ಕರಾವಳಿ

ಎಚ್‌1ಎನ್‌1ನಿಂದ ಬಳಲುತ್ತಿದ್ದ ಐಪಿಎಸ್ ಅಧಿಕಾರಿ ಮಧುಕರ್‌ ಶೆಟ್ಟಿ ವಿಧಿವಶ

Pinterest LinkedIn Tumblr

ಕುಂದಾಪುರ: ಎಚ್‌1ಎನ್‌1 ಬಾಧಿತರಾಗಿ ಹೈದ್ರಾಬಾದ್‌ನ ಕಾಂಟಿನೆಂಟಲ್‌ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಉಡುಪಿ ಜಿಲ್ಲೆಯ ವಡ್ಡರ್ಸೆ ಮೂಲದ ಐಪಿಎಸ್‌ ಅಧಿಕಾರಿ ಮಧುಕರ್‌ ಶೆಟ್ಟಿ ಚಿಕಿತ್ಸೆ ಫಲಕಾರಿಯಾಗದೇ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ.

ಕರ್ನಾಟಕ ಕೇಡರ್ 1999 ರ ಬ್ಯಾಚ್ ನ ಐಪಿಎಸ್ ಅಧಿಕಾರಿಯಾಗಿರುವ ಮಧುಕರ್ ಶೆಟ್ಟಿ, ಹೈದರಾಬಾದಿನ ಸರ್ದಾರ್ ವಲ್ಲಭಭಾಯ್ ಪಟೇಲ್ ರಾಷ್ಟ್ರೀಯ ಪೊಲೀಸ್ ಅಕಾಡೆಮಿಯಲ್ಲಿ ಉಪ ನಿರ್ದೇಶಕರಾಗಿ ಕಾರ್ಯ ನಿರ್ವಹಿಸುತ್ತಿದ್ದರು. ರಾಜ್ಯದಲ್ಲಿ ಚಿಕ್ಕಮಗಳೂರು ಸೇರಿದಂತೆ ವಿವಿದೆಡೆ ಕೆಲಸ ನಿರ್ವಹಿಸಿದ್ದರು. ಲೋಕಾಯುಕ್ತ ಎಸ್ಪಿ ಆಗಿದ್ದ ವೇಳೆಯಲ್ಲಿ ಭ್ರಷ್ಟರಿಗೆ ಸಿಂಹಸ್ವಪ್ನರಾಗಿದ್ದರು.

ಶ್ವಾಸಕೋಶ ಹಾಗೂ ಹೃದಯ ಸೋಂಕು ಅವರನ್ನು ಬಾಧಿಸಿದ್ದು ಮಧುಕರ್‌ ಶೆಟ್ಟಿಗೆ ಶಸ್ತ್ರಚಿಕಿತ್ಸೆ ನಡೆಸಿ ತೀವ್ರ ನಿಗಾ ಘಟಕದಲ್ಲಿ 72 ಗಂಟೆಗಳ ನಿಗಾದಲ್ಲಿರಿಸಲಾಗಿತ್ತು. ಹಿರಿಯ ಪತ್ರಕರ್ತ ವಡ್ಡರ್ಸೆ ರಘುರಾಮ್ ಶೆಟ್ಟಿಯವರ ಪುತ್ರ ಮಧುಕರ್ ಶೆಟ್ಟರು ಶೀಘ್ರ ಗುಣಮುಖರಾಗಲೆಂದು ಅವರ ಅಭಿಮಾನಿಗಳು, ಊರಿನವರು ಮತ್ತು ಹಿತೈಷಿಗಳು ವಡ್ಡರ್ಸೆ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಶುಕ್ರವಾರ ಸಾಮೂಹಿಕ ಪ್ರಾರ್ಥನೆ ಸಲ್ಲಿಸಿದ್ದರು.

ಮಧುಕರ ಶೆಟ್ಟಿವರ ನಿಧನ ವಾರ್ತೆಯಿಂದ ಕುಟುಂಬ ವರ್ಗ ಹಾಗೂ ಸ್ನೇಹಿತರು ಹಿತೈಷಿಗಳು ದುಖಿಃತರಾಗಿದ್ದಾರೆ.

Comments are closed.