ಕರಾವಳಿ

ಬಿಸಿಯೂಟ ಸಾಮಾಗ್ರಿಗಳ ಅಕ್ರಮ ದಾಸ್ತಾನು ಗೋಡೌನ್‌ಗೆ ದಾಳಿ : ಮೂವರ ಸೆರೆ – ರೂ.10 ಲಕ್ಷ ಮೌಲ್ಯದ ಸೊತ್ತು ವಶ

Pinterest LinkedIn Tumblr

ಮಂಗಳೂರು : ಬಿಸಿಯೂಟ ಮತ್ತು ಕ್ಷೀರ ಭಾಗ್ಯ ಯೋಜನೆಯ ಸಾಮಾಗ್ರಿಗಳ ಅಕ್ರಮ ದಾಸ್ತಾನು ಇರಿಸಿದ್ದ ಗೋಡೌನ್ ಗೆ ದಾಳಿ ನಡೆಸಿದ ಸಿಸಿಬಿ ಪೊಲೀಸರು ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಆರೋಪಿಗಳನ್ನು ಬಂಧಿಸಿ ಲಾರಿ ಹಾಗೂ ಬಿಸಿಯೂಟದ ಸಾಮಾಗ್ರಿಗಳನ್ನು ವಶಪಡಿಸಿಕೊಂಡಿದ್ದಾರೆ.

ಕೊಪ್ಪಳದ ಬಸವರಾಜು, ಅಶೋಕನಗರ ಹೊಯಿಗೆಬೈಲ್ ನಿವಾಸಿ ಚಂದ್ರ ಕುಮಾರ್ ಹಾಗೂ ಚಿಲಿಂಬಿ ಮಲರಾಯ ದೇವಸ್ಥಾನದ ಬಳಿಯ ನಿವಾಸಿ ರಕ್ಷಿತ್ ಬಂಧಿತ ಆರೋಪಿಗಳು.

ನಗರದ ಉರ್ವಾ ಪೊಲೀಸ್ ಠಾಣಾ ವ್ಯಾಪ್ತಿಯ ದಂಬೇಲ್ ಬಳಿಯ ಗೋಡೌನ್ ಗೆ ಮಂಗಳೂರು ಸಿಸಿಬಿ ಪೊಲೀಸರು ಮತ್ತು ಜಿಲ್ಲಾ ಶಿಕ್ಷಣ ಅಧಿಕಾರಿಯವರೊಂದಿಗೆ ದಾಳಿ ನಡೆಸಿ ಸರ್ಕಾರದಿಂದ ಶಾಲಾ ಮಕ್ಕಳಿಗೆ ಒದಗಿಸಲಾಗುವ ಮದ್ಯಾಹ್ನದ ಬಿಸಿಯೂಟ ಹಾಗೂ ಕ್ಷೀರ ಭಾಗ್ಯ ಯೋಜನೆಗಳನ್ವಯ ಒದಗಿಸಲಾಗುವ ಸಾಮಾಗ್ರಿಗಳನ್ನು ಅಕ್ರಮವಾಗಿ ದಾಸ್ತಾನು ಇರಿಸಿದ್ದನ್ನು ಪತ್ತೆ ಹಚ್ಚಿ ಆರೋಪಿಗಳ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಮಂಗಳೂರು ನಗರದ ದಂಬೇಲ್ ಗುರುಕೃಪಾ ಆಯಿಲ್ ಮಿಲ್ ನಲ್ಲಿ ಅಕ್ರಮವಾಗಿ ಸರ್ಕಾರದಿಂದ ಶಾಲಾ ಮಕ್ಕಳಿಗೆ ಒದಗಿಸಲಾಗುವ ಮದ್ಯಾಹ್ನದ ಬಿಸಿಯೂಟ ಹಾಗೂ ಕ್ಷೀರ ಭಾಗ್ಯ ಯೋಜನೆಗಳ ಅನ್ವಯ ಒದಗಿಸಲಾಗುವ ಅಕ್ಕಿ ತೊಗರಿಬೇಳೆ ಹಾಲಿನ ಹುಡಿ ಪ್ಯಾಕೆಟ್ ಗಳಲ್ಲಿ ಸಂಬಂಧಿಸಿದ ಶಾಲೆಗಳಿಗೆ ಸರಬರಾಜು ಮಾಡುವ ಸಾಮಾಗ್ರಿಗಳನ್ನು ಅಕ್ರಮವಾಗಿ ದಾಸ್ತಾನು ಹಾಗೂ ಲಾರಿಯಲ್ಲಿ ಸಾಗಾಟ ಮಾಡುತ್ತಿರುವ ಬಗ್ಗೆ ಮಾಹಿತಿ ಪಡೆದ ಮಂಗಳೂರು ಸಿಸಿಬಿ ಪೊಲೀಸರು ಜಿಲ್ಲಾ ಶಿಕ್ಷಣ ಅಧಿಕಾರಿಯವರೊಂದಿಗೆ ದಾಳಿ ನಡೆಸಿ 25 ಕೆಜಿ ತೂಕದ ನಂದಿನಿ ಹಾಲಿನ ಹುಡಿಯ 7 ಬ್ಯಾಗ್ ಗಳು, ಒಂದು ಕ್ವಿಂಟಾಲ್ ತೊಗರಿಬೇಳೆ, 2.5 ಕ್ವಿಂಟಾಲ್ ಅಕ್ಕಿ ಗಳನ್ನು ಹಾಗೂ ಸಾಗಾಟಕ್ಕೆ ಉಪಯೋಗಿಸಿದ ಲಾರಿಯನ್ನು ವಶಪಡಿಸಿಕೊಂಡಿದ್ದಾರೆ,

ವಶಪಡಿಸಿಕೊಂಡ ಸೊತ್ತಿನ ಒಟ್ಟು ಮೌಲ್ಯ ರೂ. 10,49,200/- ಆಗಿರುತ್ತದೆ ಎಂದು ಪೊಲೀಸರು ತಿಳಿಸಿದ್ದಾರೆ.. ಈ ಬಗ್ಗೆ ಉರ್ವಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ.

ಕಾರ್ಯಾಚರಣೆಯನ್ನು ಸಿಸಿಬಿ ಪೊಲೀಸ್ ಇನ್ಸ್ ಪೆಕ್ಟರ್ ಶಾಂತಾರಾಮ, ಪಿಎಸ್ಐ ಯವರಾದ ಶ್ಯಾಮ್ ಸುಂದರ್, ಕಬ್ಬಾಳ್ ರಾಜ್ ಹಾಗೂ ಸಿಬ್ಬಂದಿಗಳು ಮತ್ತು ಜಿಲ್ಲಾ ಶಿಕ್ಷಣ ಅಧಿಕಾರಿ ರಾಜಲಕ್ಷ್ಮಿ ರವರು ಪಾಲ್ಗೊಂಡಿದ್ದರು.

Comments are closed.