ಕರಾವಳಿ

ಉಪ ಮುಖ್ಯಮಂತ್ರಿ ಡಾ. ಜಿ ಪರಮೇಶ್ವರ್ ಹಾಗೂ ಸಚಿವ ಡಿ.ಕೆ. ಶಿವಕುಮಾರ್ ನಾಳೆ ಮಂಗಳೂರಿಗೆ..

Pinterest LinkedIn Tumblr

ಮಂಗಳೂರು ಜನವರಿ 18: ಉಪ ಮುಖ್ಯಮಂತ್ರಿ ಡಾ. ಜಿ ಪರಮೇಶ್ವರ್ ಹಾಗೂ ಜಲ ಸಂಪನ್ಮೂಲ ಹಾಗೂ ಕನ್ನಡ ಮತ್ತು ಸಂಸ್ಕೃತಿ ಸಚಿವ ಡಿ.ಕೆ. ಶಿವಕುಮಾರ್ ಅವರು ನಾಳೆ ಮಂಗಳೂರಿಗೆ ಆಗಮಿಸಲಿದ್ದಾರೆ.

ಉಪ ಮುಖ್ಯಮಂತ್ರಿ ಡಾ. ಜಿ ಪರಮೇಶ್ವರ್ ಅವರು ನಾಳೆ ಪೂರ್ವಾಹ್ನ 11.25 ಗಂಟೆಗೆ ವಿಮಾನದ ಮೂಲಕ ಮಂಗಳೂರಿಗೆ ಆಗಮಿಸಿ, 11.35 ಕ್ಕೆ ಮಂಗಳೂರು ನೆಹರೂ ಮೈದಾನದಲ್ಲಿ ನವೋದಯ ಸ್ವ-ಸಹಾಯ ಸಂಘಗಳ ವಿಶಂತಿ ಸಮಾವೇಶದಲ್ಲಿ ಭಾಗವಹಿಸಲಿದ್ದಾರೆ. ಅಪರಾಹ್ನ 3 ಗಂಟೆಗೆ ಮಂಗಳೂರಿನಿಂದ ವಿಮಾನದ ಮೂಲಕ ಬೆಂಗಳೂರಿಗೆ ತೆರಳಲಿದ್ದಾರೆ.

ಜಲ ಸಂಪನ್ಮೂಲ ಹಾಗೂ ಕನ್ನಡ ಮತ್ತು ಸಂಸ್ಕೃತಿ ಖಾತೆ ಸಚಿವ ಡಿ.ಕೆ. ಶಿವಕುಮಾರ್ ಅವರು ನಾಳೆ ಪೂರ್ವಾಹ್ನ 9.30 ಗಂಟೆಗೆ ವಿಮಾನದ ಮೂಲಕ ಮಂಗಳೂರಿಗೆ ಆಗಮಿಸಿ ಪೂರ್ವಾಹ್ನ 10 ಗಂಟೆಗೆ ಮಂಗಳೂರು ನೆಹರೂ ಮೈದಾನದಲ್ಲಿ ನವೋದಯ ಸ್ವ ಸಹಾಯ ಸಂಘಗಳ ವಿಶಂತಿ ಸಮಾವೇಶ ಹಾಗೂ ದ.ಕ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಮಂಗಳೂರು ಇದರ ಅಧ್ಯಕ್ಷ ಸಹಕಾರ ರತ್ನ ಡಾ. ಎಂ ಎನ್ ರಾಜೇಂದ್ರ ಕುಮಾರ್ ಅವರ ಸಾರ್ಥಕ ಸೇವೆಯ ರಜತ ಸಂಭ್ರಮ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.

ಅಪರಾಹ್ನ 2 ಗಂಟೆಗೆ ಮಂಗಳೂರಿನಿಂದ ವಿಶೇಷ ವಿಮಾನದ ಮೂಲಕ ಬೆಂಗಳೂರಿಗೆ ತೆರಳಲಿದ್ದಾರೆ.

Comments are closed.