ಕರಾವಳಿ

ಹರೀಶ್ ಶೇರಿಗಾರ್ ಅವರ “ENGLISH” ತುಳು ಸಿನಿಮಾದಲ್ಲಿ ಪ್ರಮುಖ ಪಾತ್ರದಲ್ಲಿ ಅಭಿನಯಿಸಲಿದ್ದಾರೆ ಖ್ಯಾತ ನಟ ಅನಂತನಾಗ್

Pinterest LinkedIn Tumblr

ಮಂಗಳೂರು, ಜನವರಿ,28: ಮಾರ್ಚ್ – 22, ಹೊಟ್ಟೆಗಾಗಿ ಗೇಣು ಬಟ್ಟೆಗಾಗಿ, ಯಾನ ಮೊದಲಾದ ಕನ್ನಡ ಸಿನಿಮಾಗಳನ್ನು ನಿರ್ಮಿಸಿರುವ ದುಬೈಯ ಖ್ಯಾತ ಉದ್ಯಮಿ ಹರೀಶ್ ಶೇರಿಗಾರ್ ಅವರು ಮೊದಲ ಬಾರಿಗೆ ತುಳು ಸಿನಿಮಾವನ್ನು ನಿರ್‍ಮಿಸುತ್ತಿದ್ದಾರೆ. ಸಿನಿಮಾದಲ್ಲಿ ಖ್ಯಾತ ನಟ ಅನಂತನಾಗ್ ಪ್ರಮುಖ ಪಾತ್ರದಲ್ಲಿ ಅಭಿನಯಿಸುತ್ತಿದ್ದಾರೆ. ಸಿನಿಮಾಕ್ಕೆ ದ.ಕ.ಜಿಲ್ಲೆ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಒಂದೇ ಹಂತದಲ್ಲಿ ಚಿತ್ರೀಕರಣ ನಡೆಯಲಿದೆ ಎಂದು ಚಿತ್ರದ ನಿರ್ದೇಶಕ ಕೆ. ಸೂರಜ್ ಶೆಟ್ಟಿ ತಿಳಿಸಿದರು.

ಅಕ್ಮೆ ಮೂವೀಸ್ ಇಂಟರ್‌ನ್ಯಾಷನಲ್ ಲಾಂಛನದಲ್ಲಿ ತಯಾರಾಗುತ್ತಿರುವ ದುಬೈಯ ಖ್ಯಾತ ಉದ್ಯಮಿ ಹಾಗೂ ಕನ್ನಡ ಚಲನಚಿತ್ರ ನಿರ್ಮಾಪರಾದ ಹರೀಶ್ ಶೇರಿಗಾರ್ ಮತ್ತು ಶ್ರೀಮತಿ ಶರ್ಮಿಳಾ ಶೇರಿಗಾರ್ ನಿರ್ಮಿಸುತ್ತಿರುವ ಕೆ. ಸೂರಜ್ ಶೆಟ್ಟಿ ನಿರ್ದೇಶನದ “ಇಂಗ್ಲಿಷ್” ತುಳು ಸಿನಿಮಾದ ಮಹೂರ್ತ ಸಮಾರಂಭವು ಸೋಮವಾರ ಬೆಳಗ್ಗೆ ಮಂಗಳೂರಿನ ಶರವು ಶ್ರೀ ಮಹಾಗಣಪತಿ ದೇವಸ್ಥಾನದಲ್ಲಿ ಜರಗಿತು.

ಸಮಾರಂಭದ ಬಳಿಕ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಉತ್ತಮ ಕಥಾ ಸಾರಂಶವನ್ನು ಹೋದಿರುವ “ಇಂಗ್ಲಿಷ್” ತುಳು ಸಿನಿಮಾವನ್ನು ಓರ್ವ ಉತ್ತಮ ನಿರ್ಮಾಪಕರ ಜೊತೆ ನಿರ್ಮಾಣ ಮಾಡುವುದಕ್ಕೆ ತುಂಬಾ ಸಂತೋಷವಾಗುತ್ತಿದೆ. ದುಬೈಯಲ್ಲಿ ಖ್ಯಾತ ಉದ್ಯಮಿಯಾಗಿದ್ದು, ಉತ್ತಮ ಗಾಯಕರೂ ಆಗಿರುವ ಕೊಡುಗೈ ದಾನಿ ಹರೀಶ್ ಶೇರಿಗಾರ್ ಅವರು ಈಗಾಗಲೇ ಸ್ಯಾಂಡಲ್‌ವುಡ್‍‍ನಲ್ಲಿ ಚಿತ್ರ ನಿರ್ಮಾಣದಲ್ಲಿ ತೊಡಗಿದ್ದು, ಇದೀಗ ತಮ್ಮ ಮಾತೃ ಭಾಷೆ ತುಳು ಭಾಷೆಯ ಅಬಿಮಾನದಿಂದ ತುಳು ಬಾಷೆಯಲ್ಲಿ ಚಿತ್ರ ನಿರ್ಮಾಣಕ್ಕೆ ಬಂದಿರುವುದು ತುಳು ಸಿನಿಮಾ ರಂಗಕ್ಕೆ ಶಕ್ತಿ ತುಂಬಿದಂತಾಗಿದೆ ಎಂದು ಹೇಳಿದರು.

ಸಿನಿಮಾಕ್ಕೆ ಕೃಷ್ಣ ಸಾರಥಿ ಛಾಯಾಗ್ರಹಣ ಮಾಡಲಿದ್ದಾರೆ. ಸಂಕಲನ: ಮನು ಶೇಡ್‌ಗಾರ್, ಸಂಗೀತ: ಮಣಿಕಾಂತ್ ಕದ್ರಿ, ಸಾಹಿತ್ಯ ಶಶಿರಾಜ್ ಕಾವೂರು, ಅರ್ಜುನ್ ಲೂಯಿಸ್, ಡಿಸೈನ್ ದೇವಿ ರೈ, ಸಿನಿಮಾಕ್ಕೆ ಕತೆ, ಚಿತ್ರಕತೆ, ಸಂಭಾಷಣೆ , ತಾರಾಗಣದಲ್ಲಿ ಪೃಥ್ವಿ ಅಂಬರ್, ನವ್ಯ ಪೂಜಾರಿ, ನವೀನ್‌ಡಿ ಪಡೀಲ್, ಅರವಿಂದ್ ಬೋಳಾರ್, ಭೋಜರಾಜ ವಾಮಂಜೂರು, ವಿಸ್ಮಯ ನಾಯಕ್, ದೀಪಕ್ ರೈ ಪಾಣಾಜೆ, ಸಂದೀಪ್ ಶೆಟ್ಟಿ ಮಾಣಿಬೆಟ್ಟು, ಪ್ರಸನ್ನ ಬೈಲೂರು, ರವಿರಾಮ ಕುಂಜ ಮೊದಲಾದವರು ಇದ್ದಾರೆ ಎಂದು ಸೂರಜ್ ಶೆಟ್ಟಿ ವಿವರ ನೀಡಿದರು.

ಪತ್ರಿಕಾಗೋಷ್ಠಿಯಲ್ಲಿ ಉಪಸ್ಥಿತರಿದ್ದ ಚಿತ್ರದ ನಿರ್ಮಾಪಕ ಹರೀಶ್ ಶೇರಿಗಾರ್ ಅವರು, ಚಿತ್ರದ ಬಗ್ಗೆ ಪೂರಕ ಮಾಹಿತಿಗಳನ್ನು ನೀಡಿದರು. ಶ್ರೀಮತಿ ಶರ್ಮಿಳಾ ಶೇರಿಗಾರ್, ನಾಯಕ ನಟ ಪೃಥ್ವಿ ಅಂಬರ್, ಸಂಗೀತಾ ನಿರ್ದೇಶಕ ಮಣಿಕಾಂತ್ ಕದ್ರಿ, ಕ್ಯಾಮರಮ್ಯಾನ್ ಕೃಷ್ಣ ಸಾರಥಿ, ದ್ವಿಗ್ವಿಜಯ ಹಾಗೂ ಕಲರ್ಸ್ ವಾಹಿನಿಯ ವಿನಯ್ ರಾವ್ ಮುಂತಾದವರು ಪತ್ರಿಕಾಗೋಷ್ಠಿಯಲ್ಲಿ ಉಪಸ್ಥಿತರಿದ್ದರು.

ಇಂಗ್ಲಿಷ್ ಸಿನಿಮಾದ ಕಥಾ ಸಾರಾಂಶ :

ಹೀರೋ ಮಾಲ್ ಒಂದರಲ್ಲಿ ಗೊಂಬೆ ವೇಷ ಹಾಕಿ ಕುಣಿಯುವ ಕೆಲಸ ಮಾಡುತ್ತಿರುತ್ತಾನೆ. ಅಲ್ಲಿಗೆ ಹೀರೋಯಿನ್ ತನ್ನ ಗೆಳತಿಯ ಜೊತೆ ಬರುತ್ತಿರುತ್ತಾಳೆ. ಹೀರೋಗೆ ಹೀರೋಯಿನ್ ಅನ್ನು ಕಂಡು ಇಷ್ಟವಾಗುತ್ತದೆ. ಒಂದು ದಿನ ಹೀರೋ ಹೀರೋಯಿನ್ ಬಳಿ ತನ್ನ ಪ್ರೀತಿ ವಿಷಯ ತಿಳಿಸುತ್ತಾನೆ. ಹೀರೋಹಿನ್ ಹೀರೋಗೆ ಇಂಗ್ಲಿಷ್ ಬರುವುದಿಲ್ಲವೆಂದು ತಾನು ಮದುವೆ ಆದರೆ ಇಂಗ್ಲಿಷ್ ಗೊತ್ತಿರುವವನನ್ನು ಮಾತ್ರ ಆಗುವುದೆಂದು ನಾಯಕನನ್ನು ನಿರಾಕರಿಸುತ್ತಾಳೆ. ಅಂದಿನಿಂದ ಹೀರೋ ತನ್ನ ಫ್ರೆಂಡ್ಸ್ ಜೊತೆ ಸೇರಿ ಇಂಗ್ಲಿಷ್ ಕಲಿಯಲು ಶುರು ಮಾಡುತ್ತಾನೆ. ಹೀರೋ ಕಷ್ಟಪಟ್ಟು ಇಂಗ್ಲಿಷ್ ಕಲಿಯುವುದನ್ನು ನೋಡಿ ಹೀರೋಹಿನ್‌ಗೆ ಹೀರೋನ ಮೇಲೆ ಇಷ್ಟವಾಗುತ್ತದೆ. ಇಬ್ಬರ ನಡುವೆ ಫ್ರೆಂಡ್‌ಶಿಪ್ ಶುರುವಾಗುತ್ತದೆ. ನಂತರದಲ್ಲಿ ಫ್ರೆಂಡ್‌ಶಿಪ್ ಪ್ರೀತಿಯಲ್ಲಿ ಬದಲಾಗುತ್ತದೆ. ಹೀರೋಹಿನ್ ತನ್ನ ಪ್ರೀತಿಯನ್ನು ಮನೆಯವರಲ್ಲಿ ತಿಳಿಸುತ್ತಾರೆ. ಆದರೆ ಮನೆಯವರು ಹೀರೋನನ್ನು ಒಪ್ಪಿಕೊಳ್ಳುವುದಿಲ್ಲ. ಕೊನೆಗೆ ಹೀರೋ ತನ್ನಂತೆಯೇ ಇತರರಿಗೂ ಇಂಗ್ಲಿಷ್ ಕಲಿಸಬೇಕು ಎನ್ನುವ ಉದ್ದೇಶದಿಂದ ಇಂಗ್ಲಿಷ್ ಸ್ಪೀಕಿಂಗ್ ಕ್ಲಾಸ್ ಅನ್ನು ಪ್ರಾರಂಭಿಸುತ್ತಾನೆ. ಹೀರೋಹಿನ್ ಮನೆಯವರಿಗೆ ಹೀರೋನ ಮೇಲೆ ಹೆಮ್ಮೆಯಾಗುತ್ತದೆ. ಇಬ್ಬರಿಗೂ ಮದುವೆ ಮಾಡಿಸುತ್ತಾರೆ.

ಕನ್ನಡ ಚಿತ್ರ ನಿರ್ಮಾಪಕ ಹರೀಶ್ ಶೇರಿಗಾರ್ ನಿರ್ಮಾಣದ “ಇಂಗ್ಲಿಷ್” ತುಳು ಸಿನಿಮಾಕ್ಕೆ ಮುಹೂರ್ತ

__ಸತೀಶ್ ಕಾಪಿಕಾಡ್

Comments are closed.