ಕರಾವಳಿ

ಸ್ವಯಂ ಪ್ರೇರಣೆಯಿಂದ ರಕ್ತದಾನ ಮಾಡಿ – ಜೀವ ಉಳಿಸಿ (ರಕ್ತದಾನದ ಕುರಿತ ವಿಶೇಷ ಲೇಖನ)

Pinterest LinkedIn Tumblr

(ಕಡತ ಚಿತ್ರ)

ಮಂಗಳೂರು : ಜಗತ್ತಿನ ಅತಿ ದೊಡ್ಡ ಸಂಶೋಧನೆಯೆಂದರೆ,ಒಬ್ಬ ಮನುಷ್ಯನ ರಕ್ತವನ್ನು ಇನ್ನೊಬ್ಬನ ಜೀವ ಉಳಿಸಲು ಉಪಯೋಗಿ ಸುವುದು. ಇದರಿಂದ ಹಲವಾರು ಜನರು ಸಾವಿನಿಂದ ಪಾರಾಗಿದ್ದಾರೆ.ಯಾವುದೇ ವ್ಯಕ್ತಿ ಇನ್ನೊಬ್ಬರ ಜೀವ ಉಳಿಸಲು ತನ್ನ ರಕ್ತವನ್ನು, ಸ್ವಯಂ ಪ್ರೇರಿತನಾಗಿ,ಯಾವುದೇ ಪ್ರತಿಫಲಾಪೇಕ್ಷೆಯಿಲ್ಲದೆ, ಕೊಡುವುದಕ್ಕೆ “ರಕ್ತದಾನ” ಎನ್ನುವರು.

ರಕ್ತಕ್ಕೆ ವರ್ಷವಿಡೀ ನಿರಂತರವಾಗಿ ಬೇಡಿಕೆ ಇರುತ್ತದೆ.ಯಾಕೆಂದರೆ ಅಪಘಾತಗಳು, ತುರ್ತು ಶಸ್ತ್ರ ಚಿಕಿತ್ಸೆಗಳ ಸಂದರ್ಭಗಳು ಒದಗುತ್ತಲೇ ಇರುತ್ತದೆ.ಜೋತೆಯಲ್ಲಿ ಕ್ಯಾನ್ಸರ್ ರೋಗಿಗಳು, ಗರ್ಭಿಣಿ ಸ್ತ್ರೀಯರು,ಥ್ಯಾಲಸೀಮಿಯಾ, ಹಿಮೋಫಿಲಿಯ ಮುಂತಾದ ರೋಗಿಗಳೂ ರಕ್ತದಾನಿಗಳನ್ನೇ ಅವಲಂಬಿಸಿರುತ್ತಾರೆ.

ನಮ್ಮ ರಾಜ್ಯದಲ್ಲಿ ಒಂದು ದಿನಕ್ಕೆ ಅಂದಾಜು 800 ರಿಂದ 1100ಯುನಿಟ್ ಗಳಷ್ಟು ರಕ್ತದ ಬೇಡಿಕೆ ಇದೆ. ಆದರೆ, ಶೇಕಡ 80 ರಷ್ಟು ರಕ್ತ ಮಾತ್ರ ಪೂರೈಕೆಯಾಗುತ್ತಿದೆ. ಆದ್ದರಿಂದ ತುರ್ತು ಸಂದರ್ಭದಲ್ಲಿ ಜನರ ಜೀವ ಉಳಿಸಲು ರಕ್ತದಾನಕ್ಕೆ ಮುಂದಾಗಬೇಕಾಗಿದೆ.

ಒಮ್ಮೆ ದಾನಿಗಳಿಂದ ಶೇಖರಿಸಿದ ರಕ್ತ 35 ದಿನಗಳವರೆಗೆ ಮಾತ್ರ ತನ್ನ ಶಕ್ತಿಯನ್ನೇ ಉಳಿಸಿಕೊಂಡಿರುತ್ತದೆ. 35 ದಿನಗಳ ನಂತರ, ಅದು ಉಪಯೋಗಕ್ಕೆ ಬರುವುದಿಲ್ಲ.ಆದ್ದರಿಂದ ಜನತೆ ಆಗಾಗ ರಕ್ತದಾನ ಮಾಡಿದಲ್ಲಿ ಮಾತ್ರ ನಿರಂತರವಾಗಿ ಅವಶ್ಯಕತೆ ಇರುವವರಿಗೆ, ರಕ್ತ ನೀಡಿ ಜೀವ ಉಳಿಸಲು ಸಾಧ್ಯವಾಗುತ್ತದೆ.

• ರಕ್ತಕ್ಕೆ ಪರ್ಯಾಯವಾದ (ಬದಲಿಯಾದ) ವಸ್ತುವಿಲ್ಲ.
• ರಕ್ತವನ್ನು ಕೃತಕವಾಗಿ ಉತ್ಪಾದಿಸಲು ಸಾಧ್ಯವಿಲ್ಲ.
• ರಕ್ತವನ್ನು ಮನುಷ್ಯರ ದಾನದಿಂದ ಮಾತ್ರಪಡೆಯಬಹುದು.

ನಗರದಲ್ಲಿ ಖಾಸಗಿ ಸಂಘ ಸಂಸ್ಥೆಗಳ ಮೂಲಕ ಮತ್ತು ಖಾಸಗಿ ವೈದ್ಯಕೀಯ ಕಾಲೇಜುಗಳು ನಡೆಸುವಂತಹ ರಕ್ತದಾನ ಶಿಬಿರ ಗಳಿಂದ ಸಂಗ್ರಹವಾದ ರಕ್ತವು ಆಯಾ ಖಾಸಗಿ ವೈದಕೀಯ ಆಸತ್ಪ್ರೆಗಳಲ್ಲಿ ಲಭ್ಯವಿರುತ್ತದೆ. ಇದರಿಂದಾಗಿ ಸರ್ಕಾರಿ ಆಸತ್ಪ್ರೆಗಳಲ್ಲಿ ರಕ್ತದ ಪೂರೈಕೆಯು ಕಡಿಮೆಯಾಗಿದ್ದು, ರೋಗಿಗಳು ಕಷ್ಟಪಡುವಂತಾಗಿದೆ. ವೆನ್‍ಲ್ಲಾಕ್ ಮತ್ತು ಲೇಡಿಗೋಶನ್ ಆಸತ್ಪ್ರೆಗಳಲ್ಲಿ ದಾಖಾಲಾಗಿರುವ ಬಡರೋಗಿಗಳಿಗೆ ಸಾಕಷ್ಟು ತೊಂದರೆಯಾಗುತ್ತಿದೆ.

ವೆನ್‍ಲ್ಲಾಕ್ ಮತ್ತು ಲೇಡಿಗೋಶನ್ ಆಸತ್ಪ್ರೆಗಳಲ್ಲಿನ ರೋಗಿಗಳಿಗೆ ಹೆಚ್ಚು ಉಪಯೋಗವಾಗುವಂತೆ ಸ್ವಯಂ ಸೇವಾ ಸಂಘಗಳು, ಎನ್‍ಜಿಓಗಳು ರಕ್ತದಾನ ಶಿಬಿರ ವನ್ನು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ವೆನ್‍ಲ್ಲಾಕ್ ಬ್ಲಡ್ ಬ್ಯಾಂಕ್ ಘಟಕದ ಜೋತೆಗೂಡಿ ರಕ್ತದಾನ ಶಿಬಿರವನ್ನು ಆಯೋಜಿಸಿದರೆ ಬಡರೋಗಿಗಳಿಗೆ ಸಾಕಷ್ಟು ಸಹಾಯವಾಗುತ್ತದೆ ಎಂದು ಜಿಲ್ಲಾ ಆರೋಗ್ಯ ಶಿಕ್ಷಣಾ ಅಧಿಕಾರಿಗಳು ಅಭಿಪ್ರಾಯ ವ್ಯಕ್ತ ಪಡಿಸಿದ್ದಾರೆ.

ರಕ್ತದಾನವನ್ನು ಹೆಣ್ಣು ಗಂಡೆಂಬ ಭೇದವಿಲ್ಲದೇ 18 ರಿಂದ 60 ವರ್ಷದ ಒಳಗಿರುವ ಎಲ್ಲಾ ಆರೋಗ್ಯವಂತ ವ್ಯಕ್ತಿಗಳು ರಕ್ತದಾನ ಮಾಡಬಹುದು.ಗಂಡಸರು 3 ತಿಂಗಳಿಗೆ ಒಮ್ಮೆ ಮತ್ತು ಹೆಂಗಸರು 4 ತಿಂಗಳಿಗೆ ಒಮ್ಮೆ ರಕ್ತದಾನ ಮಾಡಬಹುದು.ದಾನಿಯ ದೇಹದ ತೂಕ 45 ಕೆ.ಜಿ.ಗಿಂತ ಹೆಚ್ಚಿರಬೇಕು.ರಕ್ತದಲ್ಲಿ ಹಿಮೋಗ್ಲೋಬಿನ್ ಅಂಸ 12.5ಗ್ರಾಂಗಿಂತ ಹೆಚ್ಚಿರಬೇಕು.ಸಿಸ್ಟೋಲಿಕ್ ರಕ್ತದೊತ್ತಡವು 100 ರಿಂದ 140 ಇದ್ದು ಡಯಸ್ಟೋಲಿಕ್ ಒತ್ತಡವು 70 ರಿಂದ 100 ಇರುವವರು ರಕ್ತದಾನ ಮಾಡಬಹುದು.

ರಕ್ತದಾನ ಮಾಡುವುದರಿಂದ ದಾನಿಯ ದೇಹದಲ್ಲಿ ದೇಹದಲ್ಲಿ ಹೊಸ ರಕ್ತ ಉತ್ಪತ್ತಿಯಾಗಲು ಪ್ರಚೋದನೆ ಆಗುತ್ತದೆ.ದೇಹಲ್ಲಿ ಹೊಸ ರಕ್ತ ಚಾಲನೆಯಿಂದ ಕರ್ಯತತ್ಪರತೆ, ಜ್ಞಾಪಕ ಶಕ್ತಿ ವೃದ್ಧಿಯಾಗುತ್ತದೆ.ರಕ್ತದಲ್ಲಿ ಕೊಬ್ಬಿನಾಂಶ ಕಡಿಮೆ ಮಾಡಲು ಸಹಾಯವಾಗುತ್ತದೆ. ಹೃದಯಾಘಾತವನ್ನು ಶೇ.80ಕ್ಕಿಂತಲೂ ಜಾಸ್ತಿ ತಡೆಯಲು ಸಹಾಯವಾಗುತ್ತದೆ.ರಕ್ತದ ಒತ್ತಡ,ಇತರ ಕೆಲವು ರೋಗಗಳನ್ನು ತಡೆಗಟ್ಟಲು ಸಹಾಯವಾಗುತ್ತದೆ.

Comments are closed.