ಉಡುಪಿ: ಕೈಕಾಲು ಕಟ್ಟಿದ್ದು, ನೇಣು ಬಿಗಿದ ಸ್ಥಿತಿಯಲ್ಲಿ ವ್ಯಕ್ತಿಯ ಶವ ಪತ್ತೆಯಾದ ಘಟನೆ ಶಿರ್ವ ಠಾಣಾ ವ್ಯಾಪ್ತಿಯ ಮೂಡುಬೆಳ್ಳೆ ಗ್ರಾಮದ ಎಡ್ಮೇರ್ ಕಾಡಿನಲ್ಲಿ ನಡೆದಿದೆ. ಮೇಲ್ನೋಟಕ್ಕೆ ಇದೊಂದು ಕೊಲೆಯೆಂಬ ಅನುಮಾನ ವ್ಯಕ್ತವಾಗಿದೆ.

ಮೂಡುಬೆಳ್ಳೆ ನಿವಾಸಿ ಮಾರ್ಟಿನ್ (55) ಎನ್ನುವವರ ಕೈ-ಕಾಲು ಕಟ್ಟಿ ಕುತ್ತಿಗೆಯನ್ನು ಬಿಗಿದ ಸ್ಥಿತಿಯಲ್ಲಿ ಶವ ಪತ್ತೆಯಾಗಿದೆ. ಕೂಡಲೇ ಸ್ಥಳೀಯರು ಶಿರ್ವ ಪೊಲೀಸರಿಗೆ ಮಾಹಿತಿ ನೀಡಿದ್ದು ಸ್ಥಳಕ್ಕಾಗಮಿಸಿದ ಪೊಲೀಸರು ಶವವನ್ನು ಮರಣೋತ್ತರ ಪರೀಕ್ಷೆಗೆ ಕಳಿಸಿ ತನಿಖೆ ಮುಂದುವರೆಸಿದ್ದಾರೆ.
ಯಾರೋ ಇವರನ್ನು ಕೊಲೆ ಮಾಡಿದ್ದಾರೆಂದು ಸ್ಥಳೀಯರು ಸಂಶಯ ವ್ಯಕ್ತಪಡಿಸುತ್ತಿದ್ದು ಮರಣೋತ್ತರ ಪರೀಕ್ಷೆ ವರದಿಗಾಗಿ ನಿರೀಕ್ಷಿಸಲಾಗುತ್ತಿದೆ.
ಶಿರ್ವ ಪೊಲೀಸ್ ಠಾಣೆಯಲ್ಲಿ ಈ ಬಗ್ಗೆ ಪ್ರಕರಣ ದಾಖಲಾಗಿದೆ.
Comments are closed.