ತೊಕ್ಕೊಟ್ಟು ಸಮೀಪದ ಕಲ್ಲಾಪುವಿನಲ್ಲಿ ಕಂಟೈನರ್ ಲಾರಿಯೊಂದು ಬೈಕಿಗೆ ಢಿಕ್ಕಿ ಹೊಡೆದು ಈ ಅಪಘಾತ ಸಂಭವಿಸಿದೆ ಎನ್ನಲಾಗಿದೆ.

ಯತೀಶ್ ಬೈಕ್‌ನಲ್ಲಿ ಕಲ್ಲಾಪು ಸಮೀಪ ತಲುಪಿದಾಗ ಬೈಕಿಗೆ ಹಿಂಬದಿಯಿಂದ ಕಂಟೈನರ್ ಢಿಕ್ಕಿ ಹೊಡೆದಿದೆ ಎಂದು ಹೇಳಲಾಗಿದೆ. ಪರಿಣಾಮ ರಸ್ತೆಗೆಸೆಯಲ್ಪಟ್ಟ ಯತೀಶ್ ಲಾರಿಯಡಿಗೆ ಸಿಲುಕಿದ್ದಾರೆ. ಗಂಭೀರ ಗಾಯಗೊಂಡಿದ್ದರು. ಕೂಡಲೇ ಅವರನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.

Comments are closed.