ಕರಾವಳಿ

ಮಂಗಳೂರಿನಲ್ಲಿ ಮತ್ತೆ ತಲೆ ಎತ್ತಿದ್ದ ಅಕ್ರಮ ಮಟ್ಕಾ ದಂಧೆ : ಪ್ರತ್ಯೇಕ ಪ್ರಕರಣಗಳಲ್ಲಿ ಇಬ್ಬರ ಸೆರೆ

Pinterest LinkedIn Tumblr

ಮಂಗಳೂರು : ನಗರದಲ್ಲಿ ನಡೆಯುತ್ತಿದ್ದ ಅಕ್ರಮ ಮಟ್ಕಾ ದಂಧೆಗೆ ಸಂಬಂಧ ಪಟ್ಟಂತೆ ಎರಡು ಪ್ರತ್ಯೇಕ ಪ್ರಕರಣಗಳಲ್ಲಿ ಇಬ್ಬರು ಆರೋಪಿಗಳನ್ನು ಮಂಗಳೂರು ಪೊಲೀಸರು ಬಂಧಿಸಿದ್ದಾರೆ.

ಬಂಧಿತ ಆರೋಪಿಗಳನ್ನು ಕೋಟೆಕಾರ ಕು೦ಪಲದ ಗೌತಮ ಕುಮಾರ್ (28) ಹಾಗೂ ಬಂಟ್ವಾಳ ತಾಲೂಕಿನ ಸಿದ್ದಕಟ್ಟೆಯ ಪ್ರಶಾಂತ್ (28) ಎಂದು ಹೆಸರಿಸಲಾಗಿದೆ.

ಮಂಗಳೂರು ನಗರದ ಪೂರ್ವ ಪೊಲೀಸ್ ಠಾಣಾ ವ್ಯಾಪ್ತಿಯ ಪ೦ಪವೆಲ್ ಪರಿಸರದಲ್ಲಿ ಅಕ್ರಮವಾಗಿ ಮಟ್ಕಾ ದಂಧೆಯಲ್ಲಿ ತೊಡಗಿದ್ದ ಗೌತಮ ಕುಮಾರ್‍‍ನನ್ನು ಮಂಗಳೂರು ಪೂರ್ವ ಪೊಲೀಸರು ಬಂಧಿಸಿದ್ದಾರೆ.

ದಿನಾಂಕ: 02-01-2019 ರಂದು ಮಂಗಳೂರು ನಗರದ ಪೂರ್ವ ಪೊಲೀಸ್ ಠಾಣಾ ವ್ಯಾಪ್ತಿಯ ಪ೦ಪವೆಲ್ ನ ಪ್ರಮೋದ್ ನರ್ಸರಿ ಪರಿಸರದಲ್ಲಿ ಅಕ್ರಮವಾಗಿ ಮಟ್ಕಾ ದಂಧೆಯನ್ನು ನಡೆಸುತ್ತಿದ್ದ ಬಗ್ಗೆ ಮಾಹಿತಿ ಪಡೆದ ಮಂಗಳೂರು ಪೂರ್ವ ಪೊಲೀಸರು ಮಟ್ಕಾ ದಂಧೆಯಲ್ಲಿ ನಿರತನಾಗಿದ್ದ ಆರೋಪಿಯನ್ನು ವಶಕ್ಕೆ ಪಡೆದುಕೊಂಡಿದ್ದಾರೆ.

ಬಂಧಿತ ಆರೋಪಿಯಿಂದ ಮಟ್ಕಾ ಆಟಕ್ಕೆ ಬಳಸಿದ ರೂ. 5,050/ ನಗದು, ಮಟ್ಕಾ ನಂಬ್ರ ಬರೆದ ಚೀಟಿಗಳು ಹಾಗೂ 2ಮೊಬೈಲ್ ಫೋನ್ಅನ್ನು ವಶಪಡಿಸಿಕೊಂಡಿದ್ದಾರೆ.

ಕಾರ್ಯಾಚರಣೆಯಲ್ಲಿ ಇನ್ಸ್ ಪೆಕ್ಟರ್ ಮಾರುತಿ ಜಿ ನಾಯಕ ಪಿಎಸ್ಐಯವರಾದ ಮಾರುತಿ ಎಸ್ ವಿ ಹಾಗೂ ಸಿಬ್ಬಂದಿಗಳು ಭಾಗವಹಿಸಿದ್ದರು.

ಮತ್ತೊಂದು ಪ್ರಕರಣದಲ್ಲಿ ಮಂಗಳೂರು ನಗರದ ಉತ್ತರ ಪೊಲೀಸ್ ಠಾಣಾ ವ್ಯಾಪ್ತಿಯ ಫಳ್ನೀರ್ ಪರಿಸರದಲ್ಲಿ ಅಕ್ರಮವಾಗಿ ಮಟ್ಕಾ ದಂಧೆ ನಡೆಸುತ್ತಿದ್ದವನನ್ನು ಮಂಗಳೂರು ಸಿಸಿಬಿ ಪೊಲೀಸರು ವಶಕ್ಕೆ ಪಡೆದುಕೊಂಡಿರುತ್ತಾರೆ.

ದಿನಾಂಕ: 02-01-2019 ರಂದು ಮಂಗಳೂರು ನಗರದ ಉತ್ತರ ಪೊಲೀಸ್ ಠಾಣಾ ವ್ಯಾಪ್ತಿಯ ಫಳ್ನೀರ್ ಯಶ್ ರಾಜ್ ಬಾರ್ ಪರಿಸರದಲ್ಲಿ ಅಕ್ರಮವಾಗಿ ಮಟ್ಕಾ ದಂಧೆಯನ್ನು ನಡೆಸುತ್ತಿದ್ದ ಬಗ್ಗೆ ಮಾಹಿತಿ ಪಡೆದ ಮಂಗಳೂರು ಸಿಸಿಬಿ ಪೊಲೀಸರು ಮಟ್ಕಾ ದಂಧೆಯಲ್ಲಿ ನಿರತನಾಗಿದ್ದ ಪ್ರಶಾಂತ್ ನನ್ನು ಬಂಧಿಸಿದ್ದಾರೆ.

ಬಂಧಿತ ಆರೋಪಿಯಿಂದ ಮಟ್ಕಾ ಆಟಕ್ಕೆ ಬಳಸಿದ ರೂ. 15,000/ ನಗದು, ಮಟ್ಕಾ ನಂಬ್ರ ಬರೆದ ಚೀಟಿಗಳು, ಮೊಬೈಲ್ ಫೋನ್ ನ್ನು ವಶಪಡಿಸಿಕೊಳ್ಳಲಾಗಿದೆ. ಆರೋಪಿಯನ್ನು ಹಾಗೂ ವಶಪಡಿಸಿಕೊಂಡ ಸೊತ್ತನ್ನು ಮುಂದಿನ ಕ್ರಮಕ್ಕಾಗಿ ಮಂಗಳೂರು ಉತ್ತರ ಪೊಲೀಸ್ ಠಾಣೆಗೆ ಹಸ್ತಾಂತರಿಸಲಾಗಿರುತ್ತದೆ.

ಕಾರ್ಯಾಚರಣೆಯಲ್ಲಿ ಸಿಸಿಬಿ ಘಟಕದ ಇನ್ಸ್ ಪೆಕ್ಟರ್ ಶಾಂತಾರಾಮ, ಪಿಎಸ್ಐಯವರಾದ ಶ್ಯಾಮ್ ಸುಂದರ್, ಹೆಚ್ ಎಂ, ಕಬ್ಬಾಳ್ ರಾಜ್, ಹಾಗೂ ಸಿಬ್ಬಂದಿಗಳು ಭಾಗವಹಿಸಿದ್ದರು.

Comments are closed.