ಕರಾವಳಿ

ಪಡೀಲ್ ಬಳಿ ಉರುಳಿ ಬಿದ್ದ ಗ್ಯಾಸ್ ಟ್ಯಾಂಕರ್ : ಗ್ಯಾಸ್ ಸೋರಿಕೆ ಶಂಕೆಯಿಂದ ಸ್ಥಳದಲ್ಲಿ ಆತಂಕ

Pinterest LinkedIn Tumblr

ಮಂಗಳೂರು, ಜನವರಿ.19: ಅನಿಲ ಹೇರಿಕೊಂಡು ಸಾಗುತ್ತಿದ್ದ ಬುಲೆಟ್ ಟ್ಯಾಂಕರ್‌ವೊಂದು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಘಟನೆ ಶನಿವಾರ ಮಧ್ಯಾಹ್ನ ನಗರದ ಪಡೀಲ್ ಸಮೀಪದ ಮರೋಳಿ ಬಳಿ ಸಂಭವಿಸಿದೆ.

ಮಂಗಳೂರಿನಿಂದ ಬಿ.ಸಿ.ರೋಡ್ ಕಡೆ ಸಾಗುತ್ತಿದ್ದ ಟ್ಯಾಂಕರ್ ಮರೋಳಿ ಬಳಿ ಚಾಲಕನ ನಿಯಂತ್ರಣ ತಪ್ಪಿ ಉರುಳಿಬಿದ್ದಿದೆ., ಈ ವೇಳೆ ಗ್ಯಾಸ್ ಸೋರಿಕೆಯಾಗಿದೆ ಎಂಬ ಅನುಮಾನ ವ್ಯಕ್ತವಾಗಿದ್ದು ಸ್ಥಳದಲ್ಲಿ ಕೆಲ ಹೊತ್ತು ಆತಂಕದ ಪರಿಸ್ಥಿತಿ ನಿರ್ಮಾಣವಾಗಿತ್ತು.

ಆದರೆ ಅಗ್ನಿಶಾಮಕ ದಳದ ಸಿಬ್ಬಂದಿ ವರ್ಗ ಕ್ಷಣಾರ್ಧದಲ್ಲಿ ಸ್ಥಳಕ್ಕೆ ತೆರಳಿ ಸಂಭಾವ್ಯ ಅಪಾಯವನ್ನು ತಪ್ಪಿಸಿದ್ದಾರೆ ಎಂದು ತಿಳಿದು ಬಂದಿದೆ.

ಘಟನೆ ನಡೆದ ಸ್ಥಳದಲ್ಲಿ ವಾಹನಗಳು ಹಾಗೂ ಸ್ಥಳೀಯರು ಜಾಮಾಯಿಸಿದ್ದರಿಂದ ಇತರ ವಾಹನಕ್ಕೆ ಸಂಚಾರ ಸಂಚಾರಕ್ಕೆ ಅಡಚಣೆಯುಂಟಾಗಿದ್ದು, ಕೂಡಲೇ ನಗರ ಸಂಚಾರ ಪೊಲೀಸರು ಸ್ಥಳಕ್ಕೆ ದೌಡಾಯಿಸಿ ಸುಗಮ ಸಂಚಾರಕ್ಕೆ ವ್ಯವಸ್ಥೆ ಕಲ್ಪಿಸಿದ್ದಾರೆ.

ಘಟನೆಯಿಂದ ಯಾವುದೇ ಅಪಾಯ ಸಂಭವಿಸಿಲ್ಲ ಎಂದು ಪೊಲೀಸರು ತಿಳಿಸಿದ್ದು, ಟ್ಯಾಂಕರ್ ಅನ್ನು ಸ್ಥಳದಿಂದ ಸ್ಥಳಾಂತರಿಸುವ ಕಾರ್ಯಾಚರಣೆ ನಡೆದಿದೆ.

Comments are closed.