ಕರಾವಳಿ

ಪ್ರಕೃತಿ ವಿಕೋಪ ಎದುರಿಸಲು ಜಿಲ್ಲೆಗೆ ವಿಶ್ವಬ್ಯಾಂಕ್ ಆರ್ಥಿಕ ನೆರವಿನಡಿ 23.30 ಕೋಟಿ ರೂ. ಮಂಜೂರು : ಸಚಿವ ಯು.ಟಿ.ಖಾದರ್

Pinterest LinkedIn Tumblr

ಮಂಗಳೂರು, ಜನವರಿ.26: ದ.ಕ. ಜಿಲ್ಲೆಯಲ್ಲಿ ಚಂಡಮಾರುತ ಅಪಾಯ ಉಪಶಮನ ಯೋಜನೆಯಡಿ ತುರ್ತು ನೆರೆ, ಪ್ರಕ್ಷುಬ್ಧ ಸಂದರ್ಭ ಉಂಟಾಗುವ ಅಪಾಯವನ್ನು ಎದುರಿಸುವ ನಿಟ್ಟಿನಲ್ಲಿ ವಿಶ್ವಬ್ಯಾಂಕ್ ಆರ್ಥಿಕ ನೆರವಿನಡಿ 8 ಪ್ಯಾಕೇಜ್ ಕಾಮಗಾರಿಗಳಿಗೆ 23.30 ಕೋಟಿ ರೂ. ಮಂಜೂರಾಗಿದೆ. ಇದರ ಕಾಮಗಾರಿಗಳು ಪ್ರಗತಿಯಲ್ಲಿವೆ ಎಂದು ದ.ಕ.ಜಿಲ್ಲಾ ಉಸ್ತುವಾರಿ ಸಚಿವ ಯು.ಟಿ.ಖಾದರ್ ಹೇಳಿದರು.

ದ.ಕ. ಜಿಲ್ಲಾ ಮಟ್ಟದ ಗಣರಾಜ್ಯೋತ್ಸವದ ಪ್ರಯುಕ್ತ ಶನಿವಾರ ನಗರದ ನೆಹರೂ ಮೈದಾನದಲ್ಲಿ ರಾಷ್ಟ್ರ ಧ್ವಜಾರೋಹಣ ನೆರವೇರಿಸಿ ಅವರು ಸಂದೇಶ ನೀಡಿದರು. ದ.ಕ. ಜಿಲ್ಲೆಯ ವಿವಿಧ ಕಡೆ 2018-19ನೆ ಸಾಲಿನಲ್ಲಿ ಶಾಲಾ ಮಕ್ಕಳಿಗೆ ನದಿ, ಹಳ್ಳ, ತೋಡುಗಳನ್ನು ದಾಟಲು ಅನುಕೂಲವಾಗುವಂತೆ 221 ಕಾಲುಸಂಕಗಳನ್ನು 30 ಕೋಟಿ ರೂ. ಅಂದಾಜು ವೆಚ್ಚದಲ್ಲಿ ನಿರ್ಮಿಸಲು ಪ್ರಸ್ತಾಪಿಸಲಾಗಿದೆ. ಪ್ರಥಮ ಆದ್ಯತೆಯಡಿ 80 ಕಾಲುಸಂಕಗಳನ್ನು ನಿರ್ಮಿಸಲು ಟೆಂಡರ್ ಕರೆಯಲಾಗಿದೆ ಎಂದು ಅವರು ಹೇಳಿದರು.

್ರಾಜ್ಯ ಸರಕಾರ ‘ಮಾತೃಶ್ರೀ ಯೋಜನೆ’ಯನ್ನು ಜಾರಿಗೆ ತಂದಿದ್ದು ಆದ್ಯತಾ ಕುಟುಂಬದಲ್ಲಿರುವ ಮೊದಲ ಎರಡು ಹೆರಿಗೆಗಳಿಗೆ 6,000 ರೂ.ಗಳನ್ನು ಕಂತುಗಳ ಮೂಲಕ ಫಲಾನುಭವಿಗಳ ಖಾತೆಗೆ ಜಮಾ ಮಾಡುವ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಗಿದೆ. ದ.ಕ. ಜಿಲ್ಲೆಯಲ್ಲಿ 3,038 ಫಲಾನುಭವಿಗಳನ್ನು ಗುರುತಿಸಲಾಗಿದೆ. ಪ್ರಸಕ್ತ ಸಾಲಿನಲ್ಲಿ ಟ್ರಾಲ್ ಬೋಟ್ ಮಾಲಕರಿಗೆ 10,000 ರೂ. ವೌಲ್ಯದ 35 ಎಂಎಂ ಕಾಡ್‌ಎಂಡ್ ಬಲೆಗಳನ್ನು ಉಚಿತವಾಗಿ ವಿತರಿಸಲಾಗುವುದು. ಈಗಾಗಲೇ 400 ಫಲಾನುಭವಿಗಳನ್ನು ಆಯ್ಕೆ ಮಾಡಲಾಗಿದೆ ಎಂದು ಸರಕಾರದ ವಿವಿಧ ಯೋಜನೆಗಳ ಬಗ್ಗೆ ಸಚಿವರು ಮಾಹಿತಿ ನೀಡಿದರು.

ಕಾರ್ಯಕ್ರಮದಲ್ಲಿ ವಿವಿಧ ಇಲಾಖೆಗಳಲ್ಲಿ ಅತ್ಯುತ್ತಮ ಸೇವೆ ಸಲ್ಲಿಸಿದ ಅಧಿಕಾರಿಗಳಿಗೆ ಸರ್ವೋತ್ತಮ ಪ್ರಶಸ್ತಿ ಪ್ರದಾನ ಮಾಡಲಾಯಿತು. ಇದೇ ವೇಳೆ ಜೋಡುಪಾಲ ದುರಂತ ಸಂದರ್ಭ ಅತ್ಯುತ್ತಮವಾಗಿ ಕಾರ್ಯ ನಿರ್ವಹಿಸಿದ ಅಧಿಕಾರಿಗಳನ್ನು ಸನ್ಮಾನಿಸಲಾಯಿತು.

ಗೃಹರಕ್ಷಕ ದಳದ ಅಬ್ದುಲ್ ಗಫೂರ್, ಸುಳ್ಯ ರಿಸರ್ವ್ ಫೋರ್ಸ್‌ನ ಗಣೇಶ್, ಎಸ್ಸೈ ಮಂಜುನಾಥ್, ಕೋರ್ಸ್ಟ್ ಗಾರ್ಡ್ ಪ್ರಧಾನ ಅಧಿಕಾರಿ ಎಂ.ಟಿ. ಪ್ರದೀಪ್, ಅಗ್ನಿಶಾಮಕ ತುರ್ತು ಸೇವೆಗಳ ಮುಖ್ಯ ಅಧಿಕಾರಿ ಟಿ.ಎನ್. ಶಿವಶಂಕರ್‌ರನ್ನು ಸನ್ಮಾನಿಸಲಾಯಿತು.

ಕೆಎಸ್ಸಾರ್ಟಿಸಿಯಲ್ಲಿ ಅಪಘಾತ ರಹಿತವಾಗಿ ಬಸ್ ಚಾಲನೆ ಮಾಡಿರುವ ಸತೀಶ್, ಚಂದ್ರಶೇಖರ್, ಗಣೇಶ್ ಶೆಟ್ಟಿ, ಗಣಪತಿ ಕೊಟ್ಟಾರಿ, ಈಶ್ವರ ಹಾಗೂ ದಿವಂಗತ ದುಗ್ಗಪ್ಪ ನಾಯಕ್ ಅವರನ್ನು ಅಭಿನಂದಿಸಲಾಯಿತು.

ಕರ್ನಾಟಕ ವಿಧಾನಸಭಾ ಸಾರ್ವತ್ರಿಕ ಚುನಾವಣೆ 2018ರ ಪ್ರಕ್ರಿಯೆಯಲ್ಲಿ ಅತ್ಯುತ್ತಮವಾಗಿ ಕಾರ್ಯನಿರ್ವಹಿಸಿದ ಮೇರೆಗೆ ರಾಜ್ಯಪಾಲರಿಂದ ಅತ್ಯುತ್ಮತ ಹೆಚ್ಚುವರಿ ಚುನಾವಣಾಧಿಕಾರಿ ಎಂಬ ರಾಜ್ಯಮಟ್ಟದ ಪ್ರಶಸ್ತಿಯನ್ನು ಸ್ವೀಕರಿಸಿರುವ ಅಪರ ಜಿಲ್ಲಾಧಿಕಾರಿ ಡಾ.ಕುಮಾರ್‌ರನ್ನು ಈ ಸಂದರ್ಭ ಗೌರವಿಸಲಾಯಿತು. ಗಣರಾಜ್ಯೋತ್ಸವದ ಪಥ ಸಂಚಲದಲ್ಲಿ ಅತ್ಯುತ್ತಮವಾಗಿ ನಿರ್ವಹಣೆ ತೋರಿದ ಭಾರತ್ ಸೇವಾದಳ ಪ್ರಥಮ ಹಾಗೂ ಆರ್‌ಎಸ್‌ಪಿ ಬಾಲಕಿಯರ ತಂಡ ದ್ವಿತೀಯ ಸ್ಥಾನವನ್ನು ತನ್ನದಾಗಿಸಿಕೊಂಡಿತು.

ಕಾರ್ಯಕ್ರಮದಲ್ಲಿ ಕೇಂದ್ರದ ಸಹಾಯಕ ಸಚಿವ ರಮೇಶ್ ಜಿಣಜಿಣಗಿ, ಶಾಸಕ ವೇದವ್ಯಾಸ ಕಾಮತ್, ಮೇಯರ್ ಭಾಸ್ಕರ್ ಕೆ., ಜಿಪಂ ಅಧ್ಯಕ್ಷೆ ಮೀನಾಕ್ಷಿ ಶಾಂತಿಗೋಡು, ತಾಪಂ ಅಧ್ಯಕ್ಷ ಮುಹಮ್ಮದ್ ಮೋನು, ಜಿಪಂ ಸದಸ್ಯರಾದ ಮಮತಾ ಗಟ್ಟಿ, ಜಿಲ್ಲಾಧಿಕಾರಿ ಸಸಿಕಾಂತ್ ಸೆಂಥಿಲ್, ಜಿಪಂ ಮುಖ್ಯ ಕಾರ್ಯರ್ನಿಹಣಾಧಿಕಾರಿ ಸೆಲ್ವಮಣಿ, ಪೊಲೀಸ್ ಆಯುಕ್ತ ಟಿ.ಆರ್.ಸುರೇಶ್, ಅಪರ ಜಿಲ್ಲಾಧಿಕಾರಿ ಕುಮಾರ್ ಮತ್ತಿತರರು ಉಪಸ್ಥಿತರಿದ್ದರು.

Comments are closed.